ಕೃಷಿ ಚಟುವಟಿಕೆಗೆ ಎತ್ತುಗಳ ಕೊರತೆ

ಲಾಕ್‌ಡೌನ್‌ನ ಆವಾಂತರ-ಅನ್ನದಾತನ ಪರದಾಟ

Team Udayavani, May 18, 2020, 4:17 PM IST

ಕೃಷಿ ಚಟುವಟಿಕೆಗೆ ಎತ್ತುಗಳ ಕೊರತೆ

ಸಾಂದರ್ಭಿಕ ಚಿತ್ರ

ಹಾವೇರಿ: ವರ್ಷವಿಡೀ ಒಂದಲ್ಲ ಒಂದು ಸಮಸ್ಯೆಯ ಸುಳಿಯಲ್ಲಿ ಸಿಲುಕುವ ಅನ್ನದಾತನಿಗೆ ಈ ಬಾರಿಯ ಮುಂಗಾರು ಹಂಗಾಮಿನ ಕೃಷಿಗೆ ಯೋಗ್ಯ ಎತ್ತುಗಳು ಸಿಗದೇ ಪರದಾಡುವ ಪರಿಸ್ಥಿತಿ ಎದುರಾಗಿದೆ. ಇದು ಲಾಕ್‌ಡೌನ್‌ ಸೃಷ್ಟಿಸಿದ ಆವಾಂತರಗಳಲ್ಲೊಂದಾಗಿದೆ.

ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ವಿಧಿಸಿದ ಲಾಕ್‌ಡೌನ್‌ನಿಂದಾಗಿ ಎತ್ತುಗಳ ಸಂತೆ ನಡೆದಿಲ್ಲ. ಹೀಗಾಗಿ ರೈತರು ಯೋಗ್ಯ ಎತ್ತುಗಳನ್ನು ಖರೀದಿಸಲಾಗದೆಈಗ ಪರಿತಪಿಸುವಂತಾಗಿದೆ. ಆದ್ದರಿಂದ ಈ ಬಾರಿ ರೈತರು ಕೃಷಿ ಚಟುವಟಿಕೆಗೆ ಯಂತ್ರಗಳಿಗೇ ಹೆಚ್ಚು ಮೊರೆ ಹೋಗುವುದು ಅನಿವಾರ್ಯವಾಗಿದೆ.

ಸಾಮಾನ್ಯವಾಗಿ ರೈತರು ಮುಂದಿನ ಹಂಗಾಮಿನ ಕೃಷಿ ಚಟುವಟಿಕೆಗೆ ಬೇಕಾದ ಎತ್ತುಗಳನ್ನು ಹೊಸ ವರ್ಷ ಯುಗಾದಿ ಸಮಯದಲ್ಲಿಯೇ ಜಾನುವಾರು ಸಂತೆಗೆ ಹೋಗಿ ಖರೀದಿಸುತ್ತಾರೆ. ಅವುಗಳನ್ನು ಕೃಷಿ ಚಟುವಟಿಕೆಗೆ ಬಳಸಿಕೊಂಡು ಮುಂದಿನ ಹಂಗಾಮಿನ ವೇಳೆಗೆ ಅದು ಬಲಿಷ್ಠವಾಗಿದ್ದರೆ ಮತ್ತೆ ಕೃಷಿ ಚಟುವಟಿಕೆಗೆ ಬಳಸಿಕೊಳ್ಳುತ್ತಾರೆ. ದುರ್ಬಲವಾಗಿದ್ದರೆ ಅವುಗಳನ್ನು ಮಾರಿ ಇಲ್ಲವೇ ಗೋಶಾಲೆಗೆ ಬಿಟ್ಟು ಹೊಸ ಎತ್ತುಗಳನ್ನು ಖರೀದಿಸುವುದು ವಾಡಿಕೆ. ಉತ್ತರಕರ್ನಾಟಕ ಭಾಗದಲ್ಲಿ ಪ್ರಸಿದ್ಧಿ ಪಡೆದಿರುವ ಹಾವೇರಿಯ ಜಾನುವಾರು ಸಂತೆ ಲಾಕ್‌ಡೌನ್‌ ಕಾರಣದಿಂದಾಗಿ ಈ ಬಾರಿ ನಡೆಯಲೇ ಇಲ್ಲ. ಹೀಗಾಗಿ ಅನೇಕ ರೈತರಿಗೆ ಉಳುಮೆಗೆ ಯೋಗ್ಯ ಎತ್ತುಗಳನ್ನು ಖರೀದಿಸಲು ಆಗಿಲ್ಲ. ಇನ್ನು ಕೆಲವರು ಪರಿಚಯಸ್ಥರ ಮನೆಗೇ ಹೋಗಿ ತಮಗೆ ಬೇಕಾದ ಎತ್ತುಗಳನ್ನು ಖರೀದಿಸಿದ್ದಾರಾದರೂ ಅವರ ಪ್ರಮಾಣ ತೀರಾ ಕಡಿಮೆ. ಹೀಗಾಗಿ ಯೋಗ್ಯ ಎತ್ತುಗಳು ಇಲ್ಲದೇ ಈ ಬಾರಿ ಹೊಲಕ್ಕೆ ಕಾಲಿಡುವ ಪರಿಸ್ಥಿತಿ ಅನ್ನದಾತರದ್ದಾಗಿದೆ.

ಇಂದಿನ ಯಾಂತ್ರೀಕೃತ ಜಗತ್ತಿನಲ್ಲಿ ಕೃಷಿ ಕ್ಷೇತ್ರವೂ ಹಿಂದೆ ಬಿದ್ದಿಲ್ಲ. ಇಲ್ಲಿಯೂ ಎಲ್ಲದಕ್ಕೂ ಯಂತ್ರಗಳನ್ನು ಬಳಸಲಾಗುತ್ತಿದೆ. ಆದರೆ, ಯಾಂತ್ರಿಕೃತ ಕೃಷಿ ಬಹುಸಂಖ್ಯಾತ ಸಣ್ಣ, ಅತಿ ಸಣ್ಣ ಹಾಗೂ ಮಧ್ಯಮ ವರ್ಗದ ರೈತರಿಗೆ ಆರ್ಥಿಕ ಹೊರೆಯಾಗುತ್ತದೆ. ಆದ್ದರಿಂದ ರೈತರು ಉಳುಮೆ, ಬಿತ್ತನೆ, ಕಟಾವು ಸೇರಿದಂತೆ ಎಲ್ಲದಕ್ಕೂ ಎತ್ತು ಹಾಗೂ ಮಾನವಶಕ್ತಿಯನ್ನೇ ಅವಲಂಬಿಸಿಕೊಂಡೇ ಬಂದಿದ್ದಾರೆ. ಮನೆಯಲ್ಲಿ ಒಂದು ಜೊತೆ ಎತ್ತುಗಳಿದ್ದರೆ ಅವುಗಳನ್ನು ವರ್ಷಪೂರ್ತಿಯಾಗಿ ಎಲ್ಲ ಕೃಷಿ ಚಟುವಟಿಕೆಗೆ ಬಳಸಿಕೊಳ್ಳಲು ಅನುಕೂಲವಾಗುತ್ತದೆ. ಜತೆಗೆ ಪರೋಕ್ಷವಾಗಿ ಸಾಂಪ್ರದಾಯಿಕ ಸಹಜ ಕೃಷಿಗೂ ಪುಷ್ಠಿ ನೀಡಿದಂತಾಗುತ್ತದೆ. ಆದರೆ, ಈ ಬಾರಿ ಕೃಷಿಗೆ ಯೋಗ್ಯ ಎತ್ತುಗಳು ಸಮರ್ಪಕ ಪ್ರಮಾಣದಲ್ಲಿ ಸಿಗದೆ ಇರುವುದು ರೈತರಿಗೆ ಹೊಸ ಸಮಸ್ಯೆಯಾಗಿ ಕಾಡುತ್ತಿದೆ.

ಬಾಡಿಗೆ ದುಬಾರಿ: ಟ್ರ್ಯಾಕ್ಟರ್‌ ಸೇರಿದಂತೆ ಇತರ ಕೃಷಿ ಯಂತ್ರೋಪಕರಣಗಳು ಬಾಡಿಗೆ ಆಧಾರದಲ್ಲಿ ಅಲ್ಲಲ್ಲಿ ಸಿಗುತ್ತಿದೆಯಾದರೂ ಅವುಗಳ ಬಾಡಿಗೆ ದರ ನಿಭಾಯಿಸುವುದು ಸಣ್ಣ ರೈತರಿಗೆ ಕಷ್ಟವಾಗಿದೆ. ಇನ್ನು ಸಾಲಸೂಲ ಮಾಡಿಯಾದರೂ ಬಾಡಿಗೆ ಯಂತ್ರ ಬಳಸಿಕೊಂಡೇ ಕೃಷಿ ಮಾಡಿದರಾಯಿತು ಎಂದುಕೊಂಡರೆ ಬಾಡಿಗೆ ಯಂತ್ರಗಳ ಸಂಖ್ಯೆ ಕಡಿಮೆ ಇರುವುದರಿಂದ ಅವು ರೈತರಿಗೆ ಅಗತ್ಯ ಸಮಯದಲ್ಲಿಯೂ ಸಿಗುವುದಿಲ್ಲ. ಇದರಿಂದ ಕೃಷಿ ಚಟುವಟಿಕೆ ಸಕಾಲಕ್ಕೆ ನಡೆಯದೆ ಅದು ಮುಂದೆ ಇಳುವರಿ ಮೇಲೆಯೂ ದುಷ್ಪರಿಣಾಮ ಬೀರುವ ಸಾಧ್ಯತೆಯೂ ಇದೆ. ಒಟ್ಟಾರೆ ಅನ್ನದಾತ ಈ ಬಾರಿ ಲಾಕ್‌ಡೌನ್‌ ಸೃಷ್ಟಿಸಿದ “ಎತ್ತುಗಳ ಸಮಸ್ಯೆ’ ಎಂಬ ಹೊಸ ಸವಾಲು ಎದುರಿಸಲೇಬೇಕಾಗಿದೆ.

ಟ್ರ್ಯಾಕ್ಟರ್‌ ಮೊರೆ : ಕಳೆದ ಸಲ ನೆರೆ ಬಂದಿದ್ದರಿಂದ ನಿರ್ವಹಣೆ ಮಾಡಲಾಗದೆ ಹಲವರು ಎತ್ತುಗಳನ್ನು ನವೆಂಬರ್‌- ಡಿಸೆಂಬರ್‌ ಒಳಗೆಯೇ ಕಡಿಮೆ ಬೆಲೆಗೆ ಮಾರಿದ್ದಾರೆ. ಲಾಕ್‌ಡೌನ್‌ ನಿಂದಾಗಿ ಜಾನುವಾರು ಸಂತೆ ನಡೆದಿಲ್ಲ. ಹೀಗಾಗಿ ಬಹಳಷ್ಟು ರೈತರಿಗೆ ಹೊಸ ಎತ್ತುಗಳನ್ನು ಖರೀದಿಸಲು ಸಾಧ್ಯವಾಗಿಲ್ಲ. ಮನೆಯಲ್ಲಿ ಎತ್ತು ಇರುವವರು ಅವುಗಳನ್ನೇ ಬಳಸಿಕೊಂಡು ಉಳುಮೆ ಮಾಡುವುದು ಅನಿವಾರ್ಯವಾಗಿದೆ. ಇಲ್ಲವೇ ಬಾಡಿಗೆ ಟ್ರ್ಯಾಕ್ಟರ್‌ಗೆ ಮೊರೆ ಹೋಗಬೇಕಾಗಿದೆ. ಒಂದು ವೇಳೆ ಇವು ಎರಡೂ ಸಾಧ್ಯವಾಗದಿದ್ದರೆ ಮನೆ ಮಂದಿಯೇ ನೊಗಹೊರುವುದು ಅನಿವಾರ್ಯ. – ಹನುಮಂತಗೌಡ ಗಾಜೀಗೌಡ್ರ, ರೈತ

 

ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.