ಜನರಲ್ಲಿ ಜಾಗೃತಿ ಮೂಡಿಸುವ ಸವಾಲು ನಮ್ಮ ಮುಂದೆ

Team Udayavani, May 21, 2020, 5:42 AM IST

savalu

ಕಳೆದೆರಡು ದಿನಗಳಿಂದ ಲಾಕ್‌ಡೌನ್‌ ಬಹುತೇಕ ತೆರವಾಗಿದೆ. ಪರಿಣಾಮ ನಿಧಾನವಾಗಿ ಎಂದಿನ ಟ್ರಾಫಿಕ್‌, ಗೋಜುಗದ್ದಲ, ಧಾವಂತದೊಂದಿಗೆ ಸಹಜ ಸ್ಥಿತಿಗೆ ನಗರ ಹೊರಳುತ್ತಿದೆ. ಜನರಲ್ಲಿ ಜಾಗೃತಿ ಮೂಡಿಸುವ ಸವಾಲು ಕೂಡ  ಮುಂದಿದೆ. ಈ ಹಿನ್ನೆಲೆಯಲ್ಲಿ ಆಯಾ ಸಂಘ-ಸಂಸ್ಥೆಗಳು ಕೈಗೊಂಡ ಕ್ರಮಗಳ ಬಗ್ಗೆ ಸ್ವತಃ ಮುಖ್ಯಸ್ಥರು “ಉದಯವಾಣಿ’ಯೊಂದಿಗೆ ಹಂಚಿಕೊಂಡಿದ್ದಾರೆ.

ಸಂಸ್ಥೆಯ ಲಾಭ-ನಷ್ಟಕ್ಕಿಂತ ಸಿಬ್ಬಂದಿ ಹಾಗೂ ಪ್ರಯಾಣಿಕರ ಸುರಕ್ಷತೆ ನಮಗೆ ಅತ್ಯಂತ ಮುಖ್ಯ. ಈ ಹಿನ್ನೆಲೆಯಲ್ಲಿ ಕೇವಲ ಮಾಸ್ಕ್ ಮತ್ತು ಸಾಮಾಜಿಕ ಅಂತರವಲ್ಲದೆ ಬಿಎಂಟಿಸಿ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.   ನಿರ್ವಾಹಕರಿಗೆ ಮಾಸ್ಕ್ ಜತೆಗೆ ವೈಸರ್‌ಗಳನ್ನು ವಿತರಿಸಲಾಗಿದೆ. ಜತೆಗೆ ಪ್ರಾಯೋಗಿಕವಾಗಿ 75 ಬಸ್‌ ಗಳಲ್ಲಿ ಕ್ಯುಆರ್‌ ಕೋಡ್‌ ಆಧಾರಿತ ಟಿಕೆಟ್‌ ವಿತರಣೆ ವ್ಯವಸ್ಥೆ ಕಲ್ಪಿಸಲಾಗಿದೆ. ಇದನ್ನು ಮುಂದಿನ ವಾರಗಳಲ್ಲಿ ಹಂತ-ಹಂತ ವಾಗಿ  ಉಳಿದ ಬಸ್‌ಗಳಿಗೂ ವಿತರಿಸುವ ಚಿಂತನೆ ಇದೆ. ಬುಧವಾರ ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಸೆನ್ಸರ್‌ ಆಧಾರಿತ ಸ್ಯಾನಿಟೈಸರ್‌ ವ್ಯವಸ್ಥೆ ಮಾಡಲಾಗಿದೆ. ಪ್ರಯಾಣಿಕರು ಬರುತ್ತಿಲ್ಲ ಎಂಬುದಕ್ಕೆ ಕೇವಲ ಜನರಲ್ಲಿ ಆವರಿಸಿರುವ ಭೀತಿ ಕಾರಣವಲ್ಲ; ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.  ಎಷ್ಟೋ ಕಾರ್ಮಿಕರು ವಾಪಸ್‌ ಊರುಗಳಿಗೆ ತೆರಳಿದ್ದಾರೆ. ಕೆಲವರಿಗೆ ಈಗಲೂ ವರ್ಕ್‌ ಫ್ರಮ್‌ ಹೋಂ ಮುಂದುವರಿ ದಿದೆ. ನಿಧಾನವಾಗಿ ಬಸ್‌ಗಳ ಕಾರ್ಯಾಚರಣೆ ಸಂಖ್ಯೆ   ಹೆಚ್ಚಿಸಲಾಗು ತ್ತಿದೆ. ಮಂಗಳವಾರ 2000 ಬಸ್‌ಗಳು ರಸ್ತೆಗಿಳಿದಿದ್ದವು. ಬುಧವಾರ 2,200ಕ್ಕೆ ಏರಿಕೆಯಾಗಿದ್ದು, ಗುರುವಾರ ಇನ್ನೂ 500 ಬಸ್‌ಗಳು ಓಡಾಡಲಿವೆ. ಸಹಜ ಸ್ಥಿತಿ ನಿರೀಕ್ಷೆ ಇದೆ.
-ಸಿ. ಶಿಖಾ, ವ್ಯವಸ್ಥಾಪಕ ನಿರ್ದೇಶಕರು, ಬಿಎಂಟಿಸಿ

ಲಾಕ್‌ಡೌನ್‌ ಸಡಿಲಿಕೆ ಬೆನ್ನಲ್ಲೇ ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡುತ್ತಿದ್ದೇವೆ. ಜತೆಗೆ ಪೊಲೀಸ್‌ ಇಲಾಖೆ (ಕಾನೂನು ಸುವ್ಯವಸ್ಥೆ ಹಾಗೂ ಸಂಚಾರ  ವಿಭಾಗ)ಯ  ಕಾರ್ಯ ಚಟು ವಟಿಕೆಗಳು ಬೆಳಿಗ್ಗೆ 7ರಿಂದ ರಾತ್ರಿ 7ರವರೆಗೆ ನಡೆಯುತ್ತವೆ. ರಾತ್ರಿ ಪಾಳಿಯಲ್ಲಿ ಎಂದಿನಂತೆ ಕಾನೂನು ಸುವ್ಯವಸ್ಥೆ ಪಾಲನೆ ಮಾಡಲಾಗುತ್ತದೆ. ಭಾನುವಾರ ಸಂಪೂರ್ಣ ಲಾಕ್‌ ಡೌನ್‌ ಇರುವುದ ರಿಂದ ಈ ಮೊದಲಿನಂತೆ  ಕಟ್ಟುನಿಟ್ಟಿನ ಪೊಲೀಸ್‌ ಬಂದೋಬಸ್ತ್ ಜಾರಿಯಲ್ಲಿರುತ್ತದೆ. ಈ ವೇಳೆ ಸಾರ್ವಜನಿಕರು ನಿಯಮ ಮೀರಿದರೆ ಕಾನೂನು ಕ್ರಮಕೈಗೊಳ್ಳಲಾಗುವುದು. ಅನಗತ್ಯ ವಾಹನಗಳ ಓಡಾಟಕ್ಕೆ ಬ್ರೇಕ್‌ ಹಾಕಲಾಗುವುದು. ಒಟ್ಟಾರೆ ಕೊರೊನಾ  ಹರಡುವಿಕೆ ತಡೆಯಲು ಪೊಲೀಸರು ಹಾಗೂ ಇತರೆ ಇಲಾಖೆಗಳ ಜತೆ ಸಾರ್ವಜನಿಕರು ಕೈಜೋಡಿಸಬೇಕು.
-ಭಾಸ್ಕರ್‌ ರಾವ್‌, ನಗರ ಪೊಲೀಸ್‌ ಆಯುಕ್ತರು

ರಾಜ್ಯದ ಆರ್ಥಿಕ ಎಂಜಿನ್‌ನ ಮೂಲ ಸಣ್ಣ ಮತ್ತು ಅತಿಸಣ್ಣ ಕೈಗಾರಿಕೆಗಳು. ಸರಿಸುಮಾರು 6.50 ಲಕ್ಷ ಈ ಮಾದರಿಯ ಕೈಗಾರಿಕೆಗಳಿದ್ದು, 60-65 ಲಕ್ಷ ಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಪ್ರತಿ ಹಂತದಲ್ಲೂ ಆ ಎಲ್ಲ ಕಾರ್ಮಿಕರ  ಆರೋಗ್ಯದ ಮೇಲೆ ನಿಗಾ ಇಡಲಾಗುತ್ತಿದೆ. ಯಾಕೆಂದರೆ, ಈಗಾಗಲೇ ಸುದೀರ್ಘ‌ಲಾಕ್‌ಡೌನ್‌ನಿಂದ ಉದ್ಯಮಿಗಳು ಸಾಕಷ್ಟು ನಷ್ಟ ಅನುಭವಿಸಿದ್ದಾರೆ. ಹಾಗಾಗಿ, ನನ್ನ ಪ್ರಕಾರ ಕಾರ್ಮಿಕರ ಆರೋಗ್ಯದ ಮೇಲೆ ಈಗ ಕೈಗಾರಿಕೆ ಮಾಲಿಕರಿಗೇ ಹೆಚ್ಚು ಹೊಣೆಗಾರಿಕೆ ಇದೆ. ಈ ಹಿನ್ನೆಲೆಯಲ್ಲಿ ಕೆಲಸಕ್ಕೆ ಬರುವ ಕಾರ್ಮಿಕರಿಗೆ ಥರ್ಮಲ್‌ ಸ್ಕ್ರೀನಿಂಗ್‌, ಮಾಸ್ಕ್ ಕಡ್ಡಾಯ, ಊಟದ ವ್ಯವಸ್ಥೆ ಮತ್ತಿತರ ಕ್ರಮ ಕೈಗೊಳ್ಳಲಾಗಿದೆ.
-ಆರ್‌. ರಾಜು, ಅಧ್ಯಕ್ಷರು, ಕಾಸಿಯಾ

ಕೇಂದ್ರ ಗೃಹ ಇಲಾಖೆ ಹಾಗೂ ರಾಜ್ಯ ಸರ್ಕಾರ ನೀಡಿರುವ ಮಾರ್ಗಸೂಚಿಗಳನ್ನು ಕೈಗಾರಿಕೆಗಳಲ್ಲಿ ಕಟ್ಟುನಿಟ್ಟಾಗಿ ಪಾಲಿಸಲು ಅಗತ್ಯ ಕ್ರಮಕೈಗೊಳ್ಳಲಾಗಿದೆ. ಯಾವುದೇ ಕಾರ್ಖಾನೆ, ಉದ್ಯಮದಲ್ಲಿ ಸೋಂಕು ಕಾಣಿಸಿಕೊಳ್ಳದ ರೀತಿಯಲ್ಲಿ ಎಚ್ಚರ ವಹಿಸಲಾಗಿದೆ. ಪ್ರತಿಯೊಬ್ಬ ಕಾರ್ಮಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಕೆಲಸಕ್ಕೆ ಹಾಜರಾಗುತ್ತಿದ್ದಾರೆ. ಕಾರ್ಮಿಕರು ಬೆಳಗ್ಗೆ ಆಗಮಿಸುತ್ತಿದ್ದಂತೆ ಅವರ ದೇಹದ ಉಷ್ಣಾಂಶ ತಪಾಸಣೆ ನಡೆಸುವ ವ್ಯವಸ್ಥೆ ಮಾಡಲಾಗಿದೆ. ಕಾರ್ಮಿಕರ ನಡುವೆ ಕನಿಷ್ಠ ಒಂದರಿಂದ ಎರಡು ಮೀಟರ್‌ ಅಂತರ ಕಾಯ್ದುಕೊಳ್ಳುವ ವ್ಯವಸ್ಥೆ ರೂಪಿಸಲಾಗಿದೆ. ಅಗತ್ಯವಿರುವ ಕಡೆಯೆಲ್ಲಾ ಸ್ಯಾನಿಟೈಸರ್‌ ಬಳಕೆ ವ್ಯವಸ್ಥೆ ಮಾಡಲಾಗಿದೆ. ಕಾರ್ಖಾನೆಗಳ ಕಾರ್ಯನಿರ್ವಹಣೆ  ಅವಧಯನ್ನು ಸಂಜೆ 5 ಗಂಟೆಗೆ ಮೊಟಕುಗೊಳಿಸಲಾಗಿದೆ. ಇದರಿಂದ ಕಾರ್ಮಿಕರು 7 ಗಂಟೆಗೆ ಮೊದಲೇ ಮನೆಗಳಿಗೆ ತೆರಳಲು ಅನುಕೂಲವಾಗಲಿವೆ. ರಾತ್ರಿ 7ರಿಂದ ಬೆಳಗ್ಗೆ 7ರವರೆಗೆ ಕರ್ಫ್ಯೂ ಜಾರಿಯಲ್ಲಿರುವುದರಿಂದ ಪಾಳಿಗಳಲ್ಲೂ  ಬದಲಾವಣೆ ಮಾಡಲಾಗಿದೆ. ಕಾರ್ಮಿಕರಲ್ಲೂ ಸಾಕಷ್ಟು ಜಾಗೃತಿಯಿದ್ದು, ಅವರು ಪೂರ್ಣ ಪ್ರಮಾಣದಲ್ಲಿ ಸಹಕರಿಸುತ್ತಿದ್ದಾರೆ.
-ಸಿ.ಆರ್‌. ಜನಾರ್ದನ್‌, ಅಧ್ಯಕ್ಷರು, ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್‌ಕೆಸಿಸಿಐ)

ಕೊರೊನಾ ತುರ್ತು ಸಂದರ್ಭದಲ್ಲಿ ಬಿಬಿಎಂಪಿ ಸಿಬ್ಬಂದಿ ಸಂಖ್ಯೆಯನ್ನು ಕಡಿಮೆ ಮಾಡಿಕೊಳ್ಳಲು ಸಾಧ್ಯವಿಲ್ಲ. ಆದರೆ, ತಂತ್ರಜ್ಞಾನ ಬಳಸಿಕೊಂಡು ಸಮಸ್ಯೆಗಳ ಪರಿಹಾರೋಪಾಯಗಳನ್ನು ಕೈಗೊಳ್ಳಲಾಗುತ್ತಿದೆ. ಸೋಂಕು  ಹಿನ್ನೆಲೆಯಲ್ಲಿ ಬಿಬಿಎಂಪಿ ಕಚೇರಿಗಳಿಗೆ ಸಾರ್ವಜನಿಕರು ಬರುವುದನ್ನು ತಡೆಯುವ ನಿಟ್ಟಿನಲ್ಲಿ ಆಯಾ ಸ್ಥಳಕ್ಕೆ ಅಧಿಕಾರಿಗಳೇ ಭೇಟಿ ನೀಡಲಿದ್ದಾರೆ. ಬಿಬಿಎಂಪಿ ಸಹಾಯವಾಣಿ, ಆ್ಯಪ್‌ಗ್ಳ ಮೂಲಕ ಸ್ಪಂದಿಸಲಿದ್ದಾರೆ. ಬಿಬಿಎಂಪಿ ಆ್ಯಪ್‌ನ  ಮೂಲಕ ತುರ್ತು ಪರಿಹಾರ, ದೂರುಗಳಿಗೆ ಸ್ಪಂದನೆ, ಸಂದೇಶ ರವಾನೆ, ಪೋನ್‌ಇನ್‌ ಕಾರ್ಯಕ್ರಮ, ವೆಬ್‌ಸೈಟ್‌ ಹಾಗೂ ಮಾಧ್ಯಮಗಳ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುವುದು.
-ವಿ. ಅನ್ಬುಕುಮಾರ್‌, ಬಿಬಿಎಂಪಿ ಆಡಳಿತ ವಿಭಾಗದ ವಿಶೇಷ ಆಯುಕ್ತರು.

ಟಾಪ್ ನ್ಯೂಸ್

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bengaluru

ಜಿ.ಪಂ-ತಾ.ಪಂ ಮೀಸಲು: ಮತ್ತೆ ಕಾಲಾವಕಾಶ ಕೇಳಿದ ಸರ್ಕಾರ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Jalandhara Kannada Movie: ಜಲಂಧರ ಮೇಲೆ ಪ್ರಮೋದ್‌ ಕಣ್ಣು

Jalandhara Kannada Movie: ಜಲಂಧರ ಮೇಲೆ ಪ್ರಮೋದ್‌ ಕಣ್ಣು

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.