ಕ್ವಾರಂಟೈನ್ ಕೇಂದ್ರಗಳಿಗೆ ಮೂಲಸೌಕರ್ಯ ಕಲ್ಪಿಸಿ
Team Udayavani, May 19, 2020, 8:26 AM IST
ಕೋಲಾರ: ಜಿಲ್ಲೆಯಲ್ಲಿ ಕೊವಿಡ್ ಶಂಕಿತ ವ್ಯಕ್ತಿಗಳನ್ನು ಇನ್ಸ್ಟಿಟ್ಯೂಷನಲ್ ಕ್ವಾರಂ ಟೈನ್ ಮಾಡುತ್ತಿದ್ದು, ಅಗತ್ಯ ಮೂಲ ಸೌಕರ್ಯ ಕಲ್ಪಿಸಬೇಕು ಹಾಗೂ ಸ್ವಚ್ಛತೆ ಕಾಪಾಡಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾ ಮಹಾದೇವನ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಂಗ ಸಭಾಂಗಣದಲ್ಲಿ ಕೊವಿಡ್-19 ಕುರಿತಂತೆ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೇರಳದ ಕ್ವಾರಂಟೈನ್ ಕೇಂದ್ರಗಳಲ್ಲಿ ಸ್ವತ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಇದರಿಂದ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಕಡಿಮೆ ಆಗಿದೆ. ಕೇರಳದಲ್ಲಿ 93 ವರ್ಷದ ವ್ಯಕ್ತಿಯನ್ನು ಸಹ ಗುಣಪಡಿಸಲಾಗಿದೆ.
ಈ ನಿಟ್ಟಿನಲ್ಲಿ ವೈದ್ಯರು ಗುಣಮುಖರಾಗುವ ಪ್ರಮಾಣ ಹೆಚ್ಚಿಸಬೇಕು ಎಂದು ತಿಳಿಸಿದರು. ಹೊರ ಜಿಲ್ಲೆ ಮತ್ತು ರಾಜ್ಯಗಳಿಂದ ಬರುವ ಚಾಲಕ ಮತ್ತು ಕ್ಲೀನರ್‌ಗಳನ್ನು ಕಡ್ಡಾಯವಾಗಿ ಪರೀಕ್ಷೆಗೆ ಒಳಪಡಿಸಿ ಪಾಸಿಟಿವ್ ಪ್ರಕರಣ ಹೊಂದಿರುವ ಪ್ರಥಮ ಮತ್ತು ದ್ವಿತೀಯ ಸಂಪರ್ಕ ಪರೀಕ್ಷೆಗೆ ಒಳಪಡಿಸಿ ಕ್ವಾರಂಟೈನ್‌ನಲ್ಲಿ ಇಡಬೇಕು ಎಂದರು.
ಅಗತ್ಯ ವಸ್ತುಗಳ ಅಂಗಡಿಗಳು ಸಾರ್ವಜ ನಿಕರಿಗೆ ಸದಾಕಾಲ ದೊರೆಯುವಂತೆ ನೋಡಿಕೊಳ್ಳಿ, ಈ ಅಂಗಡಿಗಳನ್ನು 3 ಶಿಫ್ಟ್ ಗಳಾಗಿ ವಿಂಗಡಿಸಿ ತೆರೆಯುವ ಹಾಗೆ ವ್ಯವಸ್ಥೆ ಮಾಡಲು ಸಾಧ್ಯವೇ ಎಂಬುದನ್ನು ಪರಿಶೀಲಿಸಿ ಎಂದರು. ಜಿಲ್ಲಾಧಿಕಾರಿ ಸಿ.ಸತ್ಯಭಾಮ ಜಿಲ್ಲೆಯಲ್ಲಿ ಇದುವರೆಗೆ 9 ಪಾಸಿಟಿವ್ ಪ್ರಕರಣಗಳು ಕಂಡು ಬಂದಿದ್ದು, ಇವರ ಎಲ್ಲಾ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಗಳನ್ನು ಕ್ವಾರಂಟೈನ್ ಮಾಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.