ಕೋವಿಡ್ ನಿಂದ ಸಾಮಾಜಿಕ ವ್ಯವಸ್ಥೆಯೇ ಬದಲು: ಪಾಟೀಲ್
Team Udayavani, May 22, 2020, 11:47 AM IST
ಸಾಂದರ್ಭಿಕ ಚಿತ್ರ
ದಾವಣಗೆರೆ: ಕೋವಿಡ್ ವೈರಾಣು ಜಗತ್ತಿನ ಎಲ್ಲ ವರ್ಗದ ಜನರ ಸಾಮಾಜಿಕ ವ್ಯವಸ್ಥೆಯನ್ನೇ ಬದಲಿಸಿದೆ ಎಂದು ಸಾಹಿತಿ ಡಾ| ಸಿದ್ದನಗೌಡ ಪಾಟೀಲ್ ಪ್ರತಿಪಾದಿಸಿದ್ದಾರೆ.
ದಾವಣಗೆರೆ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವತಿಯಿಂದ ಏರ್ಪಡಿಸಿದ್ದ ಸಾಮಾಜಿಕ ಸ್ಥಿತ್ಯಂತರ ಕುರಿತ ವಿಶೇಷ ಆನ್‌ಲೈನ್ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆರೋಗ್ಯ ಸಮಸ್ಯೆ ಮಂತ್ರದಿಂದ ರೋಗ ವಾಸಿಯಾಗುತ್ತೆ ಎಂಬ ನಂಬಿಕೆಯನ್ನು ಅಳಿಸಿ ವೈಜ್ಞಾನಿಕ ಸಮಾಜವನ್ನು ನಿರ್ಮಿಸಿದೆ ಎಂದರು.
ಕೋವಿಡ್ ವೈರಸ್ ಜನರಲ್ಲಿದ್ದ ಮೌಡ್ಯವನ್ನು ದೂರ ಮಾಡಿ ಸಾಮಾಜಿಕ ಬಾಂಧವ್ಯವನ್ನು ಹೆಚ್ಚಿಸಿದೆ. ದೇವರು, ಧರ್ಮ ಎಂಬ ಆಚರಣೆಗಳನ್ನು ಬದಿಗಿಟ್ಟು ಬದುಕಿನ ಸತ್ಯವನ್ನು ತಿಳಿಸಿಕೊಟ್ಟಿದೆ. ದೈಹಿಕ ಅಂತರ, ಮಾರುಕಟ್ಟೆ ಮಹತ್ವ, ಸಾಮಾಜಿಕ ಪ್ರಜ್ಞೆಯನ್ನು ಅರ್ಥೈಸಿ ಜನರ ಹಿತಕ್ಕಾಗಿ ಪ್ರಜಾಪ್ರಭುತ್ವಕ್ಕೆ ಯಾವ ರೀತಿಯ ಮುಂದಾಲೋಚನೆ ಬೇಕು ಎಂಬ ಹೊಸ ರಾಜಕೀಯ ಶಾಸ್ತ್ರವನ್ನು ತಿಳಿಸಿಕೊಟ್ಟಿದೆ. ಆರ್ಥಿಕ ಹಸಿವು, ಸಾಮಾಜಿಕ ಅಸ್ಪೃಶ್ಯತೆಯಿಂದ ಕಂಗೆಟ್ಟು ವಲಸೆ ಹೋಗಿದ್ದ ಕಾರ್ಮಿಕರು ವಾಪಸ್ ಬರುವಂತಾಗಿದೆ. ಅಸಂಖ್ಯಾತರು ಉದ್ಯೋಗವಿಲ್ಲದೆ ನಿರಾಶ್ರಿತರಾಗಿ ಸಂಕಷ್ಟಕ್ಕೀಡಾಗಿದ್ದಾರೆ. ಸರ್ಕಾರ ಅವರೆಲ್ಲರ ರಕ್ಷಣೆಯ ಮಾರ್ಗ ಕಂಡುಕೊಳ್ಳಲು ಮುಂದಾಗಬೇಕಾಗಿದೆ ಎಂದು ಒತ್ತಾಯಿಸಿದರು.
ವಿಶ್ವವಿದ್ಯಾಲಯದ ಕುಲಪತಿ ಪ್ರೊ| ಶರಣಪ್ಪ ವಿ. ಹಲಸೆ ಮಾತನಾಡಿ, ಸಮಸ್ಯೆಯನ್ನು ಸವಾಲಾಗಿ ಸ್ವೀಕರಿಸಿ, ನವ ಸಮಾಜ ನಿರ್ಮಾಣಕ್ಕೆ ಎಲ್ಲರೂ ಮುಂದಾಗಬೇಕು. ಸರ್ಕಾರದ ಜೊತೆ ನಿಂತು ಆತಂಕ ನಿವಾರಿಸಿ ದೇಶವನ್ನು ಸದೃಢಗೊಳಿಸಲು ಎಲ್ಲರ ಸಹಕಾರ ಮುಖ್ಯವಾಗಿದೆ ಎಂದು ತಿಳಿಸಿದರು. ಪತ್ರಿಕೋದ್ಯಮ ವಿಭಾಗದ ಅಧ್ಯಕ್ಷ ಶಿವಕುಮಾರ ಕಣಸೋಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಲಸಚಿವರಾದ ಪ್ರೊ| ಬಸವರಾಜ ಬಣಕಾರ, ಪ್ರೊ| ಎಚ್.ಎಸ್. ಅನಿತಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.