ಕ್ವಾರಂಟೈನ್ ವಿರೋಧಿಸಿ ಪ್ರತಿಭಟನೆ
Team Udayavani, May 21, 2020, 6:20 AM IST
ಶಿವಮೊಗ್ಗ: ಹೊರ ರಾಜ್ಯ ಮತ್ತು ಜಿಲ್ಲೆಯಿಂದ ಬಂದವರನ್ನು ತಮ್ಮ ಏರಿಯಾದ ಹಾಸ್ಟೆಲ್‌ನಲ್ಲಿ ಕ್ವಾರಂಟೈನ್ ಮಾಡುವುದನ್ನು ವಿರೋಧಿಸಿ ಸ್ಥಳೀಯರು ದಿಢೀರ್ ಪ್ರತಿಭಟನೆ ನಡೆಸಿದರು. ಅಲ್ಲದೆ ಹಾಸ್ಟೆಲ್ ಒಳಗಿದ್ದ ಚೇರ್, ಟೇಬಲ್, ಸಿಸಿಟಿವಿ ಕ್ಯಾಮೆರಾಗಳನ್ನು ಧ್ವಂಸ ಮಾಡಿದ್ದಾರೆ.
ಶಿವಮೊಗ್ಗ ನಗರದ ಬಾಪೂಜಿ ನಗರದಲ್ಲಿ ಘಟನೆ ನಡೆದಿದೆ. ಇಲ್ಲಿನ ಸರ್ಕಾರಿ ಹಾಸ್ಟೆಲ್‌ನಲ್ಲಿ ಜಿಲ್ಲಾಡಳಿತ ಕ್ವಾರಂಟೈನ್‌ಗೆ ವ್ಯವಸ್ಥೆ ಮಾಡಿದೆ. ಇವತ್ತು ಕೆಲವರನ್ನು ಕ್ವಾರಂಟೈನ್ ಮಾಡಲು ಬಸ್ಸಿನಲ್ಲಿ ಕರೆತರಲಾಗಿತ್ತು. ಈ ವೇಳೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದರು.
ಹಾಸ್ಟೆಲ್ ಒಳನುಗ್ಗಿದ ಸ್ಥಳೀಯರು ದಾಂಧಲೆ ನಡೆಸಿದರು. ಯಾವುದೇ ಕಾರಣಕ್ಕೂ ಕ್ವಾರಂಟೈನ್‌ಗೆ ಅವಕಾಶ ಕೊಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಹಾಸ್ಟೆಲ್ ಒಳಗಿನ ಚೇರು, ಟೇಬಲ್, ಸಿಸಿ ಕ್ಯಾಮೆರಾ, ಗಿಡಗಳ ಪಾಟ್‌ಗಳನ್ನು ಒಡೆದು ಹಾಕಿದ್ದಾರೆ. ಕೆಲವರು ಹಾಸ್ಟೆಲ್‌ನತ್ತ ಕಲ್ಲು ತೂರಿದ್ದಾರೆ. ಉದ್ರಿಕ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ಕೊನೆಗೆ ಅನಿವಾರ್ಯವಾಗಿ ಲಘು ಲಾಠಿ ಪ್ರಹಾರ ನಡೆಸಿದರು.
ಹಾಸ್ಟೆಲ್ ಒಳಗಿನಿಂದ ಸ್ಥಳೀಯರನ್ನು ಹೊರಗೆ ಕಳುಹಿಸಲಾಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣವಿದೆ. ಹೆಚ್ಚುವರಿಯಾಗಿ ಪೊಲೀಸರನ್ನು ನಿಯೋಜಿಸಲಾಗಿದೆ. ಇದೇ ವೇಳೆ ಸ್ಥಳಕ್ಕೆ ಆಗಮಿಸಿದ ಉಪ ಮೇಯರ್ ಸುರೇಖಾ ಮುರಳೀಧರ್ ಅವರು ಸ್ಥಳೀಯರ ಜೊತೆ ಧ್ವನಿಗೂಡಿಸಿದರು. ಇದರಿಂದ ಪರಿಸ್ಥಿತಿ ಬಿಗಡಾಯಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.