ರಾಯಚೂರು ವಿವಿಗೆ ಮಹರ್ಷಿ ವಾಲ್ಮೀಕಿ ಹೆಸರಿಡಿ
Team Udayavani, May 23, 2020, 6:04 AM IST
ರಾಯಚೂರು: ನೂತನವಾಗಿ ಸ್ಥಾಪಿಸುತ್ತಿರುವ ರಾಯಚೂರು ವಿಶ್ವವಿದ್ಯಾಲಯಕ್ಕೆ ಆದಿಕವಿ ಮಹರ್ಷಿ ವಾಲ್ಮೀಕಿ ಹೆಸರಿಡುವಂತೆ ರಾಯಚೂರು ಜಿಲ್ಲಾ ವಾಲ್ಮೀಕಿ ನಾಯಕ ಸಂಘ ಒತ್ತಾಯಿಸಿದೆ.
ಈ ಕುರಿತು ಶುಕ್ರವಾರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ರಾಜ್ಯದಲ್ಲಿ ವಾಲ್ಮೀಕಿ ಸಮಾಜ ದೊಡ್ಡ ಪ್ರಮಾಣದಲ್ಲಿದ್ದು, ಈ ಭಾಗದಲ್ಲಿ ಹೆಚ್ಚು ಜನರಿದ್ದಾರೆ. ಮಹರ್ಷಿ ವಾಲ್ಮೀಕಿ ರಾಮಾಯಣದಂಥ ಮಹಾಗ್ರಂಥ ರಚಿಸುವ ಮೂಲಕ ಮನುಕುಲಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಅಂಥ ಮಹಾನ್ ವ್ಯಕ್ತಿಯ ಹೆಸರಿಡುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕು ಎಂದರು.
ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ 5 ಪರಿಶಿಷ್ಟ ಪಂಗಡ ವಿಧಾನಸಭೆಗಳ ಮೀಸಲಾಗಿದ್ದು, ಲೋಕಸಭಾ ಕ್ಷೇತ್ರ ಕೂಡ ಇದೇ ಸಮುದಾಯಕ್ಕೆ ಮೀಸಲಾಗಿದೆ. ಎರಡು ಜಿಲ್ಲೆಗಳಲ್ಲಿ ಸುಮಾರು ಶೇ.45 ಜನ ಎಸ್‌ಟಿ ಸೇರಿದ್ದಾರೆ. ಈ ನಿಟ್ಟಿನಲ್ಲಿ ರಾಯಚೂರು ವಿಶ್ವವಿದ್ಯಾಲಯಕ್ಕೆ ಆದಿಕವಿ ಮಹರ್ಷಿ ವಾಲ್ಮೀಕಿ ಹೆಸರಿಡುವುದೇ ಸೂಕ್ತ ಎಂದು ಒತ್ತಾಯಿಸಿದರು.
ಸಂಘಟನೆ ಮುಖಂಡದಾದ ಕೆ. ಶಿವಕುಮಾರ್ ನಾಯಕ್, ಹನುಮೇಶ್ ನಾಯಕ್, ಸಿ.ಕೆ. ಬಸವರಾಜ ನಾಯಕ್ ಇತರರಿದ್ದರು. ಇನ್ನೂ ಇದೇ ವಿಚಾರವಾರ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ವಾಲ್ಮೀಕಿ ಸಮುದಾಯದ ಮಹಿಳಾ ಮುಖಂಡರು ಕೂಡ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಿದರು. ಡಾ. ಶಾರದಾ ಹುಲಿ ನಾಯಕ, ಸೀತಮ್ಮ, ಡುಳ್ಳಮ್ಮ, ರೂಪನಾಯಕ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.