ಚಿಕ್ಕಬಳ್ಳಾಪುರಕ್ಕೂ ಎದುರಾಯಿತು ಮಹಾರಾಷ್ಟ್ರ ಕಂಟಕ: ಒಂದೇ ದಿನ 45 ಸೋಂಕು ಪ್ರಕರಣಗಳು
Team Udayavani, May 22, 2020, 1:20 PM IST
ಚಿಕ್ಕಬಳ್ಳಾಪುರ: ಲಾಕ್‌ಡೌನ್ ಸಡಿಲಿಕೆ ಬಳಿಕ ರಾಜ್ಯದಲ್ಲಿ ಆಘಾತ ನೀಡಿದ ಮಹಾರಾಷ್ಟ್ರ ನಂಜು ಈಗ ಬರಪೀಡಿತ ಚಿಕ್ಕಬಳ್ಳಾಪುರ ಜಿಲ್ಲೆಗೂ ತಟ್ಟಿದೆ. ಒಂದೇ ದಿನ ಜಿಲ್ಲೆಯಲ್ಲಿ 45 ಮಂದಿ ಕೋವಿಡ್-19 ಸೋಂಕಿತರು ಪತ್ತೆಯಾಗುವ ಮೂಲಕ ಜಿಲ್ಲೆಯಲ್ಲಿ ಸೋಂಕು ನಾಗಲೋಟದಲ್ಲಿ ಸಾಗಿದೆ. ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 71 ಕ್ಕೆ ಏರಿಕೆ ಕಂಡಿದೆ.
ಹಲವು ದಿನಗಳಿಂದ ಯಾವುದೇ ಕೋವಿಡ್-19 ಪಾಸಿಟೀವ್ ಪ್ರಕರಣಗಳು ಕಂಡು ಬರದೇ ನಿರಾಳವಾಗಿದ್ದ ಜಿಲ್ಲೆಯ ಜನರಲ್ಲಿ ಈಗ ಮಹಾರಾಷ್ಟ್ರದಿಂದ ಆಗಮಿಸಿರುವ 45 ನಾಗರಿಕರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿರುವುದು ಜಿಲ್ಲೆಯನ್ನು ಇನ್ನಷ್ಟು ಆತಂಕಕ್ಕೆ ಕಾರಣವಾಗಿದ್ದು ಮುಂಬೈ ನಂಜು ಎಲ್ಲಿಗೆ ಮುಟ್ಟುತ್ತದೆಯೆಂಬ ಆತಂಕ ಸಾರ್ವಜನಿಕ ವಲಯದಲ್ಲಿ ಮನೆ ಮಾಡಿದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಲಾಕ್‌ಡೌನ್ ಸಡಿಲಿಕೆ ಬಳಿಕ ನೆರೆಯ ಮಹಾರಾಷ್ಟ್ರದಿಂದ ಬರೋಬ್ಬರಿ 265 ಮಂದಿ ನಾಗರಿಕರು ಆಗಮಿಸಿದ್ದ ಇವರ ಪೈಕಿ 45 ಕೋವಿಡ್ ಸೋಂಕು ದೃಢಪಟ್ಟಿದೆ. ಇವರೆಲ್ಲಾ ಜಿಲ್ಲೆಯ ಗೌರಿಬಿದನೂರು ತಾಲೂಕಿನ ನಿವಾಸಿಗಳೆಂದು ತಿಳಿದು ಬಂದಿದೆ. ಈ ಮೊದಲು ಗೌರಿಬಿದನೂರು ತಾಲೂಕಿನಲ್ಲಿ ಒಟ್ಟು 12 ಮಂದಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿದ್ದು ಎಲ್ಲರೂ ಗುಣಮುಖರಾಗಿದ್ದರು. ಇದೀಗ ಮಹಾರಾಷ್ಟ್ರ ವಲಸಿಗರಿಂದ ಮತ್ತೆ ಗೌರಿಬಿದನೂರಲ್ಲಿ ಕೋವಿಡ್ ಕರಿಛಾಯೆ ತಲೆ ಎತ್ತಿದೆ.
ಜಿಲ್ಲೆಯಲ್ಲಿ ಮಹಾರಾಷ್ಟ್ರದಿಂದ ಆಗಮಿಸಿರುವ ಒಟ್ಟು 265 ಮಂದಿ ನಾಗರಿಕರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದು ಈ ಪೈಕಿ 45 ಮಂದಿಯಲ್ಲಿ ಸೋಂಕು ದೃಢಪಟ್ಟು 67 ಮಂದಿಯ ವರದಿ ನೆಗೇಟಿವ್ ಬಂದಿದೆ. ಇನ್ನೂ ಇನ್ನೂ 153 ಮಂದಿ ವೈದ್ಯಕೀಯ ವರದಿಗಾಗಿ ಕಾಯಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ
Mangaluru; ಟ್ಯಾಂಕರ್ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ
ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.