ಬೀದಿಯಲ್ಲಿ ಅಕ್ಕಿ ಬೇಡುತ್ತಿದ್ದ ಮಕ್ಕಳ ರಕ್ಷಣೆ
Team Udayavani, May 18, 2020, 5:57 AM IST
ಮಲ್ಪೆ: ರಾಷ್ಟ್ರೀಯ ಹೆದ್ದಾರಿ ಅಂಬಲಪಾಡಿಯಲ್ಲಿ ಊಟಕ್ಕೆ ಅಕ್ಕಿ ಕೊಡಿ ಎಂದು ಸಾರ್ವಜನಿಕರಲ್ಲಿ ಅಂಗಲಾಚುತ್ತಿದ್ದ ಇಬ್ಬರು ಬಾಲಕರನ್ನು ವಿಶು ಶೆಟ್ಟಿ ಅಂಬಲಪಾಡಿ ಅವರು ತುರ್ತು ಸಹಾಯ ನೀಡಿ ರಕ್ಷಿಸಿ ಹೆತ್ತವರಿಗೆ ಒಪ್ಪಿಸಿದ್ದಾರೆ.
ಬಾಲಕರು ನಮಗೆ ಇದುವರೆಗೆ ಉಚಿತ ಊಟ ಸಿಗುತ್ತಿತ್ತು. ಇದೀಗ ಮನೆಯಲ್ಲಿದ್ದ ಅಕ್ಕಿ ಖಾಲಿಯಾಗಿದೆ. ತಂದೆ ಮಾಡುತ್ತಿದ್ದ ಕೆಲಸ ಇನ್ನೂ ಪ್ರಾರಂಭವಾಗಲಿಲ್ಲ. ತಾಯಿಯ ಆರೋಗ್ಯ ಸರಿ ಇಲ್ಲ. ಹಾಗಾಗಿ ಮನೆಯಲ್ಲಿ ಊಟಕ್ಕೆ ಅಕ್ಕಿ ಇಲ್ಲದೆ ಉಪವಾಸ ಇರಬೇಕಾದ ಪರಿಸ್ಥಿತಿ ಒದಗಿದೆ ಅವರಲ್ಲಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ಇದಕ್ಕೆ ಸ್ಪಂದಿಸಿದ ಅವರು ಅಸಹಾಯಕ ಕುಟುಂಬಕ್ಕೆ 20 ಕೆ.ಜಿ. ಅಕ್ಕಿ ಹಾಗೂ ದಿನಸಿ ಸಾಮಗ್ರಿ ನೀಡಿ, ಬಾಲಕರನ್ನು ಹೆತ್ತವರಿಗೆ ಒಪ್ಪಿಸಿ, ಮಕ್ಕಳನ್ನು ಬೀದಿಯಲ್ಲಿ ಬೇಡಲು ಬಿಡಬೇಡಿ ಬುದ್ಧಿ ಮಾತು ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಇಂತಹ ಅಸಹಾಯಕ ಮಕ್ಕಳು ಬೀದಿಗೆ ಬೀಳುವ ಸಂಭವ ಹೆಚ್ಚಾಗಿದೆ. ಸಂಬಂಧಪಟ್ಟ ಅಧಿಕಾರಿಗಳು, ಇಲಾಖೆಯವರು ಮಕ್ಕಳು ಬೀದಿಗೆ ಇಳಿಯದಂತೆ, ಬೀಳದಂತೆ ಮಾನವೀಯ ಕ್ರಮ ಕೈಗೊಳ್ಳಬೇಕೆಂದು ಅವರು ವಿನಂತಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮತಿ ಪ್ರತಿಭಾ, ಗೀತಾ ತ್ರಯೋದಶಾವಧಾನ’ ಸಂಪನ್ನ
Adani: ಅದಾನಿ ಫೌಂಡೇಶನ್ 17 ಲಕ್ಷ ರೂಪಾಯಿ ಕಾಮಗಾರಿಗೆ ಗುದ್ದಲಿ ಪೂಜೆ
Udupi: ಬಚ್ಚಿಟ್ಟ ಮದುವೆ; ಗಂಡನ ಗುಟ್ಟು-ರಟ್ಟು; ಪತಿ ಸಹಿತ 6ಮಂದಿ ವಿರುದ್ಧ ಪ್ರಕರಣ ದಾಖಲು
Padubidri:15 ಲಕ್ಷ ರೂ. ಪಡೆದು ಮರಳಿಸದೆ ಜೀವಬೆದರಿಕೆ; ಪ್ರಕರಣ ದಾಖಲು
Kudremukh: ಹೊತ್ತಿ ಉರಿದ ಟೆಂಪೋದಲ್ಲಿದ್ದದ್ದು ಕಟಪಾಡಿ ಮೂಲದ 8 ಕುಟುಂಬಗಳು
MUST WATCH
ಹೊಸ ಸೇರ್ಪಡೆ
ಮದುವೆಯ ಮೊದಲ ರಾತ್ರಿಯೇ ಪತಿಗೆ ಹಾಲಿನಲ್ಲಿ ಮತ್ತು ಬರುವ ಔಷಧಿ ಹಾಕಿ ನಗನಗದು ದೋಚಿದ ಪತ್ನಿ
Sandalwood: ʼನೀ ನಂಗೆ ಅಲ್ಲವಾ’ ಚಿತ್ರಕ್ಕೆ ಮುರಳಿ ಸಾಥ್
Leh; ಐಸ್ ಹಾಕಿ ಲೀಗ್ ದ್ವಿತೀಯ ಆವೃತ್ತಿಯ ಟ್ರೋಫಿ- ಜೆರ್ಸಿ ಅನಾವರಣ
NZvsENG: 147 ವರ್ಷಗಳಲ್ಲೇ ಮೊದಲ ಬಾರಿ..; ಹೊಸ ದಾಖಲೆ ಬರೆದ ಕೇನ್ ವಿಲಿಯಮ್ಸನ್
Siruguppa: ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಮಹಿಳೆಯ ಶವ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.