ದೇವದುರ್ಗ ಜನರಿಗಿಲ್ಲವೇ ಕೋವಿಡ್ ಪಾಸಿಟಿವ್‌ ಭಯ


Team Udayavani, May 20, 2020, 12:56 PM IST

20-April-08

ದೇವದುರ್ಗ: ರಾಜ್ಯದಲ್ಲಿ ಲಾಕ್‌ಡೌನ್‌ ಸ್ವಲ್ಪ ಮಟ್ಟಿಗೆ ಸಡಿಲಿಕೆಯಾಗಿದ್ದು, ಜನಜೀವನ ಸಹಜ ಸ್ಥಿತಿಯತ್ತ ಮರಳುತ್ತಿದೆ. ಆದರೆ ತಾಲೂಕಿನಲ್ಲಿ ಎರಡು ಕೋವಿಡ್ ಪಾಸಿಟವ್‌ ಪ್ರಕರಣ ಪತ್ತೆಯಾಗಿದ್ದರೂ ಸಾರ್ವಜನಿಕರಲ್ಲಿ ಆತಂಕವೇ ಇಲ್ಲವೇನೊ ಎನ್ನುವಂತಾಗಿದೆ ಪರಿಸ್ಥಿತಿ. ಎಂದಿನಂತೆ ಗುಂಪು ಗುಂಪಾಗಿ ಜನರ ಓಡಾಟದಿಂದ ಮತ್ತಷ್ಟು ಆತಂಕ ಮನೆ ಮಾಡಿದೆ.

ಮಸರಕಲ್‌ ಗ್ರಾಮದ ಹೊರವಲಯದಲ್ಲಿರುವ ವಸತಿ ನಿಲಯ ಕ್ವಾರಂಟೈನ್‌ನಲ್ಲಿದ್ದ ಇಬ್ಬರಲ್ಲಿ ಕೋವಿಡ್ ಪಾಸಿಟವ್‌ ಕಂಡು ಬಂದಿದ್ದರಿಂದ ಇನ್ನುಳಿದವರಲ್ಲಿ ಆತಂಕ ಮೂಡಿಸಿದೆ. ಸಾಮಾಜಿಕ ಅಂತರ ಪಾಲನೆಯಾಗದೇ ಇರುವುದು ಅಧಿಕಾರಿಗಳಿಗೆ ಬೇಸರ ತರಿಸಿದೆ. ಕಡ್ಡಾಯವಾಗಿ ಮಾಸ್ಕ್, ಕರವಸ್ತ್ರ ಧರಿಸಬೇಕು ಎನ್ನುವ ಆದೇಶಕ್ಕೆ ಕಿಮ್ಮತ್ತು ಇಲ್ಲದಂತಾಗಿದೆ. ಬ್ಯಾಂಕ್‌, ಸರಕಾರಿ ಕಚೇರಿ, ಹೋಟೆಲ್‌, ಆಟೋಗಳಲ್ಲಿ, ರಸ್ತೆ ಬದಿ ವ್ಯಾಪಾರ ವಹಿವಾಟಿನಲ್ಲಿ ಸಾಮಾಜಿಕ ಅಂತರವೇ ಪಾಲನೆಯಾಗುತ್ತಿಲ್ಲ. ಒಬ್ಬರಿಗೂಬ್ಬರು ಹತ್ತಿರದಲ್ಲಿ ನಿಂತುಕೊಂಡು ವ್ಯಾಪಾರ ಮಾಡುತ್ತಿರುವುದು ಸಾಮಾನ್ಯವಾಗಿದೆ.

ಕಳೆದ 50 ದಿನಗಳಿಂದ ಯಾವುದೇ ಆತಂಕವಿಲ್ಲದೆ ನೆಮ್ಮದಿಯಿಂದ ಇದ್ದ ತಾಲೂಕಿನ ಜನರಿಗೆ ಕೋವಿಡ್ ಪಾಸಿಟವ್‌ ಆಘಾತ ಉಂಟು ಮಾಡಿದೆ. 50 ವರ್ಷ ಮೇಲ್ಪಟಿರುವ ವೃದ್ಧರು, 10 ವರ್ಷದೊಳಗಿನ ಮಕ್ಕಳು ಮನೆಯಿಂದ ಹೊರಗಡೆ ಬರದಂತೆ ಎಚ್ಚರ ವಹಿಸಬೇಕು ಎಂಬ ಜಿಲ್ಲಾಡಳಿತದ ಸೂಚನೆಯನ್ನು ಬಹುತೇಕರು ಪಾಲಿಸುತ್ತಿಲ್ಲ. ಬೀಡಿ, ಸಿಗರೇಟ್‌ ಸೇದುತ್ತ ಒಬ್ಬರಿಗೊಬ್ಬರು ಮಾತಾನಾಡುವ ದೃಶ್ಯಗಳು ಕಾಣ ಸಿಗುತ್ತಿವೆ. ತಾಲೂಕು ಮಟ್ಟದ ಅಧಿಕಾರಿಗಳು ಕೋವಿಡ್ ವೈರಸ್‌ ತಡೆಗಟ್ಟಲು ಜಾಗೃತಿ ಮೂಡಿಸುತ್ತಿದ್ದಾರೆ. ಮಾಸ್ಕ್, ಕರವಸ್ತ್ರ ಧರಸದ ಜನರಿಗೆ ದಂಡ ವಿಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂಬ ಮಾತು ಕೇಳಿ ಬಂದಿದೆ.

ತಾಲೂಕಿನಲ್ಲಿ ಎರಡು ಕೋವಿಡ್ ಪಾಸಿಟವ್‌ ಪ್ರಕರಣ ಪತ್ತೆಯಾಗಿವೆ. ಕ್ವಾರಂಟೈನ್‌ ಕೇಂದ್ರದಲ್ಲಿ ಬಿಗಿ ಕ್ರಮವಹಿಸಲಾಗಿದೆ. ಕೋವಿಡ್ ರೋಗ ತಡೆಗಟ್ಟಲು ಜನರಲ್ಲಿ ಜಾಗೃತಿ ಮೂಡಿಸಲಾಗಿದೆ. ಮಾಸ್ಕ್, ಕರವಸ್ತ್ರ ಧರಿಸುವಂತೆ ಆದೇಶಿಸಲಾಗಿದೆ.
ಮಧುರಾಜ ಯಾಳಗಿ,
ತಹಶೀಲ್ದಾರ್‌

ಟಾಪ್ ನ್ಯೂಸ್

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ

Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ

Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ

ಗುತ್ತಿಗೆದಾರ ಸಚಿನ್‌ ಕೇಸ್:‌ ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ

ಗುತ್ತಿಗೆದಾರ ಸಚಿನ್‌ ಕೇಸ್:‌ ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

POLICE-5

Udupi: ಗಾಂಜಾ ಸೇವಿಸಿದ ವ್ಯಕ್ತಿ ಪೊಲೀಸ್‌ ವಶ

6

Manipal: ಅಪಾಯಕಾರಿ ರೀತಿಯಲ್ಲಿ ಬೈಕ್‌ ಚಾಲನೆ; ಪ್ರಕರಣ ದಾಖಲು

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.