ಹೊರ ರಾಜ್ಯಗಳಿಂದ ಜಿಲ್ಲೆಗೆ 439 ಮಂದಿ


Team Udayavani, May 20, 2020, 7:58 AM IST

kumararaki

ತುಮಕೂರು: ಹೊರ ರಾಜ್ಯಗಳಿಂದ 439 ಜಿಲ್ಲೆಗೆ ಆಗಮಿಸಿದ್ದು, ಅವರನ್ನು ವಸತಿ ಶಾಲೆ, ಹೋಟೆಲ್‌ಗ‌ಳಲ್ಲಿ ಕ್ವಾರೆಂಟೈನ್‌ ಮಾಡಲಾಗಿದೆ. ಈಗಾಗಲೇ ಗಂಟಲು ದ್ರವ ಮಾದರಿ ಗಳನ್ನು ಪರೀಕ್ಷೆಗೊಳ ಪಡಿಸಲಾಗಿದ್ದು, ಕೆಲ ವರ ವರದಿ  ನೆಗೆಟಿವ್‌ ಬಂದಿವೆ. ಇನ್ನು ಕೆಲವು ಮಾದರಿಗಳ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್‌ಕುಮಾರ್‌ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯ ದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯಲ್ಲಿ ಈವರೆಗೂ ಕೋವಿಡ್‌ -19 ನಾಲ್ಕು ಸಕ್ರಿಯ ಪ್ರಕರಣಗಳಿದ್ದು, ಶೀಘ್ರವಾಗಿ ಗುಣಮುಖರಾಗಲು ಚಿಕಿತ್ಸೆ ನೀಡ ಲಾಗುತ್ತಿದೆ. ಮತ್ತೂಮ್ಮೆ ಅವರ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗುವುದು. ನೆಗೆಟಿವ್‌ ಬಂದಲ್ಲಿ  ಅವರನ್ನು ಡಿಸ್ಚಾರ್ಜ್‌ ಮಾಡಲಾಗು ವುದು ಎಂದರು.

ನಿಯಮ ಪಾಲಿಸಿ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಆದೇಶದಂತೆ ಲಾಕ್‌ಡೌನ್‌ ಸಡಿಲಿಕೆಯಾಗಿದ್ದು, ಜಿಲ್ಲೆಯಲ್ಲಿ ಮಂಗಳ ವಾರ ದಿಂದ ಬಸ್‌ ಸಂಚಾರ ಆರಂಭವಾಗಿದೆ.  ಸಾಮಾಜಿಕ ಅಂತರ ಕಾಯ್ದು ಕೊಂಡು ಖಾಸಗಿ ವಾಹನಗಳ ಸಂಚಾರ  ಮಾಡಲು ಅನುಮತಿ ನೀಡಲಾಗಿದೆ. ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು. ಅಂತರ್‌ ಜಿಲ್ಲೆಗೆ ಪ್ರಯಾಣಿಸಲು ಯಾವುದೇ ಪಾಸ್‌ ಅಗತ್ಯವಿಲ್ಲ ಎಂದು ತಿಳಿಸಿದರು.

ಭಾನುವಾರ ಸಂಪೂರ್ಣ ಬಂದ್‌: ಜಿಲ್ಲೆಯಲ್ಲಿ ಸಂಜೆ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ 144 ಸೆಕ್ಷನ್‌ ಜಾರಿಯಲ್ಲಿ ರುತ್ತದೆ. ಭಾನುವಾರದಂದು ಸಂಪೂರ್ಣ ಲಾಕ್‌ಡೌನ್‌ ಮಾಡುವುದರಿಂದ ಅಗತ್ಯ ಸೇವೆ ಆಸ್ಪತ್ರೆ,  ಮೆಡಿಕಲ್‌ಶಾಪ್‌ಗ್ಳನ್ನು ಹೊರತುಪಡಿಸಿ ಅಂಗಡಿ ಮುಂಗಟ್ಟುಗಳು ತೆರೆಯಲು ಅವಕಾಶವಿರುವುದಿಲ್ಲ ಎಂದರು. ಹೊರ ರಾಜ್ಯದಿಂದ ಜಿಲ್ಲೆಗೆ ಬರುವವರ ಮೇಲೆ ಹೆಚ್ಚಿನ ನಿಗಾವಹಿಸುವ ಸಲುವಾಗಿ ಸಾರ್ವಜನಿಕರು ಹೊರ ರಾಜ್ಯದಿಂದ ಬಂದವರ ಮಾಹಿತಿಯನ್ನು ಜಿಲ್ಲಾಡಳಿತ ಅಥವಾ ತಾಲೂಕು ಆಡಳಿತಕ್ಕೆ ನೀಡಬೇಕೆಂದು ಮನವಿ ಮಾಡಿದರು.

ಕೊರೊನಾ ಭೀತಿಯಲ್ಲಿ ಜಿಲ್ಲೆಯ ಜನತೆ: ಕಳೆದ ಎರಡು ತಿಂಗಳಿಂದ ಕೊರೊನಾ ಭೀತಿಯಿಂದ ಲಾಕ್‌ಡೌನ್‌ ಆಗಿದ್ದ ತುಮಕೂರು ಈಗ ಸಹಜಸ್ಥಿತಿಯತ್ತ ಮರಳುತ್ತಿದ್ದು ಮಂಗಳವಾರದಿಂದ ಬಸ್‌ ಸಂಚಾರ ಆರಂಭ ಗೊಂಡಿದ್ದು, ಲಾಕ್‌ಡೌನ್‌ ಸಡಿಲಿಕೆಯಿಂದ ನಗರದಲ್ಲಿ ಹೆಚ್ಚು ಜನ ಸಂದಣಿ ಉಂಟಾಗುತ್ತಿರುವುದು ಮತ್ತು ಹೊರ ರಾಜ್ಯ ಮತ್ತು ಹೊರ ಜಿಲ್ಲೆಯಿಂದ ಜನ ಬರುತ್ತಿದ್ದು ಮತ್ತೆ ಎಲ್ಲಿ ಕೊರೊನಾ ಕಾಣಿಸಿ ಕೊಳುವುದೋ ಎನ್ನುವ ಭೀತಿ ಹೆಚ್ಚಿದೆ.  ಪ್ರಾರಂಭದಿಂದಲೂ ಜಿಲ್ಲೆಯಲ್ಲಿ 11 ಜನರಿಗೆ ಸೋಂಕು ಕಾಣಿಸಿ ಕೊಂಡು ಇಬ್ಬರು ಮೃತಪಟ್ಟು ಐವರು ಗುಣಮುಖ ವಾಗಿದ್ದಾರೆ, ಇನ್ನೂ ನಾಲ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

1,949 ಹೋಂ ಕ್ವಾರೆಂಟೈನ್‌: ಕೊರೊನಾ ಕಾಣಿಸಿ ಕೊಂಡು ಎರಡು ತಿಂಗಳಾಗಿದೆ ಜಿಲ್ಲೆ ಯಲ್ಲಿ ಕೊರೊನಾ ಪರೀಕ್ಷೆ ಮಾಡಿಸಿ ಕೊಳ್ಳು ವವರ ಸಂಖ್ಯೆ ಹೆಚ್ಚುತ್ತಿದೆ ಈ ವರಗೆಗೆ 7,379 ಜನರ ಪರೀಕ್ಷೆ ನಡೆದಿದೆ, ಅದರಲ್ಲಿ 6,483 ಜನರಿಗೆ  ನೆಗೆಟಿವ್‌ ಎಂದು ಲ್ಯಾಬ್‌ವರದಿ ಬಂದಿದೆ, ಇನ್ನೂ 1,949 ಹೋಂ ಕ್ವಾರೆಂಟೈನ್‌ ಮಾಡಲಾಗಿದೆ.

ಆತಂಕ ಹೆಚ್ಚು: ವಿವಿಧ ಸರ್ಕಾರಿ ಆಸ್ಪತ್ರೆ ಗಳಲ್ಲಿ 805 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ, ಆದರೆ 847 ಜನರ ಮಾದರಿ ಪರೀಕ್ಷೆ ಲ್ಯಾಬ್‌ ನಿಂದ ಬರಬೇಕಾಗಿದೆ. ಈ ನಡುವೆ ಲಾಕ್‌ ಡೌನ್‌ ಸಡಿಲಿಕೆ ಯಿಂದ ಜನಸಂಚಾರ ಅಧಿಕವಾಗಿದೆ, ಇದು  ಜನರಲ್ಲಿ ಆತಂಕ ಹೆಚ್ಚಲು ಪ್ರಮುಖ ಕಾರಣ ವಾಗಿದೆ.

ಸಹಜ ಸ್ಥಿತಿಯತ್ತ ಜಿಲ್ಲೆ: ಮತ್ತೆ ಜಿಲ್ಲೆಯಲ್ಲಿ ಎಲ್ಲಾ ವ್ಯಾಪಾರ ವಹಿವಾಟುಗಳು ಆರಂಭಗೊಂಡಿದ್ದು, ತುಮಕೂರು ಸಹಜ ಸ್ಥಿತಿಯತ್ತ ಬರುತ್ತಿರುವುದು ಒಂದೆಡೆಯಾದರೆ, ಜನರ ಓಡಾಟ ಹೆಚ್ಚುತ್ತಿದೆ, ಹೊರ ರಾಜ್ಯ ಹಾಗೂ ಹೊರ  ಜಿಲ್ಲೆಯಿಂದ ಬರುವವರು ಹೆಚ್ಚುತ್ತಿ ದ್ದಾರೆ. ಎಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿ ಈಗ ಕಿತ್ತಲೆ ವಲಯದಲ್ಲಿರುವ ತುಮಕೂರು ಕೆಂಪು ವಲಯವಾಗುತ್ತೋ ಎನ್ನುವ ಆತಂಕ ಜನರಲ್ಲಿದೆ.

ಟಾಪ್ ನ್ಯೂಸ್

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

8-belthangady

Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು

ಟ್ರಕ್ ಡಿಕ್ಕಿ ಹೊಡೆದು ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ… ಓರ್ವ ಸಾ*ವು

Tragedy: ಬೆಳ್ಳಂಬೆಳಗ್ಗೆ ಭೀಕರ ಅಪಘಾತ… ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ

7-icc

ICC Champions Trophy: ಹೈಬ್ರಿಡ್‌ ಮಾದರಿಯೇ ಅಂತಿಮ

6-mandya

Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ  87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ

5-dinesh

Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

suicide (2)

Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

4-pavagada

Pavagada: ಟ್ರ್ಯಾಕ್ಟರ್ ಗೆ ಕ್ರೇನ್ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

10-up-yodhas

Pro Kabaddi: ದ್ವಿತೀಯ ಸ್ಥಾನಕ್ಕೆ ಯೋಧಾಸ್‌

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

9-ind-pak

Kho Kho ವಿಶ್ವಕಪ್‌: ಭಾರತ- ಪಾಕಿಸ್ಥಾನ ಉದ್ಘಾಟನ ಪಂದ್ಯ

8-belthangady

Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.