ಕ್ವಾರಂಟೈನ್ ನಲ್ಲಿಇರುವವರು ಹೊರಗೆ ಓಡಾಡಿದರೆ ಕ್ರಿಮಿನಲ್ ಕೇಸ್: ಜಿಲ್ಲಾಧಿಕಾರಿ ಎಚ್ಚರಿಕೆ
Team Udayavani, May 18, 2020, 1:46 PM IST
ಉಡುಪಿ: ಅನ್ಯ ದೇಶಗಳಿಂದ, ಅನ್ಯ ರಾಜ್ಯಗಳಿಂದ ಉಡುಪಿ ಜಿಲ್ಲೆಗೆ ಬಂದು ಇಲ್ಲಿ ಕ್ವಾರಂಟೈನ್ ನಲ್ಲಿ ಇರುವ ಜನರು ನಿಯಮ ಮೀರಿ ಹೊರಗೆ ಓಡಾಡಿದಲ್ಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹಾಕಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ. ತಮ್ಮ ಫೇಸ್ ಬುಕ್ ಖಾತೆಯಲ್ಲಿ ಈ ಮಾಹಿತಿ ನೀಡಿರುವ ಅವರು, ಜಿಲ್ಲೆಯಲ್ಲಿ ಇದುವರೆಗೆ ಆರು ಸಾವಿರಕ್ಕೂ ಹೆಚ್ಚು ಮಂದಿ ಕ್ವಾರಂಟೈನ್ ನಲ್ಲಿದ್ದಾರೆ. ಕೆಲವು ಕಡೆ ಕ್ವಾರಂಟೈನ್ ನಲ್ಲಿ ಇರುವವರು ಹೊರಗೆ ಸುತ್ತಾಡುತ್ತಿದ್ದಾರೆ ಎಂಬ ಮಾಹಿತಿ ಇದೆ. ಹಾಗೆ ಒಂದು ವೇಳೆ ಕಂಡುಬಂದಲ್ಲಿ ಮುಲಾಜಿಲ್ಲದೆ ಅವರ ಮೇಲೆ ಸೆಕ್ಷನ್ 188ರ ಅನುಸಾರ ಕ್ರಿಮಿನಲ್ ಮೊಕದ್ದಮೆ ಹಾಕಲಾಗುವುದು ಎಂದಿದ್ದಾರೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Kollywood: ಯೂಟ್ಯೂಬ್ ವಿಮರ್ಶೆ ಬ್ಯಾನ್ ಮಾಡಲು ತಮಿಳು ನಿರ್ಮಾಪಕರ ಸಂಘ ಆಗ್ರಹ
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Tulsi Health Benefits: ತುಳಸಿ ಗಿಡದ ಔಷಧೀಯ ಗುಣಗಳ ಮಾಹಿತಿ ಇಲ್ಲಿವೆ…
Panaji: ಗೋವಾಕ್ಕೆ ಬರುತ್ತಿದ್ದ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ