ನೆರೆ ಸಂತ್ರಸ್ತರ ಮನೆ ನಿರ್ಮಾಣಕ್ಕೆ 66 ಕೋಟಿ ರೂ. ಬಿಡುಗಡೆ
Team Udayavani, May 18, 2020, 8:22 PM IST
ಬೆಂಗಳೂರು: ರಾಜ್ಯದಲ್ಲಿ ನೆರೆಯಿಂದ ಸಂತ್ರಸ್ತರಾಗಿ ಮನೆ ನಿರ್ಮಿಸಿಕೊಳ್ಳುತ್ತಿರುವವರಿಗೆ ಮೂರನೇ ಕಂತಿನಲ್ಲಿ ಒಂದು ಲಕ್ಷ ರೂ. ನೀಡಲು 66 ಕೋಟಿ ರೂ. ಬಿಡುಗಡೆ ಮಾಡಲಾಗುತ್ತಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.
ವಿಧಾನಸೌಧದಲ್ಲಿ ಸೋಮವಾರ ಮಾತನಾಡಿ, ಕೋವಿಡ್- 19 ವೈರಸ್ ನಿಯಂತ್ರಣ ಕಾರ್ಯದ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳಿನಿಂದ ನೆರೆ ಸಂತ್ರಸ್ತರು ಮನೆಗಳನ್ನು ನಿರ್ಮಿಸಿಕೊಳ್ಳುವ ಕಾರ್ಯಕ್ಕೆ ಹಿನ್ನಡೆಯಾಗಿದೆ. ಇಟ್ಟಿಗೆ, ಜಲ್ಲಿ, ಕಬ್ಬಿಣ, ಸಿಮೆಂಟ್ ಸಿಗದಿರುವ ಜತೆಗೆ ಕೂಲಿ ಕಾರ್ಮಿಕರ ಸಮಸ್ಯೆಯೂ ತಲೆದೋರಿದ್ದು, ಯಾರೂ ಕೆಲಸ ಆರಂಭಿಸಲು ಸಾಧ್ಯವಾಗಿಲ್ಲ. ಹಾಗಾಗಿ ಹಣ ಬಿಡುಗಡೆ ಮಾಡಿರಲಿಲ್ಲ. ಇದೀಗ 66 ಕೋಟಿ ರೂ. ಬಿಡುಗಡೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಈಗಾಗಲೇ ಮನೆ ನಿರ್ಮಾಣ ಪ್ರಗತಿ ಆಧರಿಸಿ ಮೊದಲ ಹಾಗೂ ಎರಡನೇ ಕಂತಿನ ಹಣ ಬಿಡುಗಡೆ ಮಾಡಲಾಗಿದೆ. ಮೂರನೇ ಕಂತಿನ ಒಂದು ಲಕ್ಷ ರೂ. ನೆರವು ಪಡೆಯಲು ಬಯಸುವವರು ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ನೀಡಬೇಕು. ಬಳಿಕ ನೇರವಾಗಿ ಅವರ ಖಾತೆಗೆ ಒಂದು ಲಕ್ಷ ರೂ. ನೆರವಿನ ಮೊತ್ತ ಜಮೆ ಮಾಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Lupus Nephritis: ಲೂಪಸ್ ನೆಫ್ರೈಟಿಸ್ ರೋಗಿಗಳಿಗೆ ಒಂದು ಮಾರ್ಗದರ್ಶಿ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…
Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.