ವಿವಿಧ ಬೇಡಿಕೆ ಈಡೇರಿಕೆಗೆ ಸಿಪಿಐಎಂ ಒತ್ತಾಯ
Team Udayavani, May 21, 2020, 5:08 PM IST
ಹಗರಿಬೊಮ್ಮನಹಳ್ಳಿ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಪಿಐಎಂ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು
ಹಗರಿಬೊಮ್ಮನಹಳ್ಳಿ: ರಾಜ್ಯದ ಕೃಷಿಕರು, ಕಾರ್ಮಿಕರು, ಬಡವರು, ದಲಿತರು ಹಾಗೂ ಮಹಿಳೆಯರು ಕೋವಿಡ್-19 ವೈರಸ್‌ನಿಂದಾಗಿ ಆರ್ಥಿಕ ಬಿಕ್ಕಟ್ಟಿನಲ್ಲಿ ತೊಳಲಾಡುತ್ತಿದ್ದಾರೆ. ಸರಕಾರ ಕೂಡಲೇ ಇವರ ಸಹಾಯಕ್ಕೆ ಬಂದು ಪ್ರೋತ್ಸಾಹಿಸಬೇಕು ಎಂದು ಜಿಲ್ಲಾ ಸಂಚಾಲಕ ಆರ್.ಎಸ್.ಬಸವರಾಜ ಹೇಳಿದರು.
ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಪಿಐಎಂ ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕೇಂದ್ರ ಸರಕಾರ ಶ್ರೀಮಂತರನ್ನು ಮತ್ತು ಕಾಪೋìರೇಟ್ ಕಂಪನಿಗಳನ್ನು ಸಂರಕ್ಷಿಸುತ್ತಿವೆ. ಸಂಕಷ್ಟದಲ್ಲಿರುವವರಿಗೆ ನೆರವು ನೀಡುವಲ್ಲಿ ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲವಾಗಿವೆ ಎಂದು ಹರಿಹಾಯ್ದರು. ಸಿಪಿಐಎಂ ರಾಜ್ಯ ಸಮಿತಿ ಸದಸ್ಯೆ ಬಿ.ಮಾಳಮ್ಮ ಮಾತನಾಡಿ, ಕಾರ್ಪೋರೇಟ್ ಕಂಪನಿಗಳ ಲೂಟಿಗೆ ನೆರವಾಗುವ ಎಪಿಎಂಸಿ ಕಾಯ್ದೆಗೆ ಸುಗ್ರೀವಾಜ್ಞೆಗೆ ಮೂಲಕ ಮಾಡಲಾದ ತಿದ್ದುಪಡಿಯನ್ನು ಕೂಡಲೇ ಹಿಂಪಡೆಯಬೇಕು. ಖಾತ್ರಿಯಡಿ ರಾಜ್ಯಾದ್ಯಂತ ವ್ಯಾಪಕವಾಗಿ ಉದ್ಯೋಗ ಒದಗಿಸಬೇಕು ಎಂದರು.
ಸಿಪಿಐಎಂನ ಕಾರ್ಯದರ್ಶಿ ಎಸ್. ಜಗನ್ನಾಥ ಮಾತನಾಡಿ, ಬೆಳೆನಷ್ಟ ಅನುಭವಿಸಿದ ರೈತರ, ಮಹಿಳೆಯರ ಮೈಕ್ರೋ ಫೈನಾನ್ಸ್‌ಗಳಲ್ಲಿನ ಸಾಲ ಮನ್ನಾ ಮಾಡಬೇಕು. ಮಹಿಳೆಯರ ಗುಂಪು ಸಾಲಗಳನ್ನು ಮನ್ನಾ ಮಾಡಬೇಕು. ಬೆಳೆನಷ್ಟ ಪರಿಹಾರವನ್ನು ತಲಾ ಎಕರೆಗೆ 10,000 ರೂಗಳಂತೆ ನೀಡಬೇಕು ಎಂದು ಒತ್ತಾಯಿಸಿದರು. ಸಿಪಿಐಎಂನ ಮುಖಂಡರಾದ ಕೆ.ಗಾಳೆಪ್ಪ, ಮಂಜುನಾಥ, ಸಿ. ಹನುಮಂತ, ಎಂ. ಆನಂದ, ಕೆ. ಬಸವರಾಜ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.