ಇತರ ರಾಜ್ಯಗಳಿಂದ ಕೇರಳ ರಾಜ್ಯ ಪ್ರವೇಶ

ಶೇ. 79.45 ಮಂದಿಗೆ ಪಾಸ್‌ ಮಂಜೂರು: ಜಿಲ್ಲಾಧಿಕಾರಿ

Team Udayavani, May 18, 2020, 5:40 AM IST

ಇತರ ರಾಜ್ಯಗಳಿಂದ ಕೇರಳ ರಾಜ್ಯ ಪ್ರವೇಶ

ಕಾಸರಗೋಡು: ಇತರ ರಾಜ್ಯಗಳಿಂದ ಕೇರಳ ರಾಜ್ಯ ಪ್ರವೇಶ ನಡೆಸುವ ನಿಟ್ಟಿನಲ್ಲಿ ಕಾಸರಗೋಡು ಜಿಲ್ಲೆಯಿಂದ ಈ ವರೆಗೆ ಶೇ. 79.45 ಮಂದಿಗೆ ಪಾಸ್‌ ಮಂಜೂರು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ ಬಾಬು ತಿಳಿಸಿದರು.

ಶನಿವಾರ ಸಂಜೆ ವರೆಗೆ 7,617 ಅರ್ಜಿಗಳು ಲಭಿಸಿದ್ದು, 6,052 ಮಂದಿಗೆ ಪಾಸ್‌ ಮಂಜೂರು ಮಾಡಲಾಗಿದೆ. ಈ ಮೂಲಕ ಒಟ್ಟು ಅರ್ಜಿದಾರರಲ್ಲಿ ಶೇ. 79.45 ಮಂದಿಗೆ ಪಾಸ್‌ ಮಂಜೂರಾಗಿದೆ ಎಂದವರು ಹೇಳಿದರು.

ಅರ್ಜಿದಾರರಿಗೆ ಕ್ವಾರಂಟೈನ್‌ ಕೇಂದ್ರಗಳ ಲಭ್ಯತೆಗನುಗುಣವಾಗಿ ಪಾಸ್‌ ವಿತರಣೆ ನಡೆಸಲಾಗುತ್ತಿದೆ. ಒಬ್ಬರು ಅರ್ಜಿ ಸಲ್ಲಿಸಿದ ತತ್‌ಕ್ಷಣವೇ ಆಯಾ ಸ್ಥಳೀಯಾಡಳಿತ ಸಂಸ್ಥೆಗಳ ಪದಾಧಿಕಾರಿಗಳು ಅರ್ಜಿದಾರರ ಮನೆಯಲ್ಲಿ ಯಾ ಸರಕಾರಿ ಕ್ವಾರೆಂಟೈನ್‌ ಕೇಂದ್ರದಲ್ಲಿ ಸೌಲಭ್ಯವಿದೆಯೇ ಎಂಬ ಬಗ್ಗೆ ಖಚಿತಪಡಿಸಿ, ದಾಖಲುಪಡಿಸಿ ಉಪ ಜಿಲ್ಲಾಧಿಕಾರಿ ಅಥವಾ ಹೆಚ್ಚುವರಿ ದಂಡನಾಧಿಕಾರಿಗೆ ವರದಿ ಸಲ್ಲಿಸುವರು. ಈ ವರದಿಯ ಹಿನ್ನೆಲೆಯಲ್ಲಿ ಪಾಸ್‌ ಮಂಜೂರು ಮಾಡಲಾಗುವುದು. ಮಿತಿಗಳಿದ್ದೂ ಗರಿಷ್ಠ ಮಟ್ಟದಲ್ಲಿ ಪಾಸ್‌ ಮಂಜೂರು ಮಾಡುವಲ್ಲಿ ಕಾಸರಗೋಡು ಜಿಲ್ಲೆ 6ನೇ ಸ್ಥಾನ ಹೊಂದಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಮಂಜೇಶ್ವರ ಚೆಕ್‌ಪೋಸ್ಟ್‌
ಮೂಲಕ 521 ಮಂದಿ ಕೇರಳ ಪ್ರವೇಶ
ಕಾಸರಗೋಡು: ಮಂಜೇಶ್ವರ ಚೆಕ್‌ಪೋಸ್ಟ್‌ ಮೂಲಕ ಶನಿವಾರ 521 ಮಂದಿ ಕೇರಳ ಪ್ರವೇಶ ಮಾಡಿದ್ದಾರೆ.ಈ ಚೆಕ್‌ ಪೋಸ್ಟ್‌ ಮೂಲಕ ಈ ವರೆಗೆ ಒಟ್ಟು 10,433 ಮಂದಿ ಕೇರಳಕ್ಕೆ ಆಗಮಿಸಿದ್ದಾರೆ. 26,560 ಮಂದಿಗೆ ಪಾಸ್‌ ಮಂಜೂರು ಆಗಿದೆ. ಒಟ್ಟು 33,207 ಮಂದಿ ಪಾಸ್‌ಗೆ ಅರ್ಜಿ ಸಲ್ಲಿಸಿದ್ದರು. ಕಾಸರಗೋಡು ಜಿಲ್ಲೆಯವರಾದ 2,436 ಮಂದಿ ಈ ಚೆಕ್‌ಪೋಸ್ಟ್‌ ಮೂಲಕ ಊರಿಗೆ ಆಗಮಿಸಿದ್ದಾರೆ. 6,048 ಮಂದಿ ಕಾಸರಗೋಡು ಜಿಲ್ಲೆಯವರಿಗೆ ಪಾಸ್‌ ಮಂಜೂರು ಮಾಡಲಾಗಿದೆ. ಒಟ್ಟು 7,607 ಮಂದಿ ಕಾಸರಗೋಡು ಜಿಲ್ಲೆಯವರು ಪಾಸ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-madikeri

Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ

8-madikeri

Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು

Arrest

Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ

Kumbale: ವರ್ಕಾಡಿ ಪ್ಲೈವುಡ್‌ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ

Kumbale: ವರ್ಕಾಡಿ ಪ್ಲೈವುಡ್‌ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ

1

Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.