ನ್ಯೂಡಲ್ಸ್- ಲೆಮನ್ ಜ್ಯೂಸಿಗೆ ಬೇಡಿಕೆ ಇಟ್ಟ ಕ್ವಾರಂಟೈನರ್
Team Udayavani, May 23, 2020, 6:28 AM IST
ಕೊಟ್ಟಿಗೆಹಾರ: ಬಣಕಲ್‌ನ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಕ್ವಾರಂಟೈನ್ ಕೇಂದ್ರ ತೆರೆದಿದ್ದು ಶುಕ್ರವಾರ ಮಾಕೋನಹಳ್ಳಿಯ 7 ಮಂದಿಯನ್ನು ಕ್ವಾರಂಟೈನ್‌ಗೆ ಕರೆತರಲಾಗಿತ್ತು.
ಕ್ವಾರಂಟೈನರ್‌ನಲ್ಲಿರುವ ಕೆಲವರು ನ್ಯೂಡಲ್ಸ್, ಲೆಮನ್ ಜ್ಯೂಸ್, ಬ್ರೆಡ್ ಟೋಸ್ಟ್ ಬೇಕೆಂದು ಬೇಡಿಕೆ ಇಟ್ಟಿದ್ದು ಕ್ವಾರಂಟೈನ್‌ನ ಅಧಿಕಾರಿಗಳು ಹುಬ್ಬೇರಿಸುವಂತೆ ಮಾಡಿದ್ದರು. ನಂತರ ಹೊಟೇಲ್ ಕ್ವಾರಂಟೈನ್‌ನಲ್ಲಿ ಇರುತ್ತೇವೆ ಎಂದು ಕೆಲವರು ಪಟ್ಟು ಹಿಡಿದಿದ್ದು, ಅಧಿಕಾರಿಗಳು ಇಲ್ಲಿನ ಕ್ವಾರಂಟೈನ್ ಕೇಂದ್ರದಲ್ಲಿ ಎಲ್ಲಾ ಮೂಲ ಸೌಕರ್ಯಗಳಿವೆ ಎಂದು ಕ್ವಾರಂಟೈನ್ ನಲ್ಲಿ ಇರುವವರ ಮನವೊಲಿಸಲು ಪ್ರಯತ್ನಿಸಿದ್ದರು.
ಆದರೆ ಸಂಜೆಯ ವೇಳೆಗೆ ಬಣಕಲ್ ಕ್ವಾರಂಟೈನ್‌ನಲ್ಲಿದ್ದವರ 7 ಮಂದಿಯನ್ನು ಮೂಡಿಗೆರೆ ಗಿರಿದರ್ಶಿನಿ ಹಾಸ್ಟೆಲ್‌ಗೆ ಸ್ಥಳಾಂತರಿಸಲಾಗಿದ್ದು ಎಲ್ಲಾ ಮೂಲ ಸೌಕರ್ಯಗಳಿದ್ದರೂ ಬಣಕಲ್ ಕ್ವಾರಂಟೈನ್‌ನಿಂದ ಮೂಡಿಗೆರೆ ಕ್ವಾರಂಟೈನ್ ಕೇಂದ್ರಕ್ಕೆ ಸ್ಥಳಾಂತರ ಮಾಡಿರುವುದು ಸಾರ್ವಜನಿಕರಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ತಾಲೂಕು ಕಾರ್ಯ ನಿರ್ವಹಣಾಧಿಕಾರಿ ಎಂ. ವೆಂಕಟೇಶ್, ಇನ್ನೊಂದು ತಂಡ ಬಣಕಲ್ ನ ಕ್ವಾರಂಟೈನ್ ಕೇಂದ್ರ ಬರುವುದರಿಂದ ಈಗ ಇರುವ 7 ಮಂದಿಯನ್ನು ಮೂಡಿಗೆರೆಯ ಗಿರಿದರ್ಶಿನಿ ಹಾಸ್ಟೆಲ್‌ನ ಕ್ವಾರಂಟೈನ್‌ಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ
Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.