ಬೆಂಗಳೂರು-ಬೆಳಗಾವಿ ರೈಲು ಆರಂಭ
ಹುಬ್ಬಳ್ಳಿಯಲ್ಲಿಳಿದ ಸುಮಾರು 200 ಪ್ರಯಾಣಿಕರು
Team Udayavani, May 23, 2020, 4:21 AM IST
ಹುಬ್ಬಳ್ಳಿ: ಲೌಕ್‌ಡೌನ್ ನಂತರದಲ್ಲಿ ಮೊದಲ ಬಾರಿಗೆ ಬೆಂಗಳೂರು-ಬೆಳಗಾವಿ ನಡುವೆ ಪ್ರಯಾಣಿಕರ ರೈಲು ಶುಕ್ರವಾರ ಸಂಚರಿಸಿತು. ಬೆಂಗಳೂರು ಹಾಗೂ ಇನ್ನಿತರ ಕಡೆಯ ನೂರಾರು ಪ್ರಯಾಣಿಕರು ವಿವಿಧ ಸ್ಥಳಗಳಿಗೆ ಆಗಮಿಸಿದರು.
ಬೆಂಗಳೂರಿನಿಂದ ಯಶವಂತಪುರ, ತುಮಕೂರ, ಅರಸಿಕೆರೆ, ಬಿರೂರು, ಚಿಕ್ಕಚಾಜೂರು, ದಾವಣಗೆರೆ, ಹರಿಹರ, ರಾಣೆಬೆನ್ನೂರು, ಹಾವೇರಿ ಮೂಲಕ ಹುಬ್ಬಳ್ಳಿಗೆ ಆಗಮಿಸಿತು. ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ಸುಮಾರು 200 ಪ್ರಯಾಣಿಕರು ಇಳಿದರು. ಪ್ರತಿಯೊಬ್ಬರನ್ನು ಥರ್ಮಲ್ ಸ್ಕ್ರೀನಿಂಗ್‌ಗೆ ಒಳಪಡಿಸಲಾಯಿತು. ಎರಡನೇ ಪ್ರಯಾಣಿಕರ ರೈಲು ಬೆಂಗಳೂರಿನಿಂದ ಮೈಸೂರಿಗೆ ತೆರಳಿತು. ಕೆಂಗೇರಿ, ರಾಮನಗರ, ಮದ್ದೂರ, ಮಂಡ್ಯ, ಪಾಂಡವಪುರ, ನಾಗನಹಳ್ಳಿ ಮೂಲಕ ಮೈಸೂರಿಗೆ ತೆರಳಿತು. ಹುಬ್ಬಳ್ಳಿ ರೈಲ್ವೆ ನಿಲ್ದಾಣದಿಂದ ಉತ್ತರ ಪ್ರದೇಶದ ಲಕ್ನೋಗೆ ವಿಶೇಷ ಶ್ರಮಿಕ್ ರೈಲು ಸಂಚರಿಸಿತು. 1636 ಪ್ರಯಾಣಿಕರು ತೆರಳಿದರು. ಇದೇ ರೀತಿ ವಿವಿಧ ನಿಲ್ದಾಣದಿಂದ 6 ಶ್ರಮಿಕ್ ರೈಲುಗಳ ಮೂಲಕ 9,279 ವಲಸಿಗರು ಅವರ ರಾಜ್ಯಕ್ಕೆ ತೆರಳಿದ್ದಾರೆಂದು ನೈರುತ್ಯ ರೈಲ್ವೆ ವಲಯದ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಿಕೆಟ್ ಕೌಂಟರ್ ಕಾರ್ಯಾರಂಭ: ಲಾಕ್ ಡೌನ್ ನಂತರದಲ್ಲಿ ಪ್ರಯಾಣಿಕರ ರೈಲುಗಳು ಸಂಚಾರ ಆರಂಭ ಮಾಡಿದರ ಹಿನ್ನೆಲೆಯಲ್ಲಿ ಟಿಕೆಟ್ ಕೌಂಟರ್‌ಗಳು ಕೂಡ ಕಾರ್ಯಾರಂಭ ಮಾಡಿದ್ದು, ಮೊದಲ ದಿನ ಟಿಕೆಟ್ ಕೌಂಟರ್ ಗಳು ಖಾಲಿಯಾಗಿದ್ದವು. ಟಿಕೆಟ್ ಪಡೆಯಲು ತೆರಳುವ ಪ್ರತಿಯೊಬ್ಬ ಪ್ರಯಾಣಿಕರನ್ನು ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತಿದೆ. ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿದೆ.
16454 ವಲಸಿಗರು ತವರು ರಾಜ್ಯಗಳಿಗೆ : ಲಾಕ್‌ಡೌನ್ ಹಿನ್ನೆಲೆಯಲ್ಲಿ ವಿವಿಧ ಜಿಲ್ಲೆಗಳಲ್ಲಿ ಸಿಲುಕಿಕೊಂಡಿದ್ದ 16,454 ವಲಸಿಗರು ಉತ್ತರ ಪ್ರದೇಶ, ರಾಜಸ್ಥಾನ, ಬಿಹಾರ, ಜಾರ್ಖಾಂಡ್ ರಾಜ್ಯಗಳಿಗೆ ತೆರಳಿದರು. ಧಾರವಾಡ-6628 ಸೇರಿದಂತೆ ಹಾವೇರಿ, ಕೊಪ್ಪಳ, ಗದಗ, ಉತ್ತರ ಕನ್ನರ, ಬೆಳಗಾವಿ, ಬಾಗಲಕೋಟೆ, ಚಿಕ್ಕಮಮಗಳುರು, ರಾಯಚೂರು, ಶಿವಮೊಗ್ಗ, ಬಳ್ಳಾರಿ, ದಾವಣಗೆರೆ ಜಿಲ್ಲೆಗಳಲ್ಲಿ ಸಿಲುಕಿದ್ದ ವಲಸಿಗರು ಇಲ್ಲಿನ ರೈಲು ನಿಲ್ದಾಣದ ಮೂಲಕ ಅವರ ರಾಜ್ಯಗಳಿಗೆ ತೆರಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಡಬಲ್ ಗೇಮ್; ವಕ್ಫ್ ಆಸ್ತಿ ರಕ್ಷಣೆ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖ: ಸಿದ್ದು
Hubli: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್
Hubli: ಹಣಕಾಸು ಆಯೋಗದ ಅನ್ಯಾಯದ ಬಗ್ಗೆ ಬಿಜೆಪಿಯರಿಂದ ಮೌನ: ಸಿದ್ದರಾಮಯ್ಯ ಕಿಡಿ
Hubli: ಜನರ ದಿಕ್ಕು ತಪ್ಪಿಸಲು ಬಿಜೆಪಿಯಿಂದ ವಕ್ಫ್ ಹೋರಾಟ: ಸಿಎಂ ಸಿದ್ದರಾಮಯ್ಯ
By Election: ಶಿಗ್ಗಾವಿ ಸಮರ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಮುಖಂಡರ ಸಭೆ
MUST WATCH
ಹೊಸ ಸೇರ್ಪಡೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.