ತೃಪ್ತಿಗಾಗಿ ಮಾಜಿ ಸಿಎಂ ಕುಮಾರಸ್ವಾಮಿ ಟೀಕೆ
Team Udayavani, May 20, 2020, 7:29 AM IST
ಚಿಕ್ಕಬಳ್ಳಾಪುರ: ಕೊರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿರುವ ಆರ್ಥಿಕ ಪ್ಯಾಕೇಜ್‌ಗಳ ಬಗ್ಗೆ ವಿಶ್ವದ ಗಮನ ಸೆಳೆದಿ ರುವಾಗ ಮಾಜಿ ಸಿಎಂ ಹೆಚ್.ಡಿ . ಕುಮಾರಸ್ವಾಮಿ ತಮ್ಮ ತೃಪ್ತಿಗಾಗಿ ಟೀಕೆ ಮಾಡುತ್ತಿದ್ದಾರೆ ಎಂದು ರಾಜ್ಯ ಗ್ರಾಮೀ ಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯ ವಾಡಿದರು.
ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನ ದಲ್ಲಿ ಮಂಗಳವಾರ ಅಂತರ್ಜಲ ಚೇತನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂ ದಿಗೆ ಮಾತನಾಡಿ, ಟೀಕೆ ಮಾಡುವುದು ಅವರ ಕರ್ತವ್ಯ, ಮುಖ್ಯಮಂತ್ರಿಗಳಾಗಿದ್ದ ಕುಮಾರಸ್ವಾಮಿ, ಪ್ರಧಾನಿ ಮಂತ್ರಿಗಳು ಏನೇ ಹೇಳಿದರೂ ಅದನ್ನು ಟೀಕೆ ಮಾಡಿದರೆ ನಮಗೆ ತೃಪ್ತಿ ಕಾಣಬೇಕೆಂದು ಬಯಸಿದ್ದಾರೆ. ಅದರಲ್ಲಿಯೇ ಅವರು ತೃಪ್ತಿ ಕಾಣಲಿ. ಅವರ ಟೀಕೆ ನಮಗೆ ಮಾರ್ಗ ದರ್ಶನ ಎಂದು ಹೇಳಿ ನಾವು ಇನ್ನೂ ಒಳ್ಳೆಯ ಕೆಲಸಗಳನ್ನು ಮಾಡುತ್ತೇವೆ ಎಂದರು.
ಕೊರೊನಾ ತಡೆಗೆ ಪ್ರಧಾನಿ ಮೋದಿ ಕೈಗೊಂಡ ನಿರ್ಧಾರ ಮತ್ತು ಅವರ ಶ್ರಮಕ್ಕೆ ಇಡೀ ವಿಶ್ವವೇ ಮೆಚ್ಚುಗೆ ವ್ಯಕ್ತಪಡಿಸಿದೆ. ಘೋಷಿಸಿರುವ ಆರ್ಥಿಕ ಪ್ಯಾಕೇಜ್‌ಗಳ ಬಗ್ಗೆ ಜನ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಆದ್ದರಿಂದ ಕುಮಾರಸ್ವಾಮಿ ಟೀಕೆ ಮಾಡುವುದನ್ನು ರಾಜ್ಯದ ಜನರ ತೀರ್ಮಾನಕ್ಕೆ ಬಿಡುತ್ತೇನೆ. ಸಿಎಂ ಯಡಿ ಯೂರಪ್ಪ ಹಾಗೂ ಸಚಿವ ಡಾ.ಕೆ. ಸುಧಾಕರ್ ಕರ್ನಾಟಕಕ್ಕೆ ಮೋದಿ ಆಗಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
Bengaluru: ಮನೆಯ ಬಾಲ್ಕನಿಯಲ್ಲಿ ಗಿಡಗಳ ಮಧ್ಯೆ ಗಾಂಜಾ ಬೆಳೆದಿದ್ದ ದಂಪತಿ ಬಂಧನ
Karkala: ಸೆಲ್ಫಿ ಕಾರ್ನರ್ ಮಾಡಿದರೂ ತ್ಯಾಜ್ಯ ಎಸೆತ ನಿಂತಿಲ್ಲ!
Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.