ಕುತ್ಯಾರು ಕೇಂಜ ಬಗ್ಗತೋಟ ಕೆರೆ ಅಭಿವೃದ್ಧಿಗೆ ಚಾಲನೆ
Team Udayavani, May 22, 2020, 5:34 AM IST
ಶಿರ್ವ: ಕೋವಿಡ್ -19 ಲಾಕ್‌ಡೌನ್ ಸಂದರ್ಭದಲ್ಲಿ ಉದ್ಯೋಗವಿಲ್ಲದೆ ಮನೆಯಲ್ಲಿದ್ದ ಗ್ರಾಮೀಣ ಭಾಗದ ಕೂಲಿ ಕಾರ್ಮಿಕ ರಿಗೆ ಕುಟುಂಬ ನಿರ್ವಹಣೆಗೆ ತೊಂದರೆ ಯಾಗಿರುವುದರಿಂದ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಕುತ್ಯಾರು ಗ್ರಾ.ಪಂ. ವ್ಯಾಪ್ತಿಯ ಕೇಂಜ ಬಗ್ಗತೋಟ ಕೆರೆ ಅಭಿವೃದ್ಧಿಗೆ ಚಾಲನೆ ನೀಡಲಾಯಿತು.
ಕುತ್ಯಾರು ಗ್ರಾ. ಪಂ. ಪಿಡಿಒ ರಜನಿ ಭಟ್ ಕೆರೆ ದುರಸ್ತಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, ಗ್ರಾಮದಲ್ಲಿ ಕೂಲಿಯನ್ನೇ ನಂಬಿಕೊಂಡು ಜೀವನ ನಡೆಸುವ ಮಹಿಳೆಯರು ಮತ್ತು ಯುವಕರು ಹೆಚ್ಚಿನ ಸಂಖ್ಯೆಯಲ್ಲಿದ್ದು ಉದ್ಯೋಗ ಖಾತರಿ ಯೋಜನೆಯಡಿ ಗ್ರಾಮಸ್ಥರು ಸೇರಿ ಕೆರೆಯ ಹೂಳೆತ್ತಲು ನಿರ್ಧರಿಸಿರುವುದು ಶ್ಲಾಘನೀಯ ಎಂದು ಹೇಳಿದರು.
ಪಿಡಿಒ ನೇತೃತ್ವದಲ್ಲಿ ಪಂಚಾಯತ್ ಸಿಬಂದಿ ಸುರೇಖಾ ಶೆಟ್ಟಿ ಮತ್ತು ದೀಪಾ ಸಾಮಾಜಿಕ ಅಂತರ ಕಾಪಾಡಿ ಕೆಲಸ ಮಾಡುವುದು, ಜ್ವರ ಕೆಮ್ಮು ಇರುವವರು ಗ್ರಾ.ಪಂ.ಗೆ
ತಿಳಿಸಿ, ಆರೋಗ್ಯವಂತರು ಮಾತ್ರ ಕೆಲಸದಲ್ಲಿ ಪಾಲ್ಗೊಳ್ಳುವುದರ ಬಗ್ಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಸ್ಥಳೀಯ ಗ್ರಾ.ಪಂ. ಸದಸ್ಯರಾದ ರಾಜ ಶೆಟ್ಟಿ, ಪದ್ಮಾವತಿ ಪೂಜಾರ್ತಿ ಉಪಸ್ಥಿತರಿದ್ದರು.
ಮಾಜಿ ಗ್ರಾ.ಪಂ. ಸದಸ್ಯ ಕೇಂಜ ಸಂಪತ್ ಕುಮಾರ್ ನೇತೃತ್ವದಲ್ಲಿ ಸುಭಾಷ್ ಅಂಚನ್, ಪ್ರಶಾಂತ್ ಸುವರ್ಣ, ಭಾಸ್ಕರ ಪೂಜಾರಿ, ನಿತಿನ್ ಪೂಜಾರಿ, ಶರತ್ ಬಗ್ಗತೋಟ, ಗೀತಾ ಬಗ್ಗತೋಟ, ಆಶಾ, ಜಯಶ್ರೀ, ಸರಸ್ವತಿ, ಮಾಲಿನಿ ಮೊದಲಾದವರು ಉತ್ಸಾಹದಿಂದ ಪಾಲ್ಗೊಂಡಿದ್ದು,ಅಂತರ್ಜಲ ಮಟ್ಟ ವೃದ್ಧಿಸಲು ಗ್ರಾಮಸ್ಥರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.