ಕೃಷಿ ಪರಿಹಾರ ನಿಯಮ ಸಡಿಲಿಕೆಗೆ ರೈತರ ಆಗ್ರಹ
Team Udayavani, May 21, 2020, 12:09 PM IST
ಬೆಳಗಾವಿ: ಕೋವಿಡ್ ವೈರಸ್ ಹಾವಳಿ ತಡೆಗಟ್ಟಲು ಸರಕಾರ ಜಾರಿ ಮಾಡಿದ ಲಾಕ್ಡೌನ್ನಿಂದ ಸಣ್ಣ ರೈತರು, ಬಡಕುಟುಂಬಗಳು, ಕೃಷಿ ಕೂಲಿ ಕಾರ್ಮಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಸಣ್ಣ ರೈತರು ಬೆಳೆ ಪರಿಹಾರ ಪಡೆಯುವಂತಾಗಲು ನಿಯಮಾವಳಿಗಳನ್ನು ಸಡಿಲಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಸದಸ್ಯರು ಬುಧವಾರ ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಸಾಕಷ್ಟು ಬೆಳೆ ಹಾನಿ ಅನುಭವಿಸಿದ ಸಣ್ಣ ರೈತರಿಗೆ ಕನಿಷ್ಠ 50 ಸಾವಿರ ರೂ. ಪರಿಹಾರ ನೀಡಬೇಕು ಎಂದು ಮನವಿ ಸಲ್ಲಿಸಿದರು. ಲಾಕ್ಡೌನ್ನಿಂದ ಸಣ್ಣ ರೈತರು, ಭೂಮಿ ಇಲ್ಲದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಭೂಮಿಯ ಪಹಣಿ ಪತ್ರ ಇಲ್ಲದೇ ಹಾನಿಗೊಳಗಾದ ಬೆಳೆಗೆ ಪರಿಹಾರ ಪಡೆಯಲೂ ಸಹ ಅನರ್ಹರಾಗಿದ್ದಾರೆ. ಬೇರೆಯವರ ಭೂಮಿಯನ್ನು ಉತ್ತು, ಬಿತ್ತಿ ಬೆಳೆ ಪಡೆಯುವ ರೈತರಿಗೆ ಸರ್ಕಾರದ ಪರಿಹಾರ ಸಿಗುವುದಿಲ್ಲ. ಕಾರಣ ಸರ್ಕಾರ ನಿಯಮಾವಳಿಗಳನ್ನು ಸಡಿಲಗೊಳಿಸಿ, ಭೂಮಿ ಊಳುವವರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತಾಲೂಕಾಧ್ಯಕ್ಷ ಅಪ್ಪಾಸಾಹೇಬ ದೇಸಾಯಿ, ಸಣ್ಣ ರೈತರು ಬದುಕುವ ಸ್ಥಿತಿಯಲ್ಲಿ ಇಲ್ಲ. ಸರ್ಕಾರ ಸ್ಥಳೀಯವಾಗಿ ಸರ್ವೇ ಮಾಡಿಸಿ ಬಡ ರೈತರನ್ನು ಗುರುತಿಸಬೇಕು. ಸಣ್ಣ ರೈತರಿಗೆ, ಬಡ ಕುಟುಂಬಗಳಿಗೆ ಕನಿಷ್ಠ 50 ಸಾವಿರ ರೂ. ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ರಾಮನಗೌಡ ಪಾಟೀಲ, ನಾಮದೇವ ದುಡುಂ, ಮಾರುತಿ ಕಡೆಮನಿ, ಗಜು, ದುಂಡಪ್ಪ ಪಾಟೀಲ ಮೊದಲಾದವರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.