ವಲಸೆ ಕಾರ್ಮಿಕರಿಗೆ ಪಡಿತರ ವಿತರಣೆಗೆ ಮಾನದಂಡ ಕಡ್ದಾಯ
Team Udayavani, May 21, 2020, 6:06 PM IST
ಸಾಂದರ್ಭಿಕ ಚಿತ್ರ
ವಿಜಯಪುರ: ಕೇಂದ್ರ ಸರ್ಕಾರದ ಆತ್ಮ ನಿರ್ಭರ್ ಭಾರತ್ ಯೋಜನೆಯಡಿ ರಾಜ್ಯದಲ್ಲಿ ಪಡಿತರ ಚೀಟಿ ಇಲ್ಲದ ವಲಸೆ ಕಾರ್ಮಿಕರಿಗೆ ಮೇ ಮತ್ತು ಜೂನ್ ತಿಂಗಳುಗಳಿಗೆ ಪಡಿತರ ವಿತರಣೆಗೆ ಮಾನದಂಡ ಪಾಲನೆಗೆ ಸೂಚಿಸಲಾಗಿದೆ. ಮೇ-ಜೂನ ತಿಂಗಳಿಗೆ 5 ಕೆಜಿ ಅಕ್ಕಿ, ಜೂನ್ ತಿಂಗಳಿಗೆ ಕಡಲೆ ವಿತರಿಸುವುದಾಗಿ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ತಿಳಿಸಿದ್ದಾರೆ.
ಆಹಾರಧಾನ್ಯ ಪಡೆಯಲು ಹಲವು ಮಾನದಂಡಗಳ ಪಾಲನೆಗೆ ಸೂಚಿಸಿದ್ದು, ವಲಸಿಗ ಫಲಾನುಭವಿಗಳು ಆಹಾರ ಭದ್ರತಾ ಕಾಯ್ದೆಯಡಿ ಯಾವುದೇ ರಾಜ್ಯದ ಪಡಿತರ ಫಲಾನುಭವಿ ಆಗರಿಬಾರದು. ಪ್ರತಿ ಫಲಾಭವಿ ಆಧಾರ್ ಸಂಖ್ಯೆಯ ಮೂಲಕ ಗುರುತಿಸಬೇಕು. ಇದರಿಂದ ಪಡಿತರ ಹಂಚುವಾಗ ಈ ವ್ಯಕ್ತಿ ಪಡಿತರ ಚೀಟಿ ಹೊಂದಿಲ್ಲ ಎಂಬುದನ್ನು ಖಚಿತ ಮಾಡಿಕೊಳ್ಳಲಾಗುತ್ತದೆ. ಪ್ರತಿ ಫಲಾನುಭವಿಗೆ ಆಹಾರಧಾನ್ಯ ವಿತರಿಸುವಾಗ ಫಲಾಭವಿಯ ಮೊಬೈಲ್ ಸಂಖ್ಯೆಗೆ ಬರುವ ಒಟಿಪಿ ಸಂಖ್ಯೆಯನ್ನು ತತ್ರಾಂಶದಲ್ಲಿ ನಮೂದಿಸಿದ ನಂತರವೇ ಆಹಾರಧಾನ್ಯ ವಿತರಿಸಲಾಗುವುದು. ವಿಜಯಪುರ ಜಿಲ್ಲೆಯಲ್ಲಿ ಈ ವರೆಗೆ ಸುಮಾರು 41,759 ಜನ ವಲಸೆ ಕಾರ್ಮಿಕರು ಇದ್ದಾರೆ ಎಂಬ ಮಾಹಿತಿ ಲಭ್ಯವಿದೆ. ಸದರಿ ಕಾರ್ಮಿಕರಿಗೆ ಸುಮಾರು 418 ಮೆಟ್ರಿಕ್ ಟನ್ ಅಕ್ಕಿಯನ್ನು ಹಂಚಿಕೆ ಮಾಡಲಾಗಿದೆ ಎಂದು ವಿವರಿಸಿದ್ದಾರೆ.
ಹಂಚಿಕೆಯಾದ ಆಹಾರಧಾನ್ಯ ವಿಜಯಪುರ ನಗರದ, ತಾಲೂಕು ಕೇಂದ್ರ-ಗ್ರಾಮಗಳ ನಿಗದಿತ ನ್ಯಾಯಬೆಲೆ ಅಂಗಡಿ ಮೂಲಕ ಮೇ 26 ರಿಂದ 31ರ ವರೆಗೆ ಹಾಗೂ ಜೂನ್ ತಿಂಗಳಿಗಾಗಿ ಜೂನ್ 1 ರಿಂದ 10ರ ವರೆಗೆ ಪಡಿತರ ವಿತರಣೆ ನಡೆಯಲಿದೆ. ಮೇ ತಿಂಗಳಿನಲ್ಲಿ ಆಹಾರಧಾನ್ಯ ಪಡೆಯದ ಫಲಾನುಭವಿಗಳು ಜೂನ್ ತಿಂಗಳಿನಲ್ಲಿ ಒಟ್ಟಿಗೆ 10 ಕೆಜಿ ಅಕ್ಕಿ ಮತ್ತು ಕೇಂದ್ರ ಸರ್ಕಾರದ ಹಂಚಿಕೆಯಂತೆ ಕಡಲೆ ಪಡೆಯಬಹುದು. ವಿತರಣೆ ಸಮಯದಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ಫಲಾನುಭವಿಗಳಿಗೆ ಕೊವಿಡ್-19 ಕ್ಕೆ ನಿಯಂತ್ರಣಕ್ಕೆ ಈಗಾಗಲೇ ಸರ್ಕಾರದ ಸೂಚನೆಯಂತೆ ಸಾಮಾಜಿಕ ಅಂತರ ಹಾಗೂ ಸ್ಯಾನಿಟೈಜರ್ ಬಳಕೆ, ನೀರು ಸೌಲಭ್ಯ ಸೇರಿದಂತೆ ಇತರೆ ಎಲ್ಲ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವುದು. ಹಂಚಿಕೆಗೆ ನೀಡಲಾದ ಆಹಾರ ಧಾನ್ಯಗಳನ್ನು ನ್ಯಾಯಬೆಲೆ ಅಂಗಡಿಗಳಾಗಲಿ ಫಲಾನುಭವಿಗಳಲ್ಲಿ ದುರುಪಯೋಗ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಲ್ಲಿ ಅಂಥವರ ವಿರುದ್ಧ ಕಾನೂನು ಪ್ರಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಹೆಚ್ಚಿನ ಮಾಹಿತಿ ಹಾಗೂ ದೂರುಗಳಿದ್ದ ಆಹಾರ ಶಾಖೆ ದೂ. 08352-250419 ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ವೈ. ಎಸ್.ಪಾಟೀಲ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ
Vijayapura: ವಕ್ಫ್ ವಿರುದ್ಧ ಹಲವು ಮಠಾಧೀಶರ ನೇತೃತ್ವದಲ್ಲಿ ಹೋರಾಟ
Waqf Issue: ಲ್ಯಾಂಡ್ ಟೆರರಿಸಂ, ಲ್ಯಾಂಡ್ ಜಿಹಾದ್ ನಿಂದ ಬಚಾವಾಗಬೇಕು: ಶೋಭಾ ಕರಂದ್ಲಾಜೆ
Waqf Property: ಬೊಮ್ಮಾಯಿ ಕಾಲದಲ್ಲೂ ವಕ್ಫ್ ಆಸ್ತಿ ತೆರವಿಗೆ ಹೇಳಿದ್ರು: ಸಚಿವ ಜಮೀರ್
Vijayapura: ವಕ್ಫ್ ವಿವಾದ… ನಾಳೆಯಿಂದ ಅಹೋರಾತ್ರಿ ಧರಣಿ ಆರಂಭ: ಶಾಸಕ ಯತ್ನಾಳ
MUST WATCH
ಹೊಸ ಸೇರ್ಪಡೆ
Mangaluru: ರಾತ್ರಿ ಪ್ರಿಪೇಯ್ಡ್ ಆಟೋ ಇಲ್ಲದೆ ಪ್ರಯಾಣಿಕರ ಪರದಾಟ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.