ಬಡವರು-ಕೃಷಿಕರ ನೆರವಿಗೆ ಹಲವು ಯೋಜನೆ ಜಾರಿ
Team Udayavani, May 21, 2020, 4:49 PM IST
ಕಾರಟಗಿ: ಕೋವಿಡ್ ಲಾಕ್ ಡೌನ್‌ದಿಂದ ತೊಂದರೆಗೊಳಗಾದ ಬಡವರು, ಕೂಲಿಕಾರ್ಮಿಕರು, ಕೃಷಿಕರಿಗೆ ಸಿಎಂ ಯಡಿಯೂರಪ್ಪ ಹಲವು ಯೋಜನೆ ಜಾರಿಗೆ ತಂದಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಬಿ.ಸಿ. ಪಾಟೀಲ ಹೇಳಿದರು.
ಪಟ್ಟಣದ ಪಬ್ಲಿಕ್ ಶಾಲೆ ಆವರಣದ ಸಿದ್ದೇಶ್ವರ ರಂಗಮಂದಿರಲ್ಲಿ ಮಂಗಳವಾರ ಶಾಸಕ ಬಸವರಾಜ ದಡೇಸುಗೂರು ಹಮ್ಮಿಕೊಂಡ ಅಕ್ಕಿ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಲಾಕ್ ಡೌನ್‌ದಿಂದ ಸಂಕಷ್ಟಕ್ಕೊಳಗಾದ ಎಲ್ಲ ಬಡ ಕುಟುಂಬಗಳಿಗೆ ಪಡಿತರ ದೊರೆಯುವಂತೆ ಬಿಜೆಪಿ ಸರ್ಕಾರ ಮಾಡಿದೆ. ಬಡ ಕೃಷಿ ಕೂಲಿಕಾರ್ಮಿಕರಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿಯಡಿ ಹಲವು ಕಾಮಗಾರಿ ಆರಂಭಿಸಲಾಗಿದೆ. ಗ್ರಾಮೀಣ ಜನತೆ ಇದರ ಪ್ರಯೋಜನ ಪಡೆಯಬೇಕು ಎಂದರು.
ಸಂಸದ ಸಂಗಣ್ಣ ಕರಡಿ ಮಾತನಾಡಿ, ಲಾಕ್‌ಡೌನ್‌ದಿಂದ ಸಂಕಷ್ಟಕ್ಕೊಳಗಾದ ಕನಕಗಿರಿ ಕ್ಷೇತ್ರದ ಬಡವರಿಗೆ ಶಾಸಕ ಬಸವರಾಜ ದಡೇಸುಗೂರ ಅಕ್ಕಿ, ದಿನಸಿ ಕಿಟ್ ವಿತರಿಸಿದ್ದು ಶ್ಲಾಘನೀಯ. ಜನತೆ ಸಾಮಾಜಿಕ ಅಂತರ ಕಾಪಾಡಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಿ ಕೋವಿಡ್ ತಡೆಗೆ ಸಹಕರಿಸಬೇಕು ಎಂದರು.
ಸಂಸದ ಸಂಗಣ್ಣ ಕರಡಿ, ಶಾಸಕ ಬಸವರಾಜ ದಡೇಸುಗೂರ, ಶಾಸಕ ಪರಣ್ಣ ಮನವಳ್ಳಿ ಬಡವರಿಗೆ ದಿನಸಿ ಕಿಟ್ ವಿತರಿಸಿದರು. ಬಿ.ಜಿ.ಅರಳಿ, ಜಿ.ತಿಮ್ಮನಗೌಡ, ವಿರೇಶ ಸಾಲೋಣಿ, ಬಿಜೆಪಿ ಮಂಡಳ ಅಧ್ಯಕ್ಷ ಚಂದ್ರಶೇಖರ ಮುಸಾಲಿ, ರಾಮಮೋಹನ, ನಾಗರಾಜ ಬಿಲ್ಗಾರ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Kushtagi: ಬಸ್ ಸೇವೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.