ಕರಾಳ ರೋಗ ಸುತ್ತ ಕಿರುಚಿತ್ರ
Team Udayavani, May 23, 2020, 3:53 AM IST
ಕನ್ನಡ ಸಿನಿಮಾರಂಗದ ಹಿರಿಯ ಪ್ರಚಾರಕರ್ತರಾದ ಸುಧೀಂದ್ರ ವೆಂಕಟೇಶ್ ಅವರ ಮಗ ಪವನ್ ವೆಂಕಟೇಶ್ ಕಿರುಚಿತ್ರವೊಂದರ ಮೂಲಕ ಕನ್ನಡದ ಮನರಂಜನಾ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದ್ದಾನೆ. ಕೊರೊನ- ಕರಾಳ ರೋಗ ನಾಶ ಎಂಬ ಕಿರುಚಿತ್ರವೊಂದರ ಮೂಲಕ ಕೋವಿಡ್-19ನ ವಿವಿಧ ಮಜಲುಗಳನ್ನು ಸಂದೇಶದ ಜೊತೆ ಅನಾವರಣಗೊಳಿಸಲಾಗಿದೆ. ಪವನ್ ಕಾಲೇಜು ವಿದ್ಯಾರ್ಥಿ.
ಬಾಲ್ಯದಿಂದಲೂ ಸಿನಿಮಾ ವಾತಾವರಣದಲ್ಲಿಯೇ ಬೆಳೆದು, ನಿರ್ದೇಶಕನಾಗಬೇಕೆಂಬ ಆಸಕ್ತಿ ಹೊಂದಿದ್ದ ಪವನ್ ಈಗ ಕಿರುಚಿತ್ರ ನಿರ್ದೇಶಿಸಿದ್ದಾರೆ. ಈ ಹಿಂದೆ ಸಿನಿಮಾ ಪ್ರಚಾರಕರ್ತ ಡಿವಿ. ಸುಧೀಂದ್ರ ಅವರ ಬದುಕಿನ ಹಾದಿಯನ್ನು ತೆರೆದಿಡುವ ಸುಧೀಂದ್ರ ಸಿನಿ ಪಯಣ ಎನ್ನುವ ಸಾಕ್ಷ್ಯ ಚಿತ್ರವನ್ನು ಪವನ್ ವೆಂಕಟೇಶ್ ನಿರ್ದೇಶಿಸಿದ್ದರು. ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ಮೂರನೇ ತಲೆಮಾರಿನ ಹುಡುಗರೆಲ್ಲ ಸೇರಿ ಈ ಕಿರುಚಿತ್ರವನ್ನು ರೂಪಿಸಿದ್ದಾರೆ.
4 ನಿಮಿಷ 15 ಸೆಕೆಂಡ್ ಸಮಯದ ಈ ಶಾರ್ಟ್ ಫಿಲ್ಮ್ ಒಂದೇ ಕೋಣೆಯಲ್ಲಿ ಚಿತ್ರಿತವಾಗಿದೆ. ಕೊರೊನಾ ತಡೆಯುವುದು ಹೇಗೆ ಅನ್ನೋದರ ವಿವರ ಇದರಲ್ಲಿದ್ದು, ತಾತ ಮತ್ತು ಮೊಮ್ಮೊಗನ ಪಾತ್ರಗಳ ಮೂಲಕ ಅದು ಅನಾವರಣಗೊಂಡಿದೆ. ತರುಣ ಜಯಸಿಂಹ ತಾತನ ಪಾತ್ರಲ್ಲಿ ಕಾಣಿಸಿಕೊಂಡರೆ ಮಾ. ಡಿ.ಎಸ್. ಸುಧೀಂದ್ರ ಮೊಮ್ಮಗನಾಗಿ ಪಾತ್ರ ನಿರ್ವಹಿಸಿದ್ದಾನೆ.
ಸುಧೀಂದ್ರ ವೆಂಕಟೇಶ್ ಅವರ ಪುತ್ರಿ ಚಂದನ ಪ್ರಸಾದನ ಮಾಡಿದ್ದಾರೆ. ವೆಂಕಟೇಶ್ ಪುತ್ರ ಪವನ್ ಕಥೆ, ಚಿತ್ರಕಥೆ, ಸಂಭಾಷಣೆ ಹಾಗೂ ನಿರ್ದೇಶನದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ಛಾಯಾಗ್ರಾಹಕ ಅರುಣ್ ಡಿ.ಎಂ ದೃಶ್ಯಗಳನ್ನು ಸೆರೆ ಹಿಡಿದ್ದಾರೆ. ಮನೋಜ್ ಹಾಗೂ ಮಲ್ಲೇಶ್ ಹಿನ್ನೆಲೆ ಸಂಗೀತ ನೀಡಿದ್ದಾರೆ. ಈ ಕಿರುಚಿತ್ರಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.