ಹಾನಿಗೀಡಾದ ಬೆಳೆಗಳಿಗೆ ಪರಿಹಾರ ಪ್ಯಾಕೇಜ್‌ಗೆ ಆಗ್ರಹ
Team Udayavani, May 20, 2020, 12:03 PM IST
ಇಂಡಿ: ಕೋವಿಡ್-19 ಹಾಗೂ ಅಕಾಲಿಕ ಆಲೀಕಲ್ಲು ಮಳೆಯಿಂದ ಹಾನಿಗೀಡಾದ ತಾಲೂಕಿನ ಲಿಂಬೆ ಹಾಗೂ ದಾಳಿಂಬೆ ಬೆಳೆಗಳಿಗೆ ವಿಶೇಷ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದಿಂದ ತಹಶೀಲ್ದಾರ್ ಚಿದಂಬರ ಕುಲಕರ್ಣಿ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಇಂಡಿ ಸತತ ಬರಗಾಲಕ್ಕೆ ತುತ್ತಾಗಿರುವ ತಾಲೂಕಾಗಿದ್ದು, ನೀರಿನ ತೊಂದರೆಯಿಂದ ಸಾಕಷ್ಟು ಬೆಳೆಗಳು ಹಾನಿಯಾಗುತ್ತಿವೆ. ಅಕಾಲಿಕ ಆಲೀಕಲ್ಲು ಮಳೆ ಬಿದ್ದಿದ್ದರಿಂದಲೂ ತಾಲೂಕಿನ ಬಹುತೇಕ ರೈತರ ಲಿಂಬೆ ಮತ್ತು ದಾಳಿಂಬೆ ಬೆಳೆಗಳು ಸಂಪೂರ್ಣ ಹಾನಿಯಾಗಿವೆ. ಇವುಗಳೆಲ್ಲ ದೀರ್ಘಕಾಲಿಕ ಬೆಳೆಗಳಾಗಿದ್ದು, ಒಮ್ಮೆ ಹಾನಿಯಾದರೆ ಮತ್ತೆ ಬೆಳೆ ಬರಲು ಕನಿಷ್ಟ ನಾಲ್ಕೈದು ವರ್ಷವಾದರೂ ಬೇಕಾಗುತ್ತದೆ. ಈಗ ಸಾಕಷ್ಟು ರೈತರ ಬೆಳೆ ಹಾನಿಯಾಗಿದ್ದು, ಹಾನಿಯಾದ ರೈತರಿಗೆ ಸೂಕ್ತ ಪರಿಹಾರ ಮತ್ತು ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಮನವಿಯಲ್ಲಿ ತಿಳಿಸಿದ್ದಾರೆ. ಭೀಮಣ್ಣ ಉಪ್ಪಾರ, ಗುರಪ್ಪ ಅಗಸರ, ಶ್ರೀನಿವಾಸ ತಳವಾರ, ರೇವಪ್ಪ ಹಲಸಂಗಿ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ
Vijayapura: ವಕ್ಫ್ ವಿರುದ್ಧ ಹಲವು ಮಠಾಧೀಶರ ನೇತೃತ್ವದಲ್ಲಿ ಹೋರಾಟ
MUST WATCH
ಹೊಸ ಸೇರ್ಪಡೆ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.