196 ಜನರಿಗೆ ಹೋಂ ಕ್ವಾರಂಟೈನ್
Team Udayavani, May 21, 2020, 1:00 PM IST
ಸಾಂದರ್ಭಿಕ ಚಿತ್ರ
ಚಳ್ಳಕೆರೆ: ಜಿಲ್ಲಾಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಮತ್ತು ತಾಲೂಕು ಕೋವಿಡ್ ನಿಯಂತ್ರಣ ಟಾಸ್ಕ್ಪೋರ್ಸ್ ಮಾರ್ಗದರ್ಶನದಲ್ಲಿ ಕಳೆದ 56 ದಿನಗಳಿಂದ ಆರೋಗ್ಯ ಇಲಾಖೆ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದೇವೆ. ಕೋವಿಡ್ ನಿಯಂತ್ರಣ ಕಾರ್ಯದಲ್ಲಿ ಸಾಕಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ| ಎನ್.ಪ್ರೇಮಸುಧಾ ತಿಳಿಸಿದ್ದಾರೆ.
ಆರ್‌ಆರ್‌ಟಿ ತಂಡದವರು, ಆರೋಗ್ಯ ಇಲಾಖೆ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಜನರಲ್ಲಿ ಜಾಗೃತಿ ಮೂಡಿಸಿದ್ದಾರೆ. ಹೊರ ರಾಜ್ಯ ಮತ್ತು ಜಿಲ್ಲೆಯ ವ್ಯಕ್ತಿಗಳ ಚಲನವಲನದ ಮೇಲೆ ಗಮನವಿಟ್ಟು ಅವರನ್ನು ಪತ್ತೆ ಹಚ್ಚಿ ಕರೆತಂದು ಪರೀಕ್ಷೆ ನಡೆಸಿ ಕ್ವಾರಂಟೈನಲ್ಲಿಡಲಾಗಿದೆ. ಪ್ರಸ್ತುತ ಕಿತ್ತೂರು ರಾಣಿ ಚನ್ನಮ್ಮ, ಮೊರಾರ್ಜಿ, ಬಿಸಿಎಂ ಹಾಸ್ಟೆಲ್, ಆದರ್ಶ ಶಾಲೆ, ಬಾಲೇನಹಳ್ಳಿ ಇಂದಿರಾ ವಸತಿ ಶಾಲೆ ಮತ್ತಿತರರ ಕಡೆ 196 ಜನರನ್ನು ವಸತಿ ಕ್ವಾರಂಟೈನ್ ಮಾಡಲಾಗಿದೆ. ಇದರಲ್ಲಿ ಹೊರ ರಾಜ್ಯದ 56 ಕೂಲಿ ಕಾರ್ಮಿಕರೂ ಸೇರಿದ್ದಾರೆ. ಮೂರು ದಿನಗಳ ಹಿಂದೆ ಸರ್ಕಾರಿ ಆಸ್ಪತ್ರೆ ವೈದ್ಯರು, ಶುಶ್ರೂಷಕಿಯರು ಹಾಗೂ ಚಾಲಕರ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಎಲ್ಲರ ವರದಿಯೂ ನೆಗೆಟಿವ್ ಆಗಿದೆ ಎಂದು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.