ಮಳೆ ಬಂದಾಗ ಕೊಳಚೆ ನೀರು ಉಕ್ಕಿ ಹರಿಯುವ ಅರೆಕೆರೆಬೈಲು
Team Udayavani, May 23, 2020, 5:42 AM IST
ಮಂಗಳೂರು: ಧಾರಾಕಾರ ಸುರಿದ ಮಳೆಯಿಂದಾಗಿ ಐತಿಹಾಸಿಕ ಗುಜ್ಜರಕೆರೆ ಸಮೀಪದ ಅರೆಕೆರೆಬೈಲು ಪ್ರದೇಶದಲ್ಲಿ ಒಳಚರಂಡಿಯ ಕೊಳಚೆ ನೀರು ಉಕ್ಕಿ ಹರಿದು ಸುತ್ತಲಿನ ಮನೆಗಳ ಆವರಣಕ್ಕೂ ನುಗ್ಗಿದೆ.
ಸೋಮವಾರ ಸುರಿದ ಧಾರಾಕಾರ ಮಳೆಗೆ ಚರಂಡಿ ನೀರು ರಸ್ತೆಯ ಮೇಲೆ ಹರಿದು ಜನಸಂಚಾರಕ್ಕೆ ತೊಂದರೆ ಮಾಡಿತು. ಗುಜ್ಜರಕೆರೆಯ ಅರೇಕೆರೆಬೈಲಿನಲ್ಲಿ ಮಳೆ ನೀರು ಹರಿಯುವ ಚರಂಡಿ ಹಾಗೂ ಡ್ರೈನೇಜ್ ವ್ಯವಸ್ಥೆ ಸಮರ್ಪಕವಾಗಿಲ್ಲ ದುದರಿಂದ ಪ್ರತಿ ಮಳೆಗಾಲದಲ್ಲಿ ಈ ಸಮಸ್ಯೆಯನ್ನು ಎದುರಿಸುವಂತಾಗಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆ ಹಾಗೂ ಮನಪಾ ಜನಪ್ರತಿನಿಧಿಗಳು ಮನವಿ ಸಲ್ಲಿಸಿದರೂ, ಈವರೆಗೆ ಕ್ರಮ ಕೈಗೊಂಡಿಲ್ಲ ಎಂಬುದು ಸ್ಥಳೀಯರ ದೂರು.
ಮಾಧ್ಯಮಗಳಲ್ಲಿ ಸಮಸ್ಯೆ ಬಗ್ಗೆ ವರದಿ ಪ್ರಕಟವಾದ ಸ್ಥಳಕ್ಕಾಗಮಿಸುವ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಬಳಿಕ ಸಮಸ್ಯೆ ಸರಿಪಡಿಸುವುದಿಲ್ಲ. ಚರಂಡಿಗಳ ಅವ್ಯವಸ್ಥೆಯಿಂದಾಗಿ ಕಳೆದ ವರ್ಷ ಈ ಭಾಗದಲ್ಲಿ ಡೆಂಗ್ಯೂ ಪ್ರಕರಣ ಕಾಣಿಸಿಕೊಂಡಿದ್ದವು. ಈ ಬಾರಿಯೂ ಕೂಡ ಚರಂಡಿ ಅವ್ಯವಸ್ಥೆ ಮುಂದುವರಿದಿದ್ದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಅರೆಕೆರೆಬೈಲಿನಲ್ಲಿ ಒಳಚರಂಡಿ ನೀರು ರಸ್ತೆಯಲ್ಲಿ ಹರಿಯುವ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಮೇಯರ್ ಅವರು ಬಂದು ಪರಿಶೀಲಿಸಿದ್ದಾರೆ. ಸಮಸ್ಯೆಯನ್ನು ಶೀಘ್ರ ನಿವಾರಿಸಲಾಗುವುದು ಎಂದು ಸ್ಥಳೀಯ ಕಾರ್ಪೊರೇಟರ್ ರೇವತಿ ಶ್ಯಾಮಸುಂದರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.