ಐಸಿಎಂಆರ್‌ನಿಂದ 400 ರಕ್ತ ಮಾದರಿ ಸಂಗ್ರಹ
ಜಿಲ್ಲೆಯ 10 ಸ್ಥಳಗಳಲ್ಲಿ ಸಮೀಕ್ಷಾ ಕಾರ್ಯ- ಜನರಿಂದ ಉತ್ತಮ ಸ್ಪಂದನೆ ಸಿಕ್ಕಿದ್ದಕ್ಕೆ ಅಧಿಕಾರಿಗಳಿಗೆ ಸಂತಸ
Team Udayavani, May 17, 2020, 2:45 PM IST
ಸಾಂದರ್ಭಿಕ ಚಿತ್ರ
ಚಿತ್ರದುರ್ಗ: ಕೋವಿಡ್ ವೈರಸ್ ಸಮುದಾಯದಲ್ಲಿ ಹರಡಿರಬಹುದಾದ ಸಾಧ್ಯತೆ ಕುರಿತು ಪರಿಶೀಲನೆಗಾಗಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ವತಿಯಿಂದ ಜಿಲ್ಲೆಯಲ್ಲಿ 400 ರಕ್ತದ ಮಾದರಿಗಳನ್ನು ಸಂಗ್ರಹಿಸಲಾಯಿತು.
ಶನಿವಾರ ನಡೆದ ನ್ಯಾಷನಲ್ ಸಿರೋ ಸರ್ವೆಲೆನ್ಸ್ ಫಾರ್ ಕೋವಿಡ್-19 ಸಮೀಕ್ಷೆಯಲ್ಲಿ ಜಿಲ್ಲೆಯ ಹತ್ತು ಸ್ಥಳಗಳನ್ನು ಗುರುತಿಸಿ ಮಾದರಿಗಳನ್ನು ಸಂಗ್ರಹಿಸಲಾಯಿತು. ರಾಜ್ಯದಲ್ಲಿ ಇಂತಹ ಸಮೀಕ್ಷೆಗಾಗಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಚಿತ್ರದುರ್ಗ, ಬೆಂಗಳೂರು ನಗರ ಹಾಗೂ ಕಲಬುರಗಿ ಜಿಲ್ಲೆಗಳನ್ನು ಆಯ್ಕೆ ಮಾಡಿಕೊಂಡಿತ್ತು ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾ ಧಿಕಾರಿ ಹಾಗೂ ಸಮೀಕ್ಷಾ ಕಾರ್ಯದ ನೋಡಲ್ ಅಧಿಕಾರಿ ಡಾ| ರಂಗನಾಥ್ ತಿಳಿಸಿದ್ದಾರೆ.
ಸಮೀಕ್ಷೆಗೆ ಕಂದಾಯ, ಪೊಲೀಸ್, ಆರ್‌ಡಿಪಿಆರ್ ಹಾಗೂ ಆರೋಗ್ಯ ಇಲಾಖೆಗಳು ಸಹಕಾರ ನೀಡಿದ್ದವು. ಜನರಲ್ಲಿ ಕೋವಿಡ್-19 ವೈರಸ್ ಸೋಂಕು ಕುರಿತು ಜಾಗೃತಿ ಮೂಡಿದ್ದು, ಸೋಂಕು ಹರಡದಂತೆ ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಮುದಾಯದಲ್ಲಿ ಅರಿವು ಮೂಡಿರುವುದು ಸಮೀಕ್ಷೆ ಸಂದರ್ಭದಲ್ಲಿ ಕಂಡುಬಂದಿದೆ. ವಿಶ್ವ ಆರೋಗ್ಯ ಸಂಸ್ಥೆ ಹಾಗೂ ತಂಡದ ಅಧಿಕಾರಿಗಳು ,ಸಮೀಕ್ಷಾ ಕಾರ್ಯಕ್ಕೆ ಕೈಗೊಂಡ ಸಿದ್ಧತಾ ಕ್ರಮಗಳು ಹಾಗೂ ಇಲ್ಲಿನ ವ್ಯವಸ್ಥೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ರಕ್ತ ಮಾದರಿ ಸಂಗ್ರಹಕ್ಕೆ ಐಸಿಎಂಆರ್-ಎನ್ ಐಆರ್‌ಟಿಯ ತಂಡ ಹಾಗೂ ಸ್ಥಳೀಯ ಆರೋಗ್ಯ ಕೇಂದ್ರ ಪ್ರಯೋಗಶಾಲಾ ತಂತ್ರಜ್ಞರನ್ನು ನಿಯೋಜಿಸಲಾಗಿತ್ತು. ಐಸಿಎಂಆರ್‌ನ ವಿಜ್ಞಾನಿಗಳು, ರಾಜ್ಯ ಮಟ್ಟದ ಸರ್ವೇಕ್ಷಣಾ ಧಿಕಾರಿಗಳು, ನೋಡಲ್ ಅಧಿಕಾರಿಗಳು, ವಿಶ್ವಆರೋಗ್ಯ ಸಂಸ್ಥೆಯ ಸಲಹೆಗಾರರು ಸಮೀಕ್ಷೆ ಕಾರ್ಯಚಟುವಟಿಕೆಯ ಮೇಲುಸ್ತುವಾರಿ ವಹಿಸಿದ್ದರು.ಚಿತ್ರದುರ್ಗ ತಾಲೂಕಿನ ವಡ್ಡನಹಳ್ಳಿ, ಚಳ್ಳಕೆರೆ ತಾಲೂಕಿನ ಘಟಪರ್ತಿ, ಪರಶುರಾಂಪುರ ಹಾಗೂ ಚಳ್ಳಕೆರೆ ನಗರದ ವಾರ್ಡ್ ಸಂಖ್ಯೆ 22, ಹಿರಿಯೂರು ತಾಲೂಕಿನ ಭರಮಗಿರಿ, ಹೊಳಲ್ಕೆರೆ ಪಟ್ಟಣದ ವಾರ್ಡ್ ಸಂಖ್ಯೆ 5, ಹಿರೇಕಂದವಾಡಿ, ಹೊಸದುರ್ಗ ತಾಲೂಕಿನ ತುಂಬಿನಕೆರೆ, ಹಾಗಲಕೆರೆ ಹಾಗೂ ಮೊಳಕಾಲ್ಮೂರು ತಾಲೂಕಿನ ಕಾಟನಾಯಕನಹಟ್ಟಿ ಸೇರಿದಂತೆ 10 ಸ್ಥಳಗಳಲ್ಲಿ ಮಾದರಿ ಸಂಗ್ರಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.