ಟ್ರಾವೆಲ್ ಹಿಸ್ಟರಿ ಇಲ್ಲದ ಬಾಲಕಿಗೆ ಸೋಂಕು: ಶಿವಮೊಗ್ಗ ಜಿಲ್ಲಾಡಳಿತಕ್ಕೆ ತಲೆನೋವಾದ ಪ್ರಕರಣ
Team Udayavani, May 19, 2020, 2:57 PM IST
ಶಿವಮೊಗ್ಗ: ಇತ್ತೀಚಿನ ದಿನದವರೆಗೂ ಗ್ರೀನ್ ಝೋನ್ ನಲ್ಲಿದ್ದ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ದಿನದಿಂದ ಏರಿಕೆಯಾಗುತ್ತಿದೆ. ಇಂದು ಪತ್ತೆಯಾದ 12 ಪ್ರಕರಣಗಳ ಪೈಕಿ ಓರ್ವ ಬಾಲಕಿಯ ವಿಚಾರ ಜಿಲ್ಲಾಡಳಿತದ ತಲೆನೋವಿಗೆ ಕಾರಣವಾಗಿದೆ.
ಇಂದು ಪತ್ತೆಯಾದವರಲ್ಲಿ ಸೋಂಕಿತ ಸಂಖ್ಯೆ1304 ಆಗಿರುವ 15 ವರ್ಷದ ಬಾಲಕಿಗೆ ಯಾವುದೇ ಟ್ರಾವೆಲ್ ಹಿಸ್ಟರಿಯಿಲ್ಲ. ಆದರೂ 15 ವರ್ಷದ ಬಾಲಕಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.
ಈ ಹಿಂದೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಈಕೆಯನ್ನು ಪೊಲೀಸರು ವಿಚಾರಣೆ ನಡೆಸಿದ್ದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿಬ್ಬಂದಿಯೂ ಈ ಬಾಲಕಿಗೆ ಆಪ್ತ ಸಮಾಲೋಚನೆ ನಡೆಸಿದ್ದರು. ಜೊತೆಗೆ ಈಕೆಗೆ ಚಿಕಿತ್ಸೆಯನ್ನೂ ಕೊಡಿಸಲಾಗಿದೆ.
ಸದ್ಯ ಈ ಬಾಲಕಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಈಕೆಗೆ ಯಾವ ಕಾರಣದಿಂದ ಸೋಂಕು ತಾಗಿದೆ ಎನ್ನುವುದು ಜಿಲ್ಲಾಡಳಿತದ ತಲೆನೋವಾಗಿ ಪರಿಣಮಿಸಿದೆ. ಹೀಗಾಗಿ ಪೊಲೀಸರು, ಆರೋಗ್ಯ ಸಿಬ್ಬಂದಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿಬ್ಬಂದಿ ಎಲ್ಲರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.
ಜಿಲ್ಲೆಯಲ್ಲಿ ಇಂದು 12 ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಜಿಲ್ಲೆಯ ಸೋಂಕಿತರ ಸಂಖ್ಯೆ 26ಕ್ಕೇರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.