ಬಂಗಾಲ ತೊರೆಯುತ್ತಿರುವ ನರ್ಸ್‌ಗಳು; ಖಾಸಗಿ ಆಸ್ಪತ್ರೆಗಳಲ್ಲಿನ ಹುದ್ದೆಗಳಿಗೆ ರಾಜೀನಾಮೆ


Team Udayavani, May 19, 2020, 1:22 AM IST

ಬಂಗಾಲ ತೊರೆಯುತ್ತಿರುವ ನರ್ಸ್‌ಗಳು; ಖಾಸಗಿ ಆಸ್ಪತ್ರೆಗಳಲ್ಲಿನ ಹುದ್ದೆಗಳಿಗೆ ರಾಜೀನಾಮೆಬಂಗಾಲ ತೊರೆಯುತ್ತಿರುವ ನರ್ಸ್‌ಗಳು; ಖಾಸಗಿ ಆಸ್ಪತ್ರೆಗಳಲ್ಲಿನ ಹುದ್ದೆಗಳಿಗೆ ರಾಜೀನಾಮೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಕೋಲ್ಕತಾ: ಪಶ್ಚಿಮ ಬಂಗಾಲದ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ಅನೇಕ ಶುಶ್ರೂಷಕಿಯರು ತಮ್ಮ ಉದ್ಯೋಗಗಳನ್ನು ತ್ಯಜಿಸಿ ತಮ್ಮ ಊರುಗಳಿಗೆ ಹೊರಡಲಾರಂಭಿಸಿದ್ದು ಇದು ಹೊಸ ಟ್ರೆಂಡ್‌ ಹುಟ್ಟುಹಾಕಿದೆ.

ಈವರೆಗೆ ಸುಮಾರು 300 ಶುಶ್ರೂಷಕಿಯರು ತಮ್ಮ ಹುದ್ದೆಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆಂದು ಹೇಳಲಾಗಿದೆ. ಪೂರ್ವ ಭಾರತದ ಆಸ್ಪತ್ರೆ ಸಂಘವು (ಎ.ಎಚ್‌.ಇ.ಐ) ಪಶ್ಚಿಮ ಬಂಗಾಲ ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಶುಶ್ರೂಷಕಿಯರ ಈ ಸಮಸ್ಯೆಯನ್ನು ಪರಿಹರಿಸಬೇಕೆಂದು ಒತ್ತಾಯಿಸಿದೆ.

ಮೂಲಗಳ ಪ್ರಕಾರ, ಪಶ್ಚಿಮ ಬಂಗಾಲದಲ್ಲಿ ಹೆಚ್ಚುತ್ತಿರುವ ಕೋವಿಡ್ ಸೋಂಕಿಗೆ ಹೆದರಿ ಅವರು ಜಾಗ ಖಾಲಿ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ. ಆದರೆ, ಎ.ಎಚ್‌.ಇ.ಐ ಅಧ್ಯಕ್ಷ ಪ್ರದೀಪ್‌ ಲಾಲ್‌ ಮೆಹ್ತಾ ಕಾರ್ಯದರ್ಶಿಗಳಿಗೆ ಬರೆದ ಪತ್ರದಲ್ಲಿ, ‘ಈ ವಾರ ಅಂತ್ಯಕ್ಕೆ ಕನಿಷ್ಠ 185 ಮಂದಿ ಶುಶ್ರೂಷಕಿಯರು ತವರಿಗೆ ಹೊರಟಿದ್ದಾರೆ. ಅದರಲ್ಲಿ ಶನಿವಾರವೇ 169 ಮಂದಿ ಕೆಲಸ ತ್ಯಸಿದ್ದಾರೆ.

ಇದರಲ್ಲಿ 92 ಮಂದಿ ಮಣಿಪುರಕ್ಕೆ, 43  ತ್ರಿಪುರ, 32 ಮಂದಿ ಝಾರ್ಖಂಡ್‌ಗೆ ತೆರಳಿದ್ದಾರೆ.  ಒಡಿಶಾಗೆ ಇಬ್ಬರು ಹೋಗಿದ್ದಾರೆ. ಈ ನಡುವೆ ಮಣಿಪುರಕ್ಕೆ ಹೋಗಿರುವ 92 ಶುಶ್ರೂಷಕಿಯರ ಮೂಲತಃ ಆ ರಾಜ್ಯದವರೇ ಆಗಿದ್ದಾರೆ.

ಅಲ್ಲಿನ ಸರಕಾರ ಅವರಿಗೆ ತವರಿಗೆ ವಾಪಸು ಬಂದರೆ ಹೆಚ್ಚಿನ ಸಂಬಳ ನೀಡುವುದಾಗಿ ಸಾಮಾಜಿಕ ಜಾಲತಾಣಗಳ ಮೂಲಕ ಆಮಿಷ ಒಡ್ಡಿರುವುದರಿಂದ ಶುಶ್ರೂಷಕಿಯರು ವಲಸೆ ಹೋಗಿದ್ದಾರೆ. ಬೇರೆ ಕಾರಣಗಳು ಇಲ್ಲವೇ ಇಲ್ಲ’ ಎಂದು ಅವರು ರವಿವಾರ ಪ್ರತಿಪಾದಿಸಿದ್ದಾರೆ.

ಆಮಿಷ ಒಡ್ಡಿಲ್ಲ: ಮಣಿಪುರ ಸಿಎಂ
ಆರೋಪಗಳ ಬಗ್ಗೆ ಮಣಿಪುರ ಮುಖ್ಯಮಂತ್ರಿ ನಾಂಗ್‌ ಥಾಂಬಾಮ್‌ ಬಿರೇನ್‌ ಸಿಂಗ್‌, ‘ಕೋಲ್ಕತಾ, ದಿಲ್ಲಿ ಇತರೆಡೆ ಆರೋಗ್ಯ ವಾರಿಯರ್ ಆಗಿ ಕಾರ್ಯನಿರ್ವಹಿಸಿರುವ ನಮ್ಮ ಶುಶ್ರೂಷಕಿಯರು ನಮ್ಮ ರಾಜ್ಯದ ಗೌರವ ಹೆಚ್ಚಿಸಿದ್ದಾರೆ. ಅವರು ತವರಿಗೆ ಬಂದರೆ ಹೆಮ್ಮೆಯಿಂದ ಸ್ವಾಗತಿಸುತ್ತೇವೆಯೇ ಹೊರತು, ಅವರನ್ನು ಹಣದ ಆಮಿಷ ಒಡ್ಡಿ ಕರೆಸಿಕೊಂಡಿಲ್ಲ’ ಎಂದಿದ್ದಾರೆ.

ಟಾಪ್ ನ್ಯೂಸ್

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.