ಜಿಲ್ಲಾಡಳಿತಕ್ಕೆ ತಲೆ ನೋವಾದ ಸೋಂಕಿತ


Team Udayavani, May 23, 2020, 5:25 AM IST

ಜಿಲ್ಲಾಡಳಿತಕ್ಕೆ ತಲೆ ನೋವಾದ ಸೋಂಕಿತ

ಹಾವೇರಿ: ಜಿಲ್ಲೆಯಲ್ಲಿ ಶುಕ್ರವಾರ ಪತ್ತೆಯಾದ ಮೂರು ಪ್ರಕರಣಗಳಲ್ಲಿ ಒಂದು ಭಾರಿ ಆತಂಕ ಸೃಷ್ಟಿಸಿದ್ದು ಈತನ ಸಂಪರ್ಕ ಪತ್ತೆ ಹಚ್ಚುವುದೇ ಜಿಲ್ಲಾಡಳಿತಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಪತ್ತೆಯಾದ ಪಿ-1691 ಸೋಂಕಿತ ಎಲ್ಲೆಲ್ಲಿ, ಯಾರಿಗೆಲ್ಲ ಸಂಪರ್ಕಕ್ಕೆ ಬಂದು ಸೋಂಕು ಹಬ್ಬಿಸಿರಬಹುದು ಎಂಬ ಭಯ ಶುರುವಾಗಿದೆ. ಈ ಭಯ ಜಿಲ್ಲೆ ಅಷ್ಟೇ ಅಲ್ಲ ರಾಜ್ಯ ರಾಜಧಾನಿಯ ಜನರನ್ನೂ ಆವರಿಸಿದೆ. ಶುಕ್ರವಾರ ಸಂಜೆವರೆಗೂ ಬೆಂಗಳೂರಿನಲ್ಲಿಯೇ ಇರುವ ಈತನನ್ನು ಶೀಘ್ರ ಹಾವೇರಿಗೆ ಕರೆತರಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಆತ ತನ್ನ ಟ್ರಾವೆಲ್‌ ಹಿಸ್ಟರಿ ಹೇಳಿದಾಗಲೇ ಎಲ್ಲೆಲ್ಲಿ ಯಾರಿಗೆಲ್ಲ ಕ್ವಾರಂಟೈನ್‌ ಮಾಡಬೇಕು? ತಪಾಸಣೆ ಮಾಡಬೇಕು ಎಂಬುದು ತಿಳಿಯಲಿದೆ.

ಈ ಸೋಂಕಿತ ಶಿಗ್ಗಾವಿ ತಾಲೂಕಿನ ಬಂಕಾಪುರದ ನಿವಾಸಿಯಾಗಿದ್ದು 22 ವರ್ಷದ ಯುವಕನಾಗಿದ್ದಾನೆ. ಚಾಲಕನಾಗಿರುವ ಈತನ ಮೂಲ ಗ್ರಾಮ ಯಾವುದು ಎಂಬುದು ಇನ್ನೂ ಖಚಿತವಾಗಿಲ್ಲ. ಈತ ಬಂಕಾಪುರದಲ್ಲಿ ರೂಮ್‌ ಒಂದನ್ನು ಬಾಡಿಗೆಗೆ ಪಡೆದಿದ್ದನು. ಮೇ 5, 8 ಹಾಗೂ 12ರಂದು ಮುಂಬಯಿ “ವಾಸಿ’ ಕೋಲ್ಡ್‌ ಸ್ಟೋರೇಜ್‌ಗೆ ಬಂಕಾಪುರದಿಂದ ಲಾರಿಯಲ್ಲಿ ಮೆಣಸಿನಕಾಯಿ ಲೋಡ್‌ ಮಾಡಿಕೊಂಡು ಹೋಗಿದ್ದನು. ಈತ ಮುಂಬಯಿಗೆ ಹೋಗಿ ಬಂದ ಸುದ್ದಿ ಅರಿತ ಸ್ಥಳೀಯರು ಆತನಿಗೆ ಆರೋಗ್ಯ ತಪಾಸಣೆ ಮಾಡಿಕೊಳ್ಳಲು ಒತ್ತಾಯಿಸಿದರು. ಜನರ ಒತ್ತಾಯದ ಮೇರೆಗೆ ಆತ ಮೇ 19 ರಂದು ಸ್ವಯಂ ಆಗಿ ಬಂದು ಪರೀಕ್ಷೆಗಾಗಿ ಗಂಟಲು ದ್ರವ ನೀಡಿ ಹೋಗಿದ್ದನು. ವರದಿ ಬರುವ ಮೊದಲೇ ಬೆಂಗಳೂರಿಗೆ ಅನಾನಸ್‌ ಲೋಡ್‌ ಮಾಡಿಕೊಂಡು ಹೋಗಿದ್ದಾನೆ. ಶುಕ್ರವಾರ ಬೆಳಗ್ಗೆ ವರದಿ ಪಾಸಿಟಿವ್‌ ಬರುತ್ತಿದ್ದಂತೆ ಆತನನ್ನು ಬೆಂಗಳೂರಿನಿಂದ ಹಾವೇರಿಗೆ ಕರೆದುಕೊಂಡು ಬರಲಾಗುತ್ತಿದೆ. ಉಳಿದೆರಡು ಪ್ರಕರಣಗಳಲ್ಲಿ ಟ್ರಾವೆಲ್‌ ಹಿಸ್ಟರಿ ಸ್ಪಷ್ಟವಾಗಿದ್ದು, ಒಂದು ಪ್ರಕರಣದ ಪೂರ್ಣ ಹಿಸ್ಟರಿ ಈವರೆಗೆ ಗೊತ್ತಾಗಿಲ್ಲ. ಹೀಗಾಗಿ ಈ ಸೋಂಕಿತನಿಂದ ಯಾರಿಗೆಲ್ಲ ಕ್ವಾರಂಟೈನ್‌ ಮಾಡಬೇಕು ಎಂಬುದು ಹಿಸ್ಟರಿ ತಿಳಿದಾಗಲೇ ಗೊತ್ತಾಗಬೇಕಿದೆ.

ಲಕ್ಷಣಗಳು ಇರಲಿಲ್ಲ… :  ಪಿ-1691 ಸೋಂಕಿತನಿಗೆ ಕೋವಿಡ್  ಲಕ್ಷಣಗಳು ಇರಲಿಲ್ಲ. ಹಾಗಾಗಿ ಆತ ಆರಾಮಾಗಿದ್ದನು. ಆದರೆ, ಈತ ಮುಂಬಯಿಗೆ ಹೋಗಿ ಬಂದಿರುವ ಮಾಹಿತಿ ಇದ್ದ ಸ್ಥಳೀಯರು ಹಾಗೂ ರೂಮ್‌ ಬಾಡಿಗೆ ಕೊಟ್ಟವರು ಆರೋಗ್ಯ ತಪಾಸಣೆಗೆ ಒತ್ತಾಯಿಸಿದ್ದರು. ಅವರ ಒತ್ತಾಯದ ಮೇರೆಗೆ ಮೇ 19 ರಂದು ಸರ್ಕಾರಿ ಆಸ್ಪತ್ರೆಗೆ ಬಂದು ಪರೀಕ್ಷೆಗಾಗಿ ಗಂಟಲು ದ್ರವ ಕೊಟ್ಟು ಹೋಗಿದ್ದನು. ಸ್ವಯಂ ಆಗಿ ಬಂದು ತಪಾಸಣೆ ಮಾಡಿಕೊಂಡರೆ ಅವರನ್ನು ಕ್ವಾರಂಟೈನ್‌ ಮಾಡುವುದಿಲ್ಲ. ಮಾದರಿಯನ್ನು ನೇರವಾಗಿ ಬೆಂಗಳೂರು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಶುಕ್ರವಾರ ಬೆಳಗ್ಗೆ ವರದಿ ಪಾಸಿಟಿವ್‌ ಬಂದಿದೆ. ಇದರ ಬಗ್ಗೆ ಅರಿವಿಲ್ಲದ ಆತ ಅನಾನಸ್‌ ಲೋಡ್‌ ಮಾಡಿಕೊಂಡು ಬೆಂಗಳೂರಿಗೆ ಹೋಗಿದ್ದು ಆತನನ್ನು ಪೊಲೀಸರ ಸಹಾಯದಿಂದ ಹಾವೇರಿಗೆ ಕರೆತರಲಾಗುತ್ತಿದೆ. ವಿಚಾರಣೆಯಿಂದಷ್ಟೇ ಆತನ ಟ್ರಾವೆಲ್‌ ಹಿಸ್ಟರಿ ಗೊತ್ತಾಗಬೇಕಿದೆ.  – ಯೋಗೇಶ್ವರ, ಅಪರ ಜಿಲ್ಲಾಧಿಕಾರಿ.

ಟಾಪ್ ನ್ಯೂಸ್

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

11

Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

accident

Kundapura: ಕಾರು ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.