ಕಾರ್ಮಿಕರ ಕಾರ್ಡ್‌ಗೆ ಮಧ್ಯವರ್ತಿಗಳ ಕಾಟ
Team Udayavani, May 22, 2020, 8:49 AM IST
ಸಾಂದರ್ಭಿಕ ಚಿತ್ರ
ಕಲಘಟಗಿ: ಪಟ್ಟಣದ ಅನೇಕ ಗಣಕೀಕೃತ ಕೇಂದ್ರ ಸೇರಿದಂತೆ ತಾಲೂಕಿನ ಜೋಡಳ್ಳಿ, ಗಳಗಿಹುಲಕೊಪ್ಪ, ದುಮ್ಮವಾಡ, ಹಿರೇಹೊನ್ನಿಹಳ್ಳಿ, ತಬಕದಹೊನ್ನಿಹಳ್ಳಿ, ಮಿಶ್ರೀಕೋಟಿ, ತುಮರಿಕೊಪ್ಪ, ದೇವಿಕೊಪ್ಪ ಸೇರಿದಂತೆ ಹಲವು ಗ್ರಾಮಗಳಲ್ಲಿ ಕಾರ್ಮಿಕ ಕಾರ್ಡ್ ಮಾಡಿಕೊಡುವ ಮಧ್ಯವರ್ತಿಗಳು ಹೆಚ್ಚಿದ್ದಾರೆ.
ಕೇಂದ್ರ ಸರಕಾರದಿಂದ ಚಾಲ್ತಿಯಲ್ಲಿರುವ ಪ್ರತಿ ಕಾರ್ಡ್‌ದಾರರಿಗೆ 3 ಸಾವಿರ ಮತ್ತು 2 ಸಾವಿರದಂತೆ ಒಟ್ಟು 5 ಸಾವಿರ ರೂ. ಜಮೆಯಾಗುತ್ತದೆ. ಇದರಿಂದ ತಾಲೂಕಿನಲ್ಲಿ ನೂತನವಾಗಿ ಕಾರ್ಮಿಕ ಕಾರ್ಡ್ ಮಾಡುವವರ ಹಾಗೂ ಹಳೆ ಕಾರ್ಡ್ ಮರುಚಾಲ್ತಿ ಮಾಡುವವರ ಸಂಖ್ಯೆ ಇಮ್ಮಡಿಗೊಂಡಿದೆ. ತಾಲೂಕಿನಲ್ಲಿ ಕಾರ್ಮಿಕ ಇಲಾಖೆ ಇದ್ದು, ಕಚೇರಿಯಲ್ಲಿ ವರ್ಷಗಳಿಂದ ಕಂಪ್ಯೂಟರ್ ಆಪರೇಟರ್ ಹೊರತುಪಡಿಸಿ ಸಿಪಾಯಿಯಾಗಲಿ, ಬೇರೆ ಯಾವುದೇ ಸಿಬ್ಬಂದಿ ಇರಲ್ಲ. ಅಲ್ಲದೆ ಪೂರ್ಣ ಪ್ರಮಾಣದ ಕಾರ್ಮಿಕ ನಿರೀಕ್ಷಕ ಅಧಿಕಾರಿಗಳು ಇಲ್ಲದೇ ಇರುವುದು ಇಂತಹ ವ್ಯವಹಾರಕ್ಕೆ ಅವಕಾಶ ಕಲ್ಪಿಸಿದಂತಾಗಿದೆ. ಜಿಲ್ಲಾಡಳಿತ, ತಾಲೂಕಾಡಳಿತ ಇನ್ನಾದರೂ ಕಾರ್ಮಿಕರ ನೆರವಿಗೆ ಬರಬೇಕಿದೆ. ತಾಲೂಕಿನಲ್ಲಿ ಕೂಲಿ ಕಾರ್ಮಿಕರಲ್ಲದವರ ಹೆಸರು ನೋಂದಣಿ ಮಾಡಿಸಲಾಗುತ್ತಿದೆ ಎಂದು ಸಮಾಜ ಸೇವಕ ಬಸವರಾಜ ಹೊನ್ನಿಹಳ್ಳಿ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.