ಪ್ರಾಕೃತಿಕ ದುರಂತದಿಂದ ಹಾನಿ ತಪ್ಪಿಸಲು ಈಗಿನಿಂದಲೇ ಕ್ರಮ: ಡಿಸಿ


Team Udayavani, May 23, 2020, 5:55 AM IST

ಪ್ರಾಕೃತಿಕ ದುರಂತದಿಂದ ಹಾನಿ ತಪ್ಪಿಸಲು ಈಗಿನಿಂದಲೇ ಕ್ರಮ: ಡಿಸಿ

ಮಹಾನಗರ: ಕಳೆದ ವರ್ಷದಲ್ಲಿ ಅಪಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡು ರಸ್ತೆ, ಸೇತುವೆ ಸೇರಿದಂತೆ ಅನೇಕ ರೀತಿ ಮೂಲ ಸೌಕರ್ಯಗಳಿಗೆ ಹಾನಿ ಉಂಟಾಗಿತ್ತು. ಪ್ರಸುತ್ತ ಸಾಲಿನಲ್ಲಿ ಕಳೆದ ಸಾಲಿಗಿಂತ ಹೆಚ್ಚುವರಿ ಮಳೆಯಾದರೆ ಸಮರ್ಥವಾಗಿ ನಿಭಾಯಿಸಲು ಅಗತ್ಯವಾದ ಸಿದ್ಧತೆಗಳನ್ನು ಆಯಾ ಇಲಾಖೆಯ ಅಧಿಕಾರಿಗಳು ಮಾಡಿಕೊಂಡಿರಬೇಕು. ದಕ್ಷಿಣ ಕನ್ನಡ ಜಿಲ್ಲಾಡಳಿತ ಈ ನಿಟ್ಟಿನಲ್ಲಿ ಈಗಾಗಲೇ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ ತಿಳಿಸಿದ್ದಾರೆ.

ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮೇ ಅಂತ್ಯಕ್ಕೆ ಜಿಲ್ಲೆಗೆ ಎನ್‌.ಡಿ. ಆರ್‌.ಎಫ್‌. ತಂಡ ಆಗಮನ
ಕಳೆದ ವರ್ಷ ಅಧಿಕ ಮಳೆಯಿಂದಾಗಿ ಜಿಲ್ಲೆಯ ಹಲವು ಪ್ರದೇಶದಲ್ಲಿ ಗುಡ್ಡ ಕುಸಿತದಿಂದ ಹಾಗೂ ನೆರೆಯಿಂದ ಜನರು ತೀವ್ರವಾಗಿ ತೊಂದರೆಗೆ ಸಿಲುಕಿದ್ದರು. ಇಂತಹ ಸಂಭಾವ್ಯ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಅಪಾಯದ ಜಾಗದಲ್ಲಿ ಇರುವ ಮನೆಗಳನ್ನು ತೆರೆವುಗೊಳಿಸಿ ಅವರಿಗೆ ಸುರಕ್ಷಿತವಾದ ಜಾಗದಲ್ಲಿ ನೆಲೆಸುವಂತೆ ಸೂಚಿಸುವುದು ಅಧಿಕಾರಿಗಳ ಜವಾಬ್ದಾರಿ. ಮೇ ತಿಂಗಳ ಅಂತ್ಯದಲ್ಲಿ ಜಿಲ್ಲೆಗೆ ಎನ್‌.ಡಿ.ಆರ್‌.ಎಫ್‌. ತಂಡವು ಆಗಮಿಸಲಿದೆ ಎಂದರು.

ಕಡಲ್ಕೊರೆತ ತಡೆಯಲು ಎಡಿಬಿ ವತಿಯಿಂದ ಶಾಶ್ವತ ತಡೆಗೋಡೆ ಕಾಮಗಾರಿ ನಡೆಸಿದ ಸ್ಥಳದಲ್ಲಿಯೇ ಕಳೆದ ವರ್ಷ ಮತ್ತೆ ಕಡಲ್ಕೊರೆತ ಕಾಣಿಸಿಕೊಂಡಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಈ ಬಾರಿ ಅಂತಹ ಪ್ರಕರಣ ನಡೆಯದಂತೆ ಮುನ್ನಚ್ಚರಿಕೆ ವಹಿಸಲು ಸೂಚಿಸಿದರು.

ಗ್ಯಾಸ್‌ ಟ್ಯಾಂಕರ್‌ಗಳು ರಸ್ತೆ ಅಪಘಾ ತಕ್ಕೀಡಾದ ಸಂದರ್ಭದಲ್ಲಿ ಸಂಬಂಧಪಟ್ಟ ಅನಿಲ ಸಂಸ್ಥೆಗಳು ತ್ವರಿತವಾಗಿ ಪರಿಹಾರಕಾರ್ಯಾಚರಣೆ ನಡೆಸಬೇಕು, ಈ ಹಿಂದೆ ಜಿಲ್ಲೆಯಲ್ಲಿ ನಡೆದ ಕೆಲವು ಗ್ಯಾಸ್‌ ಟ್ಯಾಂಕರ್‌ಗಳ ಅಪಘಾತದಲ್ಲಿ ಸಂಬಂದಿಸಿದ ತೈಲ ಕಂಪೆನಿಗಳು ವಿಳಂಬವಾಗಿ ಸ್ಪಂದಿಸಿದ್ದು, ಅಂತಹ ಸಂಸ್ಥೆಗಳ ವಿರುದ್ಧ ಕ್ರಮ ಜರಗಿಸಬೇಕಾದೀತು ಎಂದು ಸಿಂಧೂ ರೂಪೇಶ್‌ ಎಚ್ಚರಿಸಿದರು.

ವಿಶಾಖಪಟ್ಟಣದಲ್ಲಿ ಅನಿಲ ದುರಂತ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿರುವ ಅನಿಲ ಸಂಸ್ಥೆಗಳು, ಕಾರ್ಯಾಚರಣೆಯಲ್ಲಿ ಯಾವುದೇ ಲೋಪವಾಗದಂತೆ ಮುನ್ನಚ್ಚರಿಕೆ ವಹಿಸಬೇಕು. ಇದರಲ್ಲಿ ಯಾವುದೇ ರಾಜೀ ಮಾಡಿಕೊಳ್ಳಲಾಗದು ಎಂದು ಅವರು ಸಭೆಯಲ್ಲಿದ್ದ ಅನಿಲ ಸಂಸ್ಥೆಗಳ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಮಹಾನಗರ ಪಾಲಿಕೆ ಆಯುಕ್ತ ಶಾನಾಡಿ ಅಜಿತ್‌ಕುಮಾರ್‌ ಹೆಗ್ಡೆ, ಮಾತನಾಡಿ ಮಂಗಳೂರು ನಗರದಲ್ಲಿ ಅಪಾರ ಮಳೆ ಯಿಂದ ತೊಂದರೆಗೀಡಾಗುವ ಪ್ರದೇಶವನ್ನು ಈಗಾಗಲೇ ಗುರುತಿಸಲಾಗಿದೆ. ನಗರದಲ್ಲಿರುವ 11 ರಾಜಕಾಲುವೆಗಳ ಹೂಳೆತ್ತಲು 168 ಲಕ್ಷ ರೂ.ನ ಕಾಮಗಾರಿ ನಡೆಯುತ್ತಿದ್ದು, ಶೇ.80 ರಷ್ಟು ಕಾಮಗಾರಿ ಈಗಾಗಲೇ ಮುಗಿದಿದೆ. 24 ಗಂಟೆಗಳ ಕಂಟ್ರೋಲ್‌ ರೂಂ ಮಹಾನಗರ ಪಾಲಿಕೆಯಲ್ಲಿ ತೆರೆಯಲಾಗಿದ್ದು, ಮಳೆಗಾಲದಲ್ಲಿ ಕಾರ್ಯಾಚರಣೆಗೆ ಪ್ರತಿ 6 ವಾರ್ಡುಗಳಿಗೆ ಒಂದು ತಂಡವನ್ನು ರಚಿಸಲಾಗಿದೆ. 16 ಪರಿಹಾರ ಕೇಂದ್ರಗಳನ್ನು ಗುರುತಿಸಿ, ಸಿದ್ಧಪಡಿಸಲಾಗಿದೆ ಎಂದರು.

ಜಿಲ್ಲಾಧಿಕಾರಿಗಳು ಮಾತನಾಡಿ, ಕೋವಿಡ್‌ ಹಿನ್ನೆಲೆಯಲ್ಲಿ ಪರಿಹಾರ ಕೇಂದ್ರಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲು ಸೂಚಿಸಿದರು. ಅಲ್ಲದೇ, ಕಾರ್ಮಿಕರ ತಂಡವನ್ನು ರಚಿಸಿ ಸದಾ ಸನ್ನದ್ಧ ಸ್ಥಿತಿಯಲ್ಲಿ ಇಡುವಂತೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಣಾಧಿಕಾರಿ ಡಾ| ಸೆಲ್ವಮಣಿ, ಪೊಲೀಸ್‌ ಅಧೀಕ್ಷಕ ಲಕ್ಷ್ಮೀ ಪ್ರಸಾದ್‌, ಕೋಸ್ಟ್‌ಗಾರ್ಡ್‌ ಡಿಐಜಿ ವೆಂಕಟೇಶ್‌, ಡಿಸಿಪಿ ಅರುಣಾಂಶಗಿರಿ, ವಿಪತ್ತು ನಿರ್ವಹಣ ಘಟಕದ ಅಧಿಕಾರಿ ವಿಜಯಕುಮಾರ್‌, ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

ತತ್‌ಕ್ಷಣ ನೆರವು
ಈ ವರ್ಷ ಯಾವುದೇ ತೊಂದರೆ ಉಂಟಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆಯಾಗಿ ಎಲ್ಲ ಕ್ರಮಗಳನ್ನು ವಹಿಸಬೇಕು. ಧಾರಾಕಾರ ಮಳೆಯಿಂದ ಅಪಾಯ ಸಂಭವಿಸುವ ಸ್ಥಳಗಳಲ್ಲಿ ತತ್‌ಕ್ಷಣ ನೆರವಿಗಾಗಿ ಜಿಲ್ಲಾಡಳಿತದಿಂದ ಅಗತ್ಯವಿರುವ ಬೋಟ್‌, ಲೈಫ್‌ ಜಾಕೆಟ್‌, ಟಾರ್ಚ್‌, ರೋಪ್‌ ಸೇರಿದಂತೆ ವಿವಿಧ ಉಪಕರಣಗಳನ್ನು ಜಿಲ್ಲಾಡಳಿತ ಒದಗಿಸಲಿದೆ. ಹೆಚ್ಚು ಮಳೆಯಾದರೆ ಜನರಿಗೆ ವ್ಯವಸ್ಥೆ ಕಲ್ಪಿಸಲು ಹಾಸ್ಟೆಲ್‌, ಸಮುದಾಯ ಭವನ, ಕಲ್ಯಾಣ ಮಂಟಪಗಳನ್ನು ಗುರುತಿಸಿ ಪಟ್ಟಿಯನ್ನು ಮಾಡಬೇಕೆಂದು ಜಿಲ್ಲಾಧಿಕಾರಿಗಳು ತಹಶೀಲ್ದಾರ್‌ಗಳಿಗೆ ಸೂಚಿಸಿದರು.

ಟಾಪ್ ನ್ಯೂಸ್

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Untitled-5

Mangaluru: ಗಾಂಜಾ ಸೇವನೆ; ಯುವಕನ ಬಂಧನ

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

3-vitla

Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.