ಪ್ರೇಯಸಿ ಮೇಲೆ ಗುಂಡಿನ ದಾಳಿ ನಡೆಸಿ ಆತ್ಮಹತ್ಯೆಗೆ ಶರಣಾದ ನಟ ಮಿಲ್ಸ್
ಕೆಂಟುಕಿ ಮೇಫೀಲ್ಡ್ ನಲ್ಲಿದ್ದ ಪ್ರೇಯಸಿ ಎರಿಕಾ ಪ್ರೈಸ್ ಮೇಲೆ ಹ್ಯಾಗನ್ ಗುಂಡಿನ ದಾಳಿ ನಡೆಸಿದ್ದ.
Team Udayavani, May 21, 2020, 4:07 PM IST
ವಾಷಿಂಗ್ಟನ್: ಪ್ರೇಯಸಿ ಮೇಲೆ ಗುಂಡು ಹಾರಿಸಿದ ಬಳಿಕ ತಾನೇ ಗುಂಡು ಹೊಡೆದುಕೊಂಡು ಹಾಲಿವುಡ್ ನಟ ಹ್ಯಾಗನ್ ಮಿಲ್ಸ್ (29ವರ್ಷ) ಸಾವನ್ನಪ್ಪಿರುವ ಘಟನೆ ಅಮೆರಿಕದ ಕೆಂಟುಕಿಯಲ್ಲಿ ನಡೆದಿದೆ.
ಹಾಲಿವುಡ್ ಟಿವಿ ಸರಣಿ ಬಾಸ್ಕೆಟ್ಸ್ ನಲ್ಲಿ ನಟಿಸಿದ್ದ ಹ್ಯಾಗನ್ ತನಗೆ ತಾನೇ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಇಂಟರ್ ನ್ಯಾಷನಲ್ ವೆಬ್ ಸೈಟ್ ಡೆಡ್ ಲೈನ್ ಆ್ಯಂಡ್ ವೆರೈಟಿ ವರದಿ ಮಾಡದಿದೆ.
ಕೆಂಟುಕಿ ಮೇಫೀಲ್ಡ್ ನಲ್ಲಿದ್ದ ಪ್ರೇಯಸಿ ಎರಿಕಾ ಪ್ರೈಸ್ ಮೇಲೆ ಹ್ಯಾಗನ್ ಗುಂಡಿನ ದಾಳಿ ನಡೆಸಿದ್ದ. ಇದರಿಂದ ಗಾಯಗೊಂಡಿದ್ದ ಆಕೆಯನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ನಂತರ ಹ್ಯಾಗನ್ ತನಗೆ ತಾನೇ ಶೂಟ್ ಮಾಡಿಕೊಂಡಿದ್ದ. ಆತ ಸ್ಥಳದಲ್ಲಿಯೇ ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.
ಘಟನೆಗೆ ಸಂಬಂಧಿಸಿದಂತೆ ಎರಿಕಾ ಮೇಫೀಲ್ಡ್ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ್ದಳು. ಗುಂಡಿನ ದಾಳಿಯಲ್ಲಿ ಆಕೆಯ ಕೈ ಮತ್ತು ಎದೆಗೆ ಗಾಯವಾಗಿತ್ತು ಎಂದು ವರದಿ ವಿವರಿಸಿದೆ. ಹ್ಯಾಗನ್ ಮಿಲ್ಸ್ 1990ರ ಆಗಸ್ಟ್ 9ರಂದು ಜನಿಸಿದ್ದ. ಹಾಲಿವುಡ್ ನ ಬಾಸ್ಕೆಟ್ಸ್ ಸರಣಿ ಹೊರತುಪಡಿಸಿ, 2016ರ ಸ್ವೀಡಿಶ್ ಡಿಕ್ಸ್, ಇನ್ ವಾಲಂಟರಿಯಲಿ ಸಿಂಗಲ್ ಸರಣಿಯಲ್ಲಿ ನಟಿಸಿರುವುದಾಗಿ ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
Kochi: ಲೈಂಗಿಕ ಕಿರುಕುಳ ಕೇಸು ವಾಪಸ್ ಪಡೆಯಲ್ಲ ಎಂದ ಮಲಯಾಳಿ ನಟಿ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.