ದೇಶದಲ್ಲಿ 95 ಸಾವಿರ ಮೀರಿದ ಸೋಂಕಿತರ ಸಂಖ್ಯೆ
Team Udayavani, May 19, 2020, 12:48 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಲಾಕ್‌ಡೌನ್ ಸೇರಿದಂತೆ ಹಲವು ರೀತಿಯ ನಿಯಂತ್ರಣ ಕ್ರಮಗಳನ್ನು ಕೈಗೊಂಡರೂ ದೇಶದಲ್ಲಿ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಜಿಗಿತ ಕಂಡುಬಂದಿದೆ.
ಸದ್ಯ ದೇಶದಲ್ಲಿ 95 ಸಾವಿರಕ್ಕಿಂತ ಅಧಿಕ ಸೋಂಕು ಪ್ರಕರಣಗಳು ದೃಢಪಟ್ಟಿವೆ. ಪಟ್ಟಿಯಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ.
ತಮಿಳುನಾಡು, ಗುಜರಾತ್, ದಿಲ್ಲಿ, ರಾಜಸ್ಥಾನ, ಮಧ್ಯಪ್ರದೇಶ, ಉತ್ತರ ಪ್ರದೇಶ, ಪಶ್ಚಿಮ ಬಂಗಾಲ, ಆಂಧ್ರಪ್ರದೇಶ ಸ್ಥಾನ ಪಡೆದುಕೊಂಡಿವೆ. ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಮಹಾರಾಷ್ಟ್ರದಲ್ಲಿ 2,347 ಹೊಸ ಮತ್ತು 63 ಸಾವಿನ ಪ್ರಕರಣಗಳು ಸೇರ್ಪಡೆಯಾಗಿವೆ.
ದಾಖಲೆಯ 4,987ಸಾವಿರ ಕೇಸು: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ರವಿವಾರ ನೀಡಿದ ಮಾಹಿತಿ ಪ್ರಕಾರ ದೇಶದಲ್ಲಿ 24 ಗಂಟೆಗಳ ಅವಧಿಯಲ್ಲಿ 4,987 ಕೇಸುಗಳು ಏರಿಕೆಯಾಗಿವೆ, ಇದೊಂದು ದಾಖಲೆಯ ಜಿಗಿತ.
ಶನಿವಾರ ಬೆಳಗ್ಗೆ 8ರಿಂದ ರವಿವಾರ ಬೆಳಗ್ಗೆ 8 ವರೆಗಿನ ಮಾಹಿತಿ ಇದಾಗಿದೆ. ಈ ಅವಧಿಯಲ್ಲಿ 120 ಸಾವುಗಳು ಸಂಭವಿಸಿವೆ. ಈ ಪೈಕಿ ಮಹಾರಾಷ್ಟ್ರದಲ್ಲಿ 67, ಗುಜರಾತ್‌ನಲ್ಲಿ 19, ಉತ್ತರ ಪ್ರದೇಶದಲ್ಲಿ 9, ಪಶ್ಚಿಮ ಬಂಗಾಲದಲ್ಲಿ 7 ಮಂದಿ ಅಸುನೀಗಿದ್ದಾರೆ. ಇದರ ಜತೆಗೆ ದೇಶದಲ್ಲಿ ಗುಣಮುಖರಾದವರ ಪ್ರಮಾಣ ಶೇ.37.51ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
50 ಲಕ್ಷದತ್ತ ಓಟ: ಇನ್ನು ಜಗತ್ತಿನ ವಿಚಾರ ಗಮನಿಸುವುದಿದ್ದರೆ, ಸೋಂಕಿತರ ಸಂಖ್ಯೆ 50 ಲಕ್ಷದತ್ತ ಸಾಗುತ್ತಿದೆ. 3.14 ಲಕ್ಷ ಮಂದಿಗಿಂತಲೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ. 18.40 ಲಕ್ಷಕ್ಕಿಂತಲೂ ಹೆಚ್ಚು ಮಂದಿ ಗುಣಮುಖರಾಗಿದ್ದಾರೆ. ಅಮೆರಿಕದಲ್ಲಿ ಸಾವಿನ ಸಂಖ್ಯೆ 1 ಲಕ್ಷದ ಸನಿಹಕ್ಕೆ ಬಂದಿದೆ.
ರಾಷ್ಟ್ರಪತಿ ಭವನದ ಅಧಿಕಾರಿಗೆ ಸೋಂಕು
ರಾಷ್ಟ್ರಪತಿ ಭವನಕ್ಕೆ ನಿಯೋಜನೆಗೊಂಡಿದ್ದ ಪೊಲೀಸ್ ಸಹಾಯಕ ಆಯುಕ್ತರಿಗೆ ಕೋವಿಡ್ ಸೋಂಕು ತಗಲಿರುವುದು ದೃಢಪಟ್ಟಿದ್ದು, ಅವರನ್ನು ದಿಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದೀಗ ರಾಷ್ಟ್ರಪತಿ ಭವನದ ಹಲವು ಪೊಲೀಸರು ಹಾಗೂ ಸಿಬಂದಿಯನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ರಾಷ್ಟ್ರಪತಿ ಭವನ ಕಟ್ಟಡದ ಒಳಗೆ ಪೊಲೀಸ್ ಸಹಾಯಕ ಆಯುಕ್ತರ ಕಚೇರಿ ಇತ್ತು.
ಕಳೆದ ತಿಂಗಳು ರಾಷ್ಟ್ರಪತಿ ಭವನದ ಸ್ವಚ್ಛತಾ ಸಿಬಂದಿಯ ಸಂಬಂಧಿಕರಿಗೆ ಕೋವಿಡ್ ಸೋಂಕು ತಗಲಿದ್ದ ರಿಂದ ಭವನದಲ್ಲಿದ್ದ 115 ಕುಟುಂಬಗಳನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿತ್ತು. ಈ ಪೈಕಿ ಯಾರೊಬ್ಬರಲ್ಲೂ ಸೋಂಕು ಕಂಡು ಬಂದಿರಲಿಲ್ಲ.
ಕೋವಿಡ್ ಗೆದ್ದ ಯೋಧರು
ಮೂತ್ರಪಿಂಡ ಹಾಗೂ ಕ್ಯಾನ್ಸರ್ ಬಾಧಿತರಾಗಿದ್ದ ಐವರು ಬಿಎಸ್‌ಎಫ್ ಯೋಧರು ಕೋವಿಡ್ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ.
ಕೋವಿಡ್ ಪಾಸಿಟಿವ್ ಕಂಡು ಬಂದಿದ್ದ ಮೂವರಿಗೆ ಮೂತ್ರಪಿಂಡ ಸಮಸ್ಯೆ ಹಾಗೂ ಇಬ್ಬರಿಗೆ ಕ್ಯಾನ್ಸರ್ ಇತ್ತು. ಇದೀಗ ಇವರು ಕೋವಿಡ್ ವೈರಸನ್ನು ಮಣಿಸಿದ್ದಾರೆ. ಇದರೊಂದಿಗೆ ಕೇಂದ್ರೀಯ ಸಶಸ್ತ್ರ ಪಡೆಯ 74 ಸಿಬಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.