ಡೆಂಘೀ ಬಗ್ಗೆ ಮುಂಜಾಗ್ರತೆ ವಹಿಸಿ
Team Udayavani, May 19, 2020, 7:29 AM IST
ಚಾಮರಾಜನಗರ: ಡೆಂಘೀ ಜ್ವರವನ್ನು ತಡೆಗಟ್ಟುವಲ್ಲಿ ಜಿಲ್ಲಾ ಹಾಗೂ ತಾಲೂಕು ಆರೋಗ್ಯ ಕೇಂದ್ರಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಪಂ ಅಧ್ಯಕ್ಷ ಮಹೇಶ್ ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ವಿಭಾಗ, ತಾಲೂಕು ಆರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ರಾಪಿóàಯ ಡೆಂಘೀ ದಿನಾಚರಣೆ ಕುರಿತ ಸಂದೇಶ ಸಾರುವ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.
ಜಿಲ್ಲೆಯ ಜನರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಪ್ರತಿ ಮನೆಗಳಿಗೂ ತೆರಳಿ ಕಾಯಿಲೆ ಹರಡುವುದರ ಬಗ್ಗೆ ಜನರಿಗೆ ತಿಳಿವಳಿಕೆ ನೀಡಬೇಕು. ಕೋವಿಡ್-19 ನಿಯಂತ್ರಣದಲ್ಲಿ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಜಿಲ್ಲೆಯನ್ನು ಕೊರೊನಾ ಮುಕ್ತ ಜಿಲ್ಲೆಯಾಗಿ ಕಾಪಾಡುವಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿರುವುದಕ್ಕೆ ಅಭಿನಂದನೆ ಸಲ್ಲಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಆನಂದ್ ಮಾತನಾಡಿ, ಮಳೆ ಪ್ರಾರಂಭವಾಗುವುದರಿಂದ ಸೊಳ್ಳೆಗಳು ಹೆಚ್ಚಾಗಬಹುದು.
ಹೀಗಾಗಿ ಮನೆ ಸುತ್ತಮುತ್ತಲಿನಲ್ಲಿ ನೀರು ಸಂಗ್ರಹವಾಗದಂತೆ ಮತ್ತು ತ್ಯಾಜ್ಯ ವಸ್ತುಗಳು ಕಂಡುಬರದ ಹಾಗೆ ಸ್ವತ್ಛತೆವಾಗಿಟ್ಟುಕೊಳ್ಳಲು ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯತಿಗಳು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. ಜಿಪಂ ಸಿಇಒ ನಾರಾಯಣರಾವ್, ಡಿಎಚ್‌ಒ ಡಾ.ರವಿ, ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೃಷ್ಣಮೂರ್ತಿ, ಡಾ. ಕಾಂತರಾಜು, ಡಾ. ರಾಜು, ಡಾ. ಶ್ರೀನಿವಾಸ್, ಡಾ.ಮಮತಾ ಕುಮಾರಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.