ಬಾಣಸಿಗ ಸಾವು, ಹಾಕಿ ಆಟಗಾರರ ವರ್ಗಾವಣೆ ಇಲ್ಲ: ಸಾಯ್ ಸ್ಪಷ್ಟನೆ
Team Udayavani, May 21, 2020, 6:40 AM IST
ಸಾಂದರ್ಭಿಕ ಚಿತ್ರ.
ಬೆಂಗಳೂರು: ಬಾಣಸಿಗನೊಬ್ಬ ಕೋವಿಡ್-19 ವೈರಸ್ ಸೋಂಕು ತಗುಲಿ ಸಾವಿಗೀಡಾಗಿರುವುದು ದೃಢಪಟ್ಟಿದ್ದರೂ ಭಾರತೀಯ ಪುರುಷ ಮತ್ತು ವನಿತಾ ಹಾಕಿ ಆಟಗಾರರನ್ನು ಬೆಂಗಳೂರಿನ ಭಾರತೀಯ ಕ್ರೀಡಾ ಪ್ರಾಧಿಕಾರ (ಸಾಯ್)ದಿಂದ ಬೇರೆಡೆಗೆ ವರ್ಗಾವಣೆ ಮಾಡುವ ಆಲೋಚನೆ ಇಲ್ಲ ಎಂದು ಹಾಕಿ ಇಂಡಿಯಾ ಸ್ಪಷ್ಟಪಡಿಸಿದೆ.
ಆಟಗಾರರು ಹಾಗೂ ಅಡುಗೆ ಸಿಬಂದಿ ಇದ್ದ ಸ್ಥಳಕ್ಕೆ ಸಾಕಷ್ಟು ದೂರವಿತ್ತು, ಇದರಿಂದ ರೋಗ ಹರಡುವ ಸಾಧ್ಯತೆ ಕಡಿಮೆ, ಈಗ ದೇಶವ್ಯಾಪಿ ಲಾಕ್‌ಡೌನ್ ಇದೆ, ಇಂತಹ ಸಂದರ್ಭದಲ್ಲಿ ಆಟಗಾರರನ್ನು ಬೇರೆಡೆಗೆ ಸ್ಥಳಾಂತರಿಸುವುದು ಸರಿಯಲ್ಲ’ ಎಂದು ಹಾಕಿ ಇಂಡಿಯಾ ಸಿಇಒ ಎಲೆನಾ ನಾರ್ಮನ್ ತಿಳಿಸಿದ್ದಾರೆ.
“ಕೋವಿಡ್-19 ಹಿನ್ನೆಲೆಯಲ್ಲಿ ಮಾ.10ರಿಂದ ಸಾಯ್‌ನ ಬಾಣಸಿಗ ಸೇರಿದಂತೆ 60 ಮಂದಿ ಸಿಬಂದಿಗೆ ರಜೆ ನೀಡಿ ಕಳುಹಿಸಲಾಗಿತ್ತು, ಅಲ್ಲಿಂದ ನಂತರ ಸಾಯ್ ಗೇಟ್ ಸಮೀಪಕ್ಕೂ ಯಾರೂ ಬಂದಿಲ್ಲ, ಇತ್ತೀಚೆಗೆ ಸಂಬಂಧಿಕರ ಮಗುವನ್ನು ನೋಡಲು ಆಸ್ಪತ್ರೆಗೆ ಹೋಗಿದ್ದ ವೇಳೆ ಬಾಣಸಿಗನಿಗೆ ಹೃದಯಾಘಾತವಾಗಿದೆ, ಆತನನ್ನು ಬದುಕಿಸಲು ಪ್ರಯತ್ನ ನಡೆಸಲಾಗಿತ್ತಾದರೂ ಅಂತಿಮವಾಗಿ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದ, ಸಾವಿನ ಅನಂತರ ನಿಯಮದಂತೆ ಕೋವಿಡ್-19 ಟೆಸ್ಟ್ ಮಾಡಲಾಗಿದೆ, ಈ ವೇಳೆ ಬಾಣಸಿಗನಲ್ಲಿ ಕೊರೊನಾ ವೈರಸ್ ಸೋಂಕು ಪತ್ತೆಯಾಗಿತ್ತು, ಬೆನ್ನಲ್ಲೇ ಬಾಣಸಿಗನೊಂದಿಗೆ ಸಂಪರ್ಕ ಹೊಂದಿದ್ದ 60 ಸಿಬಂದಿಗೆ ಕ್ವಾರೆಂಟೈನ್‌ಗೆ ಒಳಪಡಿಸಲಾಗಿದೆ’ ಎಂದು ಸಾಯ್ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.