ಗ್ರಾಮೀಣರ ಸಮಸ್ಯೆಗೆ ಸ್ಪಂದಿಸುವೆ
Team Udayavani, May 19, 2020, 7:35 AM IST
ಭಾರತೀನಗರ: ಸಮೀಪದ ಕೆ.ಶೆಟ್ಟಹಳ್ಳಿ ಮತ್ತು ಕಾಡುಕೊತ್ತನಹಳ್ಳಿಗಳಲ್ಲಿ ಎಸ್‌ಇಪಿ ಯೋಜನೆಯಲ್ಲಿ ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಮತ್ತು ಡ್ರೆçನೇಜ್ ಕಾಮಗಾರಿಗೆ ಶಾಸಕ ಡಿ.ಸಿ.ತಮ್ಮಣ್ಣ ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಶೆಟ್ಟಹಳ್ಳಿ ಗ್ರಾಮಕ್ಕೆ 44.43 ರೂ., ಕಾಡುಕೊತ್ತನಹಳ್ಳಿ ಗ್ರಾಮಕ್ಕೆ 44.54 ಲಕ್ಷ ರೂ. ಒಟ್ಟು 88.97 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಮತ್ತು ಡ್ರೆçನೇಜ್ ಕಾಮಗಾರಿಗೆ ಚಾಲನೆ ನೀಡಿದ್ದೇನೆ.
ರಸ್ತೆಗಳ ಅಭಿವೃದಿಟಛಿ ಜೊತೆಗೆ ಕ್ಷೇತ್ರಕ್ಕೆ ಅಗತ್ಯ ಕೆಲಸಗಳನ್ನು ಮಾಡುತ್ತಾ ಬರುತ್ತಿದ್ದೇನೆ. ಸಾರ್ವಜನಿಕರು, ಅಧಿಕಾರಿಗಳು, ಜನಪ್ರತಿನಿಧಿಗಳು ಗುಣಮಟ್ಟದ ಕಾಮಗಾರಿ ನಡೆಸಲು ಅರಿವು ಮೂಡಿಸಬೇಕು. ಉದ್ದೇಶಿತ ಕಾಮಗಾರಿಯ ಅಂದಾಜು ವೆಚ್ಚ ಸೇರಿದಂತೆ ತಾಂತ್ರಿಕ ವಿಷಯಗಳನ್ನು ಸ್ಥಳೀಯ ಜನರಿಗೆ ಈ ಮೊದಲೇ ತಿಳಿಸಬೇಕು. ಇದು ಕಾಮಗಾರಿಯ ಗುಣ ನಿಯಂತ್ರಣಕ್ಕೆ ಸಹಕಾರಿಯಾಗುತ್ತದೆ ಎಂದರು.
ಗ್ರಾಮಗಳ ಅಭಿವೃದಿ ಕಾರ್ಯಗಳಿಗೆ ಸರ್ಕಾರ ಹಲವಾರು ರೀತಿಯಲ್ಲಿ ಅನುದಾನ ನೀಡುತ್ತಿದೆ. ಇದನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ತನ್ನ ಅಧಿಕಾರ ಅವಧಿಯಲ್ಲಿ ದ್ವೇಷ ಅಸೂಯೆ ಇಲ್ಲದೇ ಕ್ಷೇತ್ರದ ಪ್ರತಿಯೊಂದು ಗ್ರಾಮಗಳಿಗೂ ತೆರಳಿ ಕಷ್ಟ-ಸುಖಗಳಿಗೆ ಭಾಗಿಯಾಗಿದ್ದೇನೆ. ತನ್ನ ಅಧಿಕಾರಕ್ಕೆ ಯಾವುದೇ ಚ್ಯುತಿಬಾರದ ರೀತಿಯಲ್ಲಿ ಕಾರ್ಯನಿರ್ವಹಿಸಿದ್ದೇನೆಂದು ತಿಳಿಸಿದರು.
ಈ ವೇಳೆ ಜೆಡಿಎಸ್ ತಾಲೂಕು ಅಧ್ಯಕ್ಷ ಚಿಕ್ಕತಿಮ್ಮೇಗೌಡ, ಸಹಾಯಕ ಎಂಜಿನಿಯರ್ ಪ್ರವೀಣ್, ಪ್ರಕಾಶ್, ಎಇ ವೇಣುಗೋಪಾಲ್, ಶೆಟ್ಟಹಳ್ಳಿ ಮರಿಸ್ವಾಮಿ, ಶಿವಲಿಂಗ, ಶಿವರಾಜು, ಗುತ್ತಿಗೆದಾರ ಚನ್ನಯ್ಯ, ಮಾದೇಗೌಡ, ಎಸ್.ಮಹೇಂದ್ರ, ನಂಜುಂಡಯ್ಯ, ಸ್ವಾಮಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ
Maddur; ಕೆಲಸದ ಒತ್ತಡ: ಎಂಜಿನಿಯರ್ ಆತ್ಮಹ*ತ್ಯೆ
Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BJP Congress;ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರಿಗೆ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.