ಆರೋಗ್ಯ ರಕ್ಷಕರಿಗೆ ಕ್ವಾರಂಟೈನ್ ಅನಗತ್ಯ
ಸೋಂಕಿತರಲ್ಲಿ ಬಹುತೇಕರು ಗುಣಮುಖ ವೈದ್ಯರು-ಸಿಬ್ಬಂದಿ ಕಾರ್ಯ ಅಭಿನಂದನಾರ್ಹ
Team Udayavani, May 18, 2020, 4:36 PM IST
ಸಾಂದರ್ಭಿಕ ಚಿತ್ರ
ವಿಜಯಪುರ: ಕೋವಿಡ್-19 ರೋಗಿಗಳ ನಿರ್ವಹಣೆಯಲ್ಲಿ ತೊಡಗಿರುವ ಆರೋಗ್ಯ ರಕ್ಷಣಾ ಕಾರ್ಯಕರ್ತರು ಅಗತ್ಯ ಇರುವ ಎಲ್ಲ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಸೇವೆ ಸಲ್ಲಿಸುತ್ತಾರೆ. ಹೀಗಾಗಿ ಆರೋಗ್ಯ ರಕ್ಷಕರಿಗೆ 14 ದಿನಗಳ ಸಾಂಸ್ಥಿಕ ಕ್ವಾರಂಟೈನ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದ್ದಾರೆ.
ಭಾನುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣ ದಲ್ಲಿ ಜರುಗಿದ ಕೋವಿಡ್-19 ನಿಯಂತ್ರಣಕ್ಕಾಗಿ ತಮ್ಮ ಅಧ್ಯಕ್ಷತೆಯಲ್ಲಿ ಜರುಗಿದ ಆರೋಗ್ಯ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಈ ಸೂಚನೆ ನೀಡಿದ ಅವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಸುತ್ತೋಲೆ ಹೊರಡಿಸಿದ್ದಾರೆ. ಪಿಪಿಇ ಕಿಟ್ ಬಳಕೆ ಸೇರಿದಂತೆ ಅಗತ್ಯ ಇರುವ ಎಲ್ಲ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಕರ್ತವ್ಯ ನಿರ್ವಹಿಸುವ ಕಾರಣ ಅಪಾಯ ಕಡಿಮೆ ಇರುತ್ತದೆ. ವೈದ್ಯರು, ದಾದಿಯರು, ಪ್ರಯೋಗಾಲಯದ ತಂತ್ರಜ್ಞರು ಸೇರಿದಂತೆ ಕೋವಿಡ್-19 ರೋಗಿಗಳ ನಿರ್ವಹಣೆಯಲ್ಲಿ ಕರ್ತವ್ಯದಲ್ಲಿ ಇರುವವರು 14 ದಿನಗಳ ಸಾಂಸ್ಥಿಕ ಕ್ವಾರಂಟೈನ್ ನಿಗಾದಲ್ಲಿ ಇರುವ ಅಗತ್ಯವಿಲ್ಲ ಎಂದರು.
ಕೋವಿಡ್ ಸೋಂಕಿತ ರೋಗಿಗಳ ಚಿಕಿತ್ಸೆಯಲ್ಲಿ ತೊಡಗಿರುವವರಿಗೆ ಸೋಂಕಿನ ಲಕ್ಷಣ ಇಲ್ಲದಿದ್ದರೂ ಕ್ವಾರಂಟೈನ್ ನಿಗಾದಲ್ಲಿ ಇರಿಸುವುದು ಅಗತ್ಯವಿಲ್ಲ. ಪ್ರತಿದಿನ ತಮ್ಮ ದೇಹದ ಉಷ್ಣತೆ ಪರೀಕ್ಷೆ ಜತೆಗೆ ರೋಗ ಲಕ್ಷಣ ಇಲ್ಲದಿರುವ ಕುರಿತು ಖಚಿತ ಮಾಡಿಕೊಂಡರೆ ಸಾಕು. ಆಸ್ಪತ್ರೆಯಲ್ಲಿ ಎಂದಿನಂತೆ ತಮ್ಮ ಕರ್ತವ್ಯ ಮಾಡಬಹುದು. ಅದರಂತೆ ಕೋವಿಡ್ ಅಲ್ಲದ ಆಸ್ಪತ್ರೆಗಳಲ್ಲೂ ಸರ್ಕಾರದ ಹೊಸ ಮಾರ್ಗಸೂಚಿ ಅನ್ವಯ ಕಾರ್ಯನಿರ್ವಹಿಸುವಂತೆಯೂ ಸೂಚಿಸಿದರು.
ಜಿಲ್ಲೆಯಲ್ಲಿ ಕೋವಿಡ್ ಸೋಂಕು ಸಂಪೂರ್ಣ ಹತೋಟಿಗೆ ಬರುವಲ್ಲಿ ಹಾಗೂ ಸೋಂಕಿತರಲ್ಲಿ ಬಹುತೇಕರು ಗುಣಮುಖರಾಗಿ ಮನೆಗೆ ಮರಳುವಲ್ಲಿ ಕೋವಿಡ್ ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿ ಪಾತ್ರ ಪ್ರಧಾನವಾಗಿದೆ. ಇದಕ್ಕಾಗಿ ನೀವೆಲ್ಲ ಅಭಿನಂದನಾರ್ಹರಾಗಿದ್ದು, ಭವಿಷ್ಯದಲ್ಲೂ ಸೇವೆಯಲ್ಲಿ ಸಣ್ಣ ಲೋಪವೂ ಆಗದಂತೆ ಹೊಣೆಗಾರಿಕೆಯಿಂದ ಪ್ರಾಮಾಣಿಕ ಕರ್ತವ್ಯ ನಿರ್ವಹಿಸಿ ಎಂದು ನಿರ್ದೇಶಿಸಿದರು. ಜಿಲ್ಲೆಯಿಂದ ವಿವಿಧ ರಾಜ್ಯಗಳಿಗೆ ವಲಸೆ ಹೋಗಿದ್ದ 10,097 ವಲಸಿಗರು ಜಿಲ್ಲೆಗೆ ಮರಳಿದ್ದು, ಎಲ್ಲರನ್ನೂ ಸಾಂಸ್ಥಿಕ ಕ್ವಾರಂಟೈನ್ ನಿಗಾದಲ್ಲಿ ಇರಿಸಲಾಗಿದೆ. ವಿದೇಶಗಳಿಂದ ಬಂದ 2292 ಜನರ ಮೇಲೆ ತೀವ್ರ ನಿಗಾ ಇರಿಸಿದ್ದು, 1269 ಜನರು 28 ದಿನಗಳ ಐಸೋಲೇಶನ್ ಅವಧಿ ಮುಗಿಸಿದ್ದಾರೆ. 983 ಜನರು ರಿಪೋರ್ಟಿಂಗ್ ಅವಧಿ ಯಲ್ಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ವಿವರಿಸಿದರು.
ಜಿಪಂ ಸಿಇಒ ಗೋವಿಂದರೆಡ್ಡಿ, ಎಡಿಸಿ ಡಾ| ಔದ್ರಾಮ್, ಜಿಲ್ಲಾಸ್ಪತ್ರೆ ಸರ್ಜನ್ ಡಾ| ಶರಣಪ್ಪ ಕಟ್ಟಿ, ಡಾ| ಲಕ್ಕಣ್ಣನವರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ಎಂ.ಬಿ.ಬಿರಾದಾರ, ಡಾ| ಮುಕುಂದ ಗಲಗಲಿ, ಡಾ| ಧಾರವಾಡಕರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
MUST WATCH
ಹೊಸ ಸೇರ್ಪಡೆ
Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.