24X7 ಬ್ಯೂಸಿ ಈ ಚೆಕ್‌ಪೋಸ್ಟ್

ಕೊಗನ್ನೊಳ್ಳಿ ಚೆಕ್‌ಪೋಸ್ಟ್‌ನಿಂದ ರಾಜ್ಯಕ್ಕೆ ಪ್ರತಿದಿನ ಸುಮಾರು 15 ಸಾವಿರ ಜನರ ಪ್ರವೇಶ

Team Udayavani, May 18, 2020, 6:31 AM IST

24X7 ಬ್ಯೂಸಿ ಈ ಚೆಕ್‌ಪೋಸ್ಟ್

ಚಿಕ್ಕೋಡಿ: ಗಡಿಯಲ್ಲಿ ಜನರ ಸಂಚಾರ ನಿಯಂತ್ರಿಸಲು ಕರ್ನಾಟಕ-ಮಹಾರಾಷ್ಟ್ರದ ಗಡಿ ಚೆಕ್‌ಪೋಸ್ಟ್‌ ದಲ್ಲಿ ರಾಜ್ಯದ ವಿವಿಧ ಇಲಾಖೆ ಅಧಿಕಾರಿಗಳು ಠಿಕಾಣಿ ಹೂಡಿದ್ದು, ದಿನದ 24 ಗಂಟೆಗಳ ಕಾಲ ಕರ್ತವ್ಯ ನಿರ್ವಹಿಸುವ ಮೂಲಕ ಕೋವಿಡ್ ವಿರುದ್ಧದ ಹೋರಾಟದಲ್ಲಿ ಅವಿರತ ಸೇವೆ ಸಲ್ಲಿಸುತ್ತ ಗಡಿ ಭಾಗದ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ.

ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಕೋವಿಡ್ ಹರಡಬಾರದು ಎನ್ನುವ ಉದ್ದೇಶದಿಂದ ಕಳೆದ ಮಾರ್ಚ್‌ 24 ರಿಂದ ಕರ್ನಾಟಕ-ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ನಿಪ್ಪಾಣಿ ತಾಲೂಕಿನ ಕೊಗನ್ನೊಳ್ಳಿ ಚೆಕ್‌ಪೋಸ್ಟ್‌ದಲ್ಲಿ ಕಂದಾಯ, ಪೊಲೀಸ್‌, ಆರೋಗ್ಯ, ಶಿಕ್ಷಣ, ಸ್ಥಳೀಯ ಸಂಸ್ಥೆಗಳು ಸೇರಿ ಒಂದು ಸಾವಿರಕ್ಕೂ ಅಧಿಕ ಅಧಿಕಾರಿಗಳು ಹಗಲಿರುಳು ಕರ್ತವ್ಯದಲ್ಲಿ ತೊಡಗಿಕೊಂಡಿದ್ದಾರೆ.

ಬೆಳಗಾವಿ ಜಿಲ್ಲೆಯ 300 ಜನ ಕಂದಾಯ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿಗಳು, 350 ಪೊಲೀಸ್‌ ಇಲಾಖೆ ಸಿಬ್ಬಂದಿಗಳು ಹಾಗೂ ಪೌರಕಾರ್ಮಿಕರು ಇದ್ದಾರೆ. ಆವರೊಂದಿಗೆ ರಾಜ್ಯದ ಧಾರವಾಡ, ಬಾಗಲಕೋಟ, ಹಾವೇರಿ, ಕೊಪ್ಪಳ, ಮಂಡ್ಯ, ಬೆಂಗಳೂರು, ಹಾಸನ, ದಾವಣಗೇರಿ, ತುಮಕೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಿಂದ ಓರ್ವ ನೋಡಲ್‌ ಅಧಕಾರಿ ಹಾಗೂ ಸಹಾಯಕರಾಗಿ ಇಬ್ಬರಂತೆ ಒಟ್ಟು 100 ಕ್ಕೂ ಅಧಿಕ ಅಧಿ ಕಾರಿಗಳು ಕೊಗನ್ನೊಳ್ಳಿ ಚೆಕ್‌ ಪೋಸ್ಟ್‌ದಲ್ಲಿ ಸತತ 24 ಗಂಟೆಗಳ ಕಾಲ ಸೇವೆಯಲ್ಲಿ ನಿರತರಾಗಿದ್ದಾರೆ.

ದೇಶದ ಮಹಾರಾಷ್ಟ್ರ, ರಾಜಸ್ತಾನ, ಮಧ್ಯಪ್ರದೇಶ, ಗುಜರಾತ, ಛತ್ತಿಸಘಡ, ಬಿಹಾರ ಮುಂತಾದ ರಾಜ್ಯಗಳಿಂದ ಜನರು ರಾಷ್ಟ್ರೀಯ ಹೆದ್ದಾರಿ ನಾಲ್ಕರ ಮೂಲಕ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಸರ್ಕಾರದ ಸೇವಾ ಸಿಂಧು ಆ್ಯಪ್‌ದಲ್ಲಿ ಅನುಮತಿ ಪಡೆದು ಪಾಸ್‌ ಇದ್ದವರು ಮಾತ್ರ ರಾಜ್ಯದ ಒಳಗೆ ಪ್ರವೇಶ ಮಾಡಬಹುದೆಂದು ಸರ್ಕಾರದ ಕಟ್ಟುನಿಟ್ಟಿನ ಆದೇಶವಾಗಿದೆ.

ದಿನಕ್ಕೆ 500 ರಿಂದ 800 ವಾಹನಗಳ ಆಗಮನ: ಲಾಕ್‌ಡೌನ್‌ ಸಡಿಲಿಕೆ ಹಿನ್ನೆಲೆಯಲ್ಲಿ ನೆರೆ ರಾಜ್ಯಗಳಿಂದ ರಾಜ್ಯಕ್ಕೆ ಪ್ರತಿದಿನ ಐದು ನೂರರಿಂದ ಎಂಟು ನೂರು ವಾಹನಗಳು ಬರುತ್ತಿವೆ. ಶುಕ್ರವಾರ ಒಂದೇ ದಿನ 800 ಕ್ಕೂ ಹೆಚ್ಚಿನ ವಾಹನಗಳು ರಾಜ್ಯಕ್ಕ ಆಗಮಿಸಿದ್ದು ಸುಮಾರು 15 ಸಾವಿರ ಜನ ಹೊರ ರಾಜ್ಯಗಳಿಂದ ರಾಜ್ಯಕ್ಕೆ ಬಂದಿದ್ದಾರೆ. ವಾಹನಗಳ ತಪಾಸಣೆ, ವಾಹನದಲ್ಲಿ ಇರುವ ಜನರ ಆರೋಗ್ಯ ವಿಚಾರಣೆ, ಪಾಸ್‌ ಹೀಗೆ ಹಲವು ದಾಖಲೆಗಳ ಪರಿಶೀಲನೆಗಾಗಿ ಚೆಕ್‌ ಪೋಸ್ಟದಲ್ಲಿ ಅಧಿಕಾರಿಗಳು ಹಗಲು-ರಾತ್ರಿ ಎನ್ನದೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಊಟ ಹಾಗೂ ವಸತಿ ವ್ಯವಸ್ಥೆ: ಚೆಕ್‌ ಪೋಸ್ಟ್‌ದಲ್ಲಿ ಕರ್ತವ್ಯ ನಿರ್ವಹಿಸಲು ಬಂದಿರುವ ಎಲ್ಲ ಅಧಿಕಾರಿ ವರ್ಗದವರಿಗೆ ಜಿಲ್ಲಾಡಳಿತ ಬೆಳಗ್ಗೆ ಚಹಾ, ಊಪಾಹಾರ, ಮಧ್ಯಾಹ್ನ ಮತ್ತು ರಾತ್ರಿ ಊಟದ ವ್ಯವಸ್ಥೆ ಕಲ್ಪಿಸಿದೆ. ಚಿಕ್ಕೋಡಿ ಹಾಗೂ ನಿಪ್ಪಾಣಿ ನಗರಗಳಲ್ಲಿ ವಸತಿ ವ್ಯವಸ್ಥೆ ಕಲ್ಪಿಸಿದೆ. ಹೊರ ರಾಜ್ಯಗಳಿಂದ ಬಂದಿರುವ ಜನರಿಗೂ ಸರ್ಕಾರ ಊಟದ ವ್ಯವಸ್ಥೆ ಮಾಡುತ್ತಿದೆ.

ಮಾದರಿ ಚೆಕ್‌ಪೋಸ್ಟ್‌: ಮೇ 3 ರಿಂದಚೆಕ್‌ ಪೋಸ್ಟ್‌ದಲ್ಲಿ ಜಿಲ್ಲಾಡಳಿತ ಹೆಚ್ಚಿನ ಸಿಬ್ಬಂದಿಗಳನ್ನು ನೇಮಿಸಿದೆ. ಸರ್ಕಾರ ಕೊಗನ್ನೊಳ್ಳಿ ಚೆಕ್‌ಪೋಸ್ಟ್‌ನ್ನು ಮಾದರಿ ಚೆಕ್‌ ಪೋಸ್ಟ್‌ ಎಂದು ಬಿಂಬಿಸಿರುವುದು ಮತ್ತಷ್ಟು ಉತ್ಸಾಹದಿಂದ ಕೆಲಸ ಮಾಡಲು ಪ್ರೇರೇಪಿಸಿದೆ ಎಂದು ಅಧಿಕಾರಿಗಳು ಸಂತಸ ವ್ಯಕ್ತಪಡಿಸಿದರು.

ಎನ್‌ಎಚ್‌ 4 ಕರ್ನಾಟಕ-ಮಹಾರಾಷ್ಟ್ರ ಗಡಿಯ ಕೊಗನ್ನೊಳ್ಳಿ ಚೆಕ್‌ಪೋಸ್ಟ್‌ದಲ್ಲಿ ಕೊಪ್ಪಳ ಜಿಲ್ಲೆಯಿಂದ ನೋಡಲ್‌ ಅಧಿಕಾರಿಯಾಗಿ ಬಂದಿದ್ದು, ಇಲ್ಲಿಯ ಜಿಲ್ಲಾಡಳಿತ ಜಿಲ್ಲೆಗೊಂದು ಪ್ರತ್ಯೇಕ ಕೌಂಟರ್‌ ಮಾಡಿ ಜನರಿಗೆ ಅನಾನುಕೂಲವಾಗದಂತೆ ಕ್ರಮ ಕೈಗೊಂಡಿದೆ. ವಿವಿಧ ಜಿಲ್ಲೆಗಳ ಅಧಿಕಾರಿಗಳಿಗೂ ಉತ್ತಮ ಊಟ, ವಸತಿ ವ್ಯವಸ್ಥೆ ಕಲ್ಪಿಸಿದೆ. -ತಿರುಮಲರಾವ್‌ ಕುಲಕರ್ಣಿ, ಕಾರ್ಯನಿರ್ವಾಹಕ ಅಭಿಯಂತರರು ಲೋಕೋಪಯೋಗಿ ಇಲಾಖೆ, ಕೊಪ್ಪಳ

ಬೆಳಗಾವಿ ಜಿಲ್ಲೆಯ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ನೆರೆ ಜಿಲ್ಲೆಗಳಿಂದ ಬಂದಿರುವ ಅಧಿಕಾರಿಗಳು ಸತತ 24 ಗಂಟೆಗಳ ಕಾಲ ಕೊಗನ್ನೊಳ್ಳಿ ಚೆಕ್‌ ಪೋಸ್ಟ್‌ದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಲ್ಲರಿಗೂ ಊಟ, ವಸತಿ, ಗ್ಲೌಸ್‌, ಮಾಸ್ಕ, ಸ್ಯಾನಿಟೈಜರ ಕೊಡಲಾಗಿದೆ. ಇಡೀ ರಾಜ್ಯದಲ್ಲಿ ಮಾದರಿ ಚೆಕ್‌ಪೋಸ್ಟ್‌ ಎಂದು ಬಿಂಬಿತವಾಗಿದೆ. -ರವೀಂದ್ರ ಕರಲಿಂಗನ್ನವರ, ಎಸಿ, ಚಿಕ್ಕೋಡಿ.

 

ಮಹಾದೇವ ಪೂಜೇರಿ

ಟಾಪ್ ನ್ಯೂಸ್

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

ಬೆಳಗಾವಿ:ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ

ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.