ಕೋವಿಡ್ 19 ಸೋಂಕಿತರ ಸಂಖ್ಯೆ 30ಕ್ಕೆ ಏರಿಕೆ
Team Udayavani, May 19, 2020, 7:59 AM IST
ಹಾಸನ: ಮಹಾರಾಷ್ಟ್ರದಿಂದ ಬಂದವರಲ್ಲಿ ಕೋವಿಡ್ 19 ಪಾಟಿಸಿವ್ ಪ್ರಕರಣಗಳು ಪ್ರತಿ ದಿನವೂ ವರದಿಯಾಗುತ್ತಿದ್ದು, ಸೋಮವಾರ ನಾಲ್ವರಲ್ಲಿ ಕೋವಿಡ್ 19 ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ಈಗ 30ಕ್ಕೇರಿದೆ. ಮಹಾರಾಷ್ಟ್ರದಿಂದ ಬಂದಿರುವ ಚನ್ನರಾಯ ಪಟ್ಟಣ ತಾಲೂಕು ಒಂದೇ ಕುಟುಂಬದ ಮೂವರಲ್ಲಿ ಕೋವಿಡ್ 19 ಪತ್ತೆಯಾಗಿದ್ದು, ಮಹಾರಾಷ್ಟ್ರದಲ್ಲಿದ್ದ ಸಂಬಂಧಿಕರ ಮನೆಗೆ ಹೋಗಿದ್ದ ಹೊಳೆನರಸೀಪುರ ತಾಲೂಕಿನ ಹಳ್ಳಿಯೊಂದರ 17 ವರ್ಷದ ಶಾಲಾ ಬಾಲಕನಿಗೂ ಸೋಂಕು ದೃಢಪಟ್ಟಿದೆ.
ಸುದ್ದಿಗೋಷ್ಠಿಯಲ್ಲಿ ಕೋವಿಡ್ 19 ಪ್ರಕರಣ ಗಳ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು, ಚನ್ನರಾಯಪಟ್ಟಣ ತಾಲೂಕಿನ ಮೂಲದ 40 ವರ್ಷದ ಮಹಿಳೆ, 29 ವರ್ಷದ ಮಹಿಳೆ ಹಾಗೂ 34 ವರ್ಷದ ಪುರುಷನಲ್ಲಿ ಕೋವಿಡ್ 19 ಪತ್ತೆಯಾಗಿದೆ. ಮೇ12 ರಂದು ಮಹಾರಾಷ್ಟ್ರ ರಾಜ್ಯದಿಂದ 5 ಜನರು ಕಾರಿನಲ್ಲಿ ಬಂದಿದ್ದು, ಅವರಲ್ಲಿ ಈಗ ಮೂವರಿಗೆ ಕೋವಿಡ್ 19 ದೃಢಪಟ್ಟಿದೆ.
ಇಬ್ಬರು ಮಕ್ಕಳ ವರದಿ ನೆಗೆಟಿವ್ ಎಂದು ಬಂದಿದೆ. ಸೋಂಕು ದೃಢಪಟ್ಟಿರುವ ಹೊಳೆನರಸೀಪುರ ತಾಲೂಕು ಮೂಲದ 17 ವರ್ಷದ ಬಾಲಕ ಕಾರಿನಲ್ಲಿ ಐವರೊಂದಿಗೆ ಮೇ14ರಂದು ಬಂದಿದ್ದ. ಆತನನ್ನು ಹೊಳೆನರಸೀಪುರ ತಾಲೂಕು ದೊಡ್ಡ ಕಾಡನೂರು ಕ್ವಾರಂಟೈನ್ ಕೇಂದ್ರದಲ್ಲಿದ್ದ. ಇನ್ನು ನಾಲ್ವರು ಮಂಡ್ಯ ಜಿಲ್ಲೆ ಕೆ.ಆರ್.ಪೇಟೆಗೆ ಹೋಗಿದ್ದಾರೆ ಎಂದು ವಿವರ ನೀಡಿದರು.
ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ: ಎಲ್ಲ ನಾಲ್ವರು ಸೋಂಕಿತರನ್ನು ಹಾಸನದ ಹಿಮ್ಸ್ನ ಕೋವಿಡ್ 19 ಆಸ್ಪತ್ರೆಗೆ ದಾಖಲು ಮಾಡಲಾ ಗಿದೆ. ಹಿಮ್ಸ್ ಆಸ್ಪತ್ರೆಯಲ್ಲಿ 30 ಸೋಂಕಿತ ರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ 470 ಜನರ ಪರೀûಾ ವರದಿ ನಿರೀಕ್ಷಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ವಲಸೆ ಕಾರ್ಮಿಕರಿಗೆ ನೆರವು: ಮೇ 17 ರಂದು ರಾತ್ರಿ ಹಾಸನ ರೈಲು ನಿಲ್ದಾಣದಿಂದ 1,440 ಜನ ವಲಸೆ ಕಾರ್ಮಿಕರನ್ನು ಬಿಹಾರಕ್ಕೆ ರೈಲಿನ ಮುಖಾಂತರ ಕಳುಹಿಸಲಾಗಿದೆ. ಈ ಸಂದರ್ಭದಲ್ಲಿ ಅವರ ಆರೋಗ್ಯ ತಪಾಸಣೆ ಮಾಡಿ, ಆಹಾರವನ್ನು ಒದಗಿಸಿ ಕಳುಹಿಸ ಲಾಗಿದೆ. ಉಳಿದವರಿಗಾಗಿ ಮತ್ತೂಂದು ರೈಲಿನ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿದರು.
ಮೇ 19ರಂದು ಮಧ್ಯಪ್ರದೇಶ ಮೂಲದ 120ಜನ ವಲಸೆ ಕಾರ್ಮಿಕರನ್ನು ಬೆಂಗಳೂರಿನ ಮೂಲಕ ಅವರ ಸ್ವಂತ ಊರಿಗೆ ಕಳುಹಿಸ ಲಾಗುತ್ತಿದೆ ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸಗೌಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಎ. ಪರಮೇಶ್, ಉಪಭಾಗಾಧಿಕಾರಿ ಡಾ. ನವೀನ್ ಭಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ದ್ದರು.
ಈವರೆಗೂ ಹೊರರಾಜ್ಯ ಗಳಿಂದ ಬಂದಿರುವ 294 ಜನರನ್ನು ಜಿಲ್ಲಾ ಆಸ್ಪತ್ರೆಯಲ್ಲಿ ಮತ್ತು 878 ಜನರನ್ನು ಹಾಸ್ಟೆಲ್ ಗಳಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಹೊರ ಜಿಲ್ಲೆ ಹಾಗೂ ಹೊರ ರಾಜ್ಯಕ್ಕೆ ಪ್ರಯಾಣಿಸುವ ಪಾಸ್ ಪಡೆಯುವ ಸೇವಾ ಸಿಂಧು ಆ್ಯಪ್ನಲ್ಲಿ ಕಂಡು ಬಂದಿದ್ದ ತಾಂತ್ರಿಕ ದೋಷವನ್ನು ಸರಿಪಡಿಸಲಾಗಿದೆ.
-ಆರ್. ಗಿರೀಶ್, ಜಿಲ್ಲಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.