ಕೊಪ್ಪಳಕರವಾಡಿಯಲ್ಲಿ ಕ್ವಾರಂಟೈನ್ ಕೇಂದ್ರಕ್ಕೆ ವಿರೋಧ
Team Udayavani, May 18, 2020, 8:29 AM IST
ಕುಮಟಾ: ಜನವಸತಿ ಪ್ರದೇಶವಾದ ಪಟ್ಟಣದ ಕೊಪ್ಪಳಕರವಾಡಿಯ ದೇವರಾಜ ಅರಸು ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ಕ್ವಾರಂಟೈನ್ ಕೇಂದ್ರ ತೆರೆದಿರುವುದು ಸ್ಥಳೀಯರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕೊರೊನಾ ಹರಡುವುದನ್ನು ತಡೆಯಲು ಲಾಕ್‌ಡೌನ್ ಜಾರಿ ಮಾಡಲಾಗಿದೆ. ಪರ ಜಿಲ್ಲೆ ಅಥವಾ ರಾಜ್ಯಗಳಿಂದ ಆಗಮಿಸುವವರು 14 ದಿನ ಕ್ವಾರಂಟೈನ್‌ನಲ್ಲಿರುವುದು ಕಡ್ಡಾಯವಾಗಿದೆ.
ಅದರಂತೆ ತಾಲೂಕು ಆಡಳಿತ ಸರ್ಕಾರಿ ಕಟ್ಟಡಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳ ಕಟ್ಟಡಗಳನ್ನು ಕ್ವಾರಂಟೈನ್ ಕೇಂದ್ರವನ್ನಾಗಿಸಿದೆ. ಅದರಂತೆ ಪಟ್ಟಣದ ಕೊಪ್ಪಳಕರವಾಡಿಯ ದೇವರಾಜ ಅರಸು ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ತೆರೆಯಲಾದ ಕ್ವಾರಂಟೈನ್ ಕೇಂದ್ರಕ್ಕೆ ಸ್ಥಳೀಯರ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಕೊಪ್ಪಳಕರವಾಡಿಯ ವಸತಿ ನಿಲಯವು ಜನವಸತಿ ಪ್ರದೇಶದಲ್ಲಿದೆ.
ಸರಿ ಸುಮಾರು 500 ಮನೆಗಳಿವೆ. 2 ಸಾವಿರಕ್ಕೂ ಅಧಿಕ ಜನಸಂಖ್ಯೆಯಿದೆ. ಇಂಥ ಪ್ರದೇಶದಲ್ಲಿ ಕ್ವಾರಂಟೈನ್ ಕೇಂದ್ರ ಸ್ಥಾಪಿಸುವ ಮೊದಲು ಸ್ಥಳೀಯರ ಅಭಿಪ್ರಾಯ ಕೇಳಲಿಲ್ಲ. ಈ ಭಾಗದಲ್ಲಿ ಬಹುತೇಕರು ಬಡ ಮತ್ತು ಹಿಂದುಳಿದ ವರ್ಗದವರಾಗಿದ್ದಾರೆ. ದಿನನಿತ್ಯ ದುಡಿದು ಜೀವನ ಸಾಗಿಸುವ ಈ ಭಾಗದ ಜನರು ಇತ್ತೀಚೆಗಷ್ಟೆ ಕೆಲಸಕ್ಕೆ ಹೋಗಲು ಆರಂಭಿಸಿದ್ದಾರೆ. ಕ್ವಾರಂಟೈನ್ ಕೇಂದ್ರದಲ್ಲಿರುವವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡರೆ, ಸ್ಥಳೀಯರಲ್ಲಿ ಆತಂಕ ಉಂಟಾಗುತ್ತದೆ.
ಅಲ್ಲದೇ ಈ ಭಾಗವನ್ನು ಸೀಲ್‌ಡೌನ್ ಮಾಡುವುದರಿಂದ ಸ್ಥಳೀಯರು ಕೆಲಸಕ್ಕೆ ಹೋಗಲಾಗದೇ ತೀವ್ರ ಸಂಕಷ್ಟಕ್ಕೊಳಗಾಗುತ್ತಾರೆ. ಹಾಗಾಗಿ ಕ್ವಾರಂಟೈನ್ ಕೇಂದ್ರವನ್ನು ಗ್ರಾಮೀಣ ಭಾಗದಲ್ಲಿ ಅಥವಾ ಜನವಸತಿ ಪ್ರದೇಶದಿಂದ ದೂರದಲ್ಲಿ ಸ್ಥಾಪಿಸುವುದು ಉತ್ತಮ ಎಂಬ ಅಭಿಪ್ರಾಯವನ್ನು ಕೊಪ್ಪಳಕರವಾಡಿಯ ಸ್ಥಳೀಯರಾದ ರಾಜು ನಾಯ್ಕ ಸೇರಿದಂತೆ ಇತರರು ವ್ಯಕ್ತಪಡಿಸಿದರು. ಕ್ವಾರಂಟೈನ್ ಕೇಂದ್ರವನ್ನು ಶೀಘ್ರದಲ್ಲೇ ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Dandeli: ಸಾರಿಗೆ ಬಸ್ಸಿನಲ್ಲೇ ಪ್ರಯಾಣಿಕನಿಗೆ ಹೃದಯಾಘಾತ… ಆಸ್ಪತ್ರೆ ಮಾರ್ಗದಲ್ಲಿ ಮೃತ್ಯು
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Dandeli: ವಕ್ಫ್ ಮಂಡಳಿ ಮತ್ತು ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ
Dandeli: ನಗರಸಭೆಯ ಜವಾನನನ್ನು ನಿಂದಿಸಿರುವುದರ ವಿರುದ್ಧ ನಗರ ಸಭೆಯ ಪೌರಾಯುಕ್ತರಿಗೆ ದೂರು
MUST WATCH
ಹೊಸ ಸೇರ್ಪಡೆ
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.