ನರೇಗಾ ಮೂಲಕ ಕೆರೆಗಳ ಅಭಿವೃದ್ಧಿ: ಶಾಸಕ
Team Udayavani, May 21, 2020, 6:18 AM IST
ಚನ್ನರಾಯಪಟ್ಟಣ/ಬಾಗೂರು: ಲಾಕ್‌ಡೌನ್ ವೇಳೆ ಕೆಲಸ ಇಲ್ಲದೇ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದ ಕೂಲಿ ಕಾರ್ಮಿಕರಿಗೆ ಮತ್ತು ರೈತ ವರ್ಗಕ್ಕೆ ನೆರವಾಗುವ ಸಲುವಾಗಿ ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತರಿ(ನರೇಗಾ) ಮೂಲಕ 53.76 ಕೋಟಿ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.
ತಾಲೂಕಿನ ಬಾಗೂರು ಹೋಬಳಿ ಕೆ.ದಾಸಾಪುರ ಗ್ರಾಮದ ಕೆರೆ ಅಭಿವೃದ್ಧಿಗೆ ನರೇಗಾ ಜನೆಯಡಿ ಕೆರೆ ಹೂಳು ತೆಗೆಯವ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಜಲಸಂವರ್ಧನೆ, ಅರಣ್ಯೀ ಕರಣ, ಕೃಷಿ ಭೂಮಿಗೆ ಬದು ನಿರ್ಮಾಣ, ಕೃಷಿ ಹೊಂಡ ಹಾಗೂ ಕೆರೆ ಅಭಿವೃದ್ಧಿ ಸೇರಿದಂತೆ ವಿವಿಧ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, 17 ಲಕ್ಷ ಮಾನವ ದಿನಗಳು ಸೃಷ್ಟಿಯಾಗಲಿದೆ ಎಂದು ತಿಳಿಸಿದರು.
ರೈತರು ಹಾಗೂ ಕೂಲಿ ಕಾರ್ಮಿಕರು ಈ ಯೋಜ ನೆಯ ಲಾಭ ಪಡೆದುಕೊಳ್ಳಬೇಕು. ತಾಲೂಕಿನ ನೂರಾರು ಕೆರೆಗಳ ಹೂಳೆತ್ತುವ ಕಾಮಗಾರಿಯನ್ನು ಕೈಗೆತ್ತಿ ಕೊಂಡಿದ್ದು, ಸದ್ಯ ಈಗಾಗಲೇ 80 ಕೆರೆಗಳ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ, ಕೆಂಬಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ.ದಾಸಾಪುರ ಕೆರೆ 110 ಎಕರೆ ಸ್ತೀರ್ಣ ಹೊಂದಿದ್ದು 5 ಲಕ್ಷ ರೂ. ವೆಚ್ಚದಲ್ಲಿ ಹೂಳೆತ್ತುವ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು.
ಸರ್ಕಾರವು ದಿನವೊಂದಕ್ಕೆ ಒಬ್ಬ ಕಾರ್ಮಿಕನಿಗೆ 275 ರೂ. ಕೂಲಿಯಂತೆ 100 ದಿನಗಳು ಕೆಲಸ ನೀಡಲಿದ್ದು ಒಟ್ಟು 27,500 ರೂ. ಹಣ ಸಿಗಲಿದೆ. ಇದರಿಂದ ಪ್ರತಿಯೊಬ್ಬ ಕಾರ್ಮಿಕನ ಬದುಕು ಹಸನಾಗಲಿದೆ. ಸರ್ಕಾರದ ಗಮನ ಸೆಳೆದು ಹೆಚ್ಚುವರಿಯಾಗಿ ನರೇಗಾ ಯೋಜನೆಯನ್ನು ತಾಲೂಕಿಗೆ ತರಲಾಗುವುದು ಎಂದು ಭರವಸೆ ನೀಡಿದರು. ಕೆಂಬಾಳು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ
Devi Temple: ಹಾಸನಾಂಬೆ ದೇವಿ ದರ್ಶನ ಅವ್ಯವಸ್ಥೆ, ಭಕ್ತರ ಆಕ್ರೋಶ: ವಿಶೇಷ ಪಾಸ್ ರದ್ದು
Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್.ಡಿ.ರೇವಣ್ಣ ಕಿಡಿ
Party Clean: ಹೊಂದಾಣಿಕೆ ರಾಜಕಾರಣ ಮಾಡೋರಿಗೆ ಬಿಜೆಪಿಯಿಂದ ಗೇಟ್‌ಪಾಸ್: ಬಿ.ವೈ.ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.