ಉಡುಪಿಯಲ್ಲಿ ಮತ್ತೊಂದು ಕೋವಿಡ್ ಪ್ರಕರಣ: ರಾಜ್ಯದಲ್ಲಿಂದು 143 ಮಂದಿ ಸೋಂಕಿತರು
Team Udayavani, May 21, 2020, 5:58 PM IST
ಉಡುಪಿ: ಕೋವಿಡ್-19 ಸೋಂಕು ಇಂದು ಉಡುಪಿಯಲ್ಲಿ ಮತ್ತೋರ್ವನ ದೇಹ ಹೊಕ್ಕಿರುವುದು ದೃಢವಾಗಿದೆ. ಅಂತಾರಾಷ್ಟ್ರೀಯ ಪ್ರಯಾಣದ ಹಿನ್ನಲೆಯುಳ್ಳ ವ್ಯಕ್ತಿಗೆ ಕೋವಿಡ್-19 ಸೋಂಕು ದೃಢವಾಗಿದೆ. ರಾಜ್ಯದಲ್ಲಿ ಇಂದು ಒಟ್ಟು 143 ಜನರಿಗೆ ಕೋವಿಡ್-19 ಸೋಂಕು ತಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ವರದಿಯಲ್ಲಿ ಉಲ್ಲೇಖಿಸಿದೆ.
ಇಂದು ಮಧ್ಯಾಹ್ನದ ವರದಿಯಲ್ಲಿ 116 ಜನರಿಗೆ ಕೋವಿಡ್-19 ಸೋಂಕು ಇರುವ ಬಗ್ಗೆ ವರದಿಯಾಗಿತ್ತು. ನಂತರ ಮಂಡ್ಯದಲ್ಲಿ 18 ಪ್ರಕರಣ, ರಾಯಚೂರಿನಲ್ಲಿ ಐದು, ಕೋಲಾರದಲ್ಲಿ ಎರಡು, ಬೆಂಗಳೂರು ನಗರ ಮತ್ತು ಉಡುಪಿಯಲ್ಲಿ ತಲಾ ಒಂದು ಪ್ರಕರಣ ದೃಢವಾಗಿದೆ.
27 ಹೊಸ ಪ್ರಕರಣಗಳಲ್ಲಿ 22 ಪ್ರಕರಣಗಳು ಮಹಾರಾಷ್ಟ್ರದಿಂದ ಬಂದ ಪ್ರಯಾಣಿಕರಾಗಿದ್ದಾರೆ. ಕೋಲಾರದ ಓರ್ವ ತಮಿಳುನಾಡಿನಿಂದ ಬಂದಿದ್ದರೆ, ಮೂವರಿಗೆ ಸೋಂಕಿತ ಸಂಪರ್ಕದಿಂದ ಸೋಂಕು ತಾಗಿದೆ. ಉಡುಪಿಯ ವ್ಯಕ್ತಿ ಯುಎಇನಿಂದ ಬಂದವರಾಗಿದ್ದಾರೆ.
ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 1605ಕ್ಕೆ ಎರಿಕೆಯಾಗಿದೆ. ಇದರಲ್ಲಿ 571 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 41 ಮಂದಿ ಸೋಂಕಿನ ಕಾರಣದಿಂದ ಮೃತಪಟ್ಟಿದ್ದು, ಓರ್ವ ಸೋಂಕಿತ ಕೋವಿಡ್ ಅಲ್ಲದ ಕಾರಣದಿಂದ ಮರಣ ಹೊಂದಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.