ಗದಗ: ವಲಸೆ ಕಾರ್ಮಿರಿಂದಲೇ ಜಿಲ್ಲೆಯಲ್ಲಿ ಹೆಚ್ಚುತ್ತಿದೆ ಕೋವಿಡ್-19
Team Udayavani, May 21, 2020, 3:09 PM IST
ಗದಗ: ಜಿಲ್ಲೆಯಲ್ಲಿ ಗುರುವಾರ ಹೊಸದಾಗಿ ಎರಡು ಕೋವಿಡ್-19 ಪಾಸಿಟಿವ್ ಪ್ರಕರಣಗಳು ಕಂಡು ಬಂದಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 14ಕ್ಕೆ ಏರಿಕೆಯಾಗಿವೆ. ಇಷ್ಟು ದಿನ ನಗರಕ್ಕೆ ಸೀಮಿತವಾಗಿದ್ದ ಕೋವಿಡ್-19, ಜಿಲ್ಲೆಯ ಗ್ರಾಮೀಣ ಪ್ರದೇಶಕ್ಕೂ ವ್ಯಾಪಿಸುತ್ತಿದೆ. ವಲಸಿಗರಿಂದಾಗಿ ದಿನ ಕಳೆದಂತೆ ಕೋವಿಡ್-19 ಪಾಸಿಟಿವ್ ಪ್ರಕರಣಗಳ ಸಂಖ್ಯೆ ಏರುಮುಖವಾಗಿವೆ.
ಮಹಾರಾಷ್ಟ್ರದ ಮುಂಬೈ ಪ್ರಯಾಣ ಮಾಡಿರುವ 32 ವರ್ಷದ ವ್ಯಕ್ತಿ(ಪಿ.1566), ಛತ್ತೀಸಘಡ್‌ದಿಂದ ಆಗಮಿಸಿರುವ 28 ವರ್ಷ ವ್ಯಕ್ತಿ(ಪಿ.1567) ಗೆ ಸೋಂಕು ದೃಢ ಪಟ್ಟಿದೆ. ಲಾಕ್‌ಡೌನ್ ಸಡಿಲಿಕೆಯಾಗಿದ್ದರಿಂದ ಹೊರ ರಾಜ್ಯದಿಂದ ತವರು ಜಿಲ್ಲೆಗೆ ಆಗಮಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಅವರನ್ನು ಕೋವಿಡ್ ಸೋಂಕು ಪತ್ತೆಗಾಗಿ ಪರೀಕ್ಷೆಗೊಳಪಡಿಸಿದ್ದರಿಂದ ಪಾಸಿಟಿವ್ ಪ್ರಕರಣಗಳು ಕಂಡು ಬಂದಿವೆ ಎಂದು ಹೇಳಲಾಗಿದೆ.
ಗುರುವಾರ ದೃಢಪಟ್ಟಿರುವ ಎರಡು ಸೇರಿದಂತೆ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 14ಕ್ಕೆ ಹೆಚ್ಚಳವಾಗಿದೆ. ಸೋಂಕಿತರನ್ನು ಇಲ್ಲಿನ ನಿಗದಿತ ಕೋವಿಡ್-19 ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಸಕ್ರಿಯ 14 ಸೇರಿದಂತೆ ಒಟ್ಟು 20 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಈ ಪೈಕಿ ಜಿಲ್ಲೆಯ ಮೊದಲ ಪ್ರಕರಣ ಪಿ.166 ಕಾರ್ಡಿಕ್ ಅರೆಸ್ಟ್‌ನಿಂದ ಮೃತಪಟ್ಟಿದ್ದು, ಐವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಅದರಲ್ಲೂ ಇತ್ತೀಚೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಲಾಕ್‌ಡೌನ್ ನಿಂದ ಸಡಿಲಿಕೆ ನೀಡಿದ್ದರಿಂದ ಬೇರೆ ರಾಜ್ಯಗಳಿಗೆ ವಲಸೆ ಹೋಗಿದ್ದ ಕಾರ್ಮಿಕರು ಇದೀಗ ತವರಿನತ್ತ ಮುಖಮಾಡುತ್ತಿದ್ದು, ಕೋವಿಡ್-19 ಸೋಂಕಿನ ಸಂಖ್ಯೆ ಗಗನ ಮುಖಿಯಾಗಿದ್ದು, ಜಿಲ್ಲೆಯ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.