ದೇಶದಲ್ಲಿ 1ಲಕ್ಷ ದಾಟಿದ ಕೋವಿಡ್-19 ಸೋಂಕಿತ ಪ್ರಕರಣಗಳು, ಸಾವಿನ ಸಂಖ್ಯೆ 3,000ಕ್ಕೆ ಏರಿಕೆ
ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 5,242 ಹೊಸ ಪ್ರಕರಣಗಳು ದಾಖಲಾಗಿದೆ.
Team Udayavani, May 19, 2020, 8:00 AM IST
ನವದೆಹಲಿ: ಭಾರತದಲ್ಲಿ ನಾಲ್ಕನೇ ಹಂತದ ಲಾಕ್ ಡೌನ್ ಜಾರಿಯಲ್ಲಿರುವಾಗಲೇ ಕೋವಿಡ್ 19 ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ಮಂಗಳವಾರದ ವೇಳೆಗೆ ದೇಶದಲ್ಲಿ ವೈರಾಣು ಪೀಡಿತರ ಸಂಖ್ಯೆ 1 ಲಕ್ಷ ಗಡಿ ದಾಟಿದ್ದು, ಮೃತರ ಪ್ರಮಾಣ ಕೂಡ 3,000 ದ ಗಡಿ ದಾಟಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 5,242 ಹೊಸ ಪ್ರಕರಣಗಳು ದಾಖಲಾಗಿದೆ. ಮಹಾರಾಷ್ಟ್ರ, ಗುಜರಾತ್, ತಮಿಳುನಾಡುಗಳಲ್ಲಿ ಅತೀ ಹೆಚ್ಚು ಸೋಂಕು ಪ್ರಕರಣಗಳು ವರದಿಯಾಗಿದ್ದು, ಪರೀಕ್ಷೆಗೊಳಪಡಿಸಲಾಗಿದ್ದ ಶೇ. 50 ರಷ್ಟು ಜನರಲ್ಲಿ ಪಾಸಿಟಿವ್ ಕಂಡುಬರುತ್ತಿದೆ.
4ನೇ ಹಂತದ ಲಾಕ್ ಡೌನ್ ನಲ್ಲಿ ಹಲವು ರಾಜ್ಯಗಳಲ್ಲಿ ಸಾರಿಗೆ, ಅಂಗಡಿ ಮುಂಗಟ್ಟು, ಮಾರುಕಟ್ಟೆ, ಸಲೂನ್ ಸೇರಿದಂತೆ ಹಲವು ಚಟುವಟಿಕೆಗಳು ಆರಂಭಗೊಂಡಿದೆ. ಕಂಟೈನ್ ಮೆಂಟ್ ಝೋನ್ ಗಳಲ್ಲಿ ಮಾತ್ರ ನಿರ್ಭಂದಗಳು ಮುಂದುವರೆದಿದೆ. ಅದಾಗ್ಯೂ ಶಾಲಾ, ಕಾಲೇಜು, ಚಿತ್ರಮಂದಿರ, ಮಾಲ್ ಗಳು ಮುಂತಾದವುಗಳ ಮೇ 31 ರವರೆಗೂ ಲಾಕ್ ಡೌನ್ ಆಗಿರಲಿವೆ.
ಮಹಾರಾಷ್ಟರದಲ್ಲಿ ಅತೀ ಹೆಚ್ಚು ಸೋಂಕು ಪ್ರಕರಣಗಳು ದಾಖಲಾಗಿದ್ದು ಈವರೆಗೂ ಸುಮಾರು 35,000ಕ್ಕಿಂತ ಹೆಚ್ಚು ಮಂದಿ ವೈರಾಣುವಿನಿಂದ ಬಳಲುತ್ತಿದ್ದು, 1,249 ಜನರು ಮೃತಪಟ್ಟಿದ್ದಾರೆ. ತಮಿಳುನಾಡಿನಲ್ಲೂ ಕೂಡ 11,760 ಮಂದಿ ವೈರಸ್ ಗೆ ತುತ್ತಾಗಿದ್ದು 81 ಜನರು ಸಾವನ್ನಪ್ಪಿದ್ದಾರೆ. ಗುಜರಾತ್ ನಲ್ಲಿ ಕೋವಿಡ್ 19 ಗೆ ಬಲಿಯಾದವರ ಸಂಖ್ಯೆ 694 ಕ್ಕೆ ಏರಿದ್ದು , 11,746 ಪ್ರಕರಣಗಳು ದಾಖಲಾಗಿವೆ.
ಭಾರತದಲ್ಲಿ ಕೋವಿಡ್ 19 ವೈರಸ್ ಕಾಣಿಸಿಕೊಂಡು 78 ದಿನಗಳು ಕಳೆದಿದ್ದು, ಈವರೆಗೂ 1,00,311 ಜನರಿಗೆ ಸೋಂಕು ಧೃಢಪಟ್ಟಿದ್ದು, 3,081 ಜನರು ವೈರಸ್ ಕಾರಣದಿಂದ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM Issue: ಇವಿಎಂಗೂ ಮುನ್ನ ರಾಹುಲ್‌ರನ್ನು ಬದಲಿಸಿ ಕಾಂಗ್ರೆಸ್‌ಗೆ ಬಿಜೆಪಿ ಟಾಂಗ್
Maharashtra Election: ಇವಿಎಂ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಅಘಾಡಿ ಪ್ಲಾನ್!
Parliment Session: ಅದಾನಿ ಲಂಚ ಆರೋಪ ಗದ್ದಲ: ಕಲಾಪ ಮುಂದಕ್ಕೆ
Cyber Crime: ಸೈಬರ್ ವಂಚನೆ ತಡೆಗೆ ಕೇಂದ್ರದಿಂದ 6.69 ಲಕ್ಷ ಸಿಮ್‌ಗಳಿಗೆ ನಿರ್ಬಂಧ
Adani issue: ಕೇಂದ್ರ ಸರಕಾರ ಅದಾನಿಯನ್ನು ರಕ್ಷಿಸುತ್ತಿದೆ, ಕೂಡಲೇ ಬಂಧಿಸಿ: ರಾಹುಲ್ ಗಾಂಧಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
EVM Issue: ಇವಿಎಂಗೂ ಮುನ್ನ ರಾಹುಲ್‌ರನ್ನು ಬದಲಿಸಿ ಕಾಂಗ್ರೆಸ್‌ಗೆ ಬಿಜೆಪಿ ಟಾಂಗ್
MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ
Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ
Maharashtra Election: ಇವಿಎಂ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಅಘಾಡಿ ಪ್ಲಾನ್!
Parliment Session: ಅದಾನಿ ಲಂಚ ಆರೋಪ ಗದ್ದಲ: ಕಲಾಪ ಮುಂದಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.