ಮುಗದದಲ್ಲಿ ಶೈಕ್ಷಣಿಕ ಕ್ರಾಂತಿಗೆ ಸಂಕಲ್ಪ: ಹೊರಟ್ಟಿ
Team Udayavani, May 23, 2020, 7:22 AM IST
ಹುಬ್ಬಳ್ಳಿ: ಮುಗದ ಗ್ರಾಮದಲ್ಲಿ ಶೈಕ್ಷಣಿಕ ಕ್ರಾಂತಿ ಮಾಡಲು ಸಂಕಲ್ಪ ಮಾಡಿದ್ದೇನೆಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.
ಧಾರವಾಡ ತಾಲೂಕು ಮುಗದ ಗ್ರಾಮದ ಹನಮಂತಪ್ಪ ಮಾವಳೇರ ಪ್ರೌಢಶಾಲೆ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರೌಢಶಾಲೆಗಾಗಿ ಅಂದು ಭೂದಾನ ಮಾಡಿದ ಹನಮಂತಪ್ಪ ಮಾವಳೇರ ಅವರ ಶೈಕ್ಷಣಿಕ ಎಲ್ಲ ಆಶೋತ್ತರಗಳನ್ನು ಈಡೇರಿಸಲು ಪಣ ತೊಡುತ್ತೇನೆ. ಮುಧೋಳ ತಾಲೂಕು ಯಡಳ್ಳಿ ಗ್ರಾಮದಲ್ಲಿ ನಮ್ಮ ತಂದೆ ಶಿವಲಿಂಗಪ್ಪ ಎಸ್. ಹೊರಟ್ಟಿ ಹೆಸರಿನಲ್ಲಿ 8 ಎಕರೆ ಜಮೀನನ್ನು ಸರಕಾರಕ್ಕೆ ದಾನ ಮಾಡಿ 20 ಕೋಟಿ ರೂ. ಖರ್ಚು ಮಾಡಿ ರಾಜ್ಯದಲ್ಲಿಯೇ ಮಾದರಿ ಶಾಲೆಯನ್ನಾಗಿ ಮಾಡಿದ್ದೇನೆ. ಇದನ್ನು ಮೀರಿ ಗ್ರಾಮದಲ್ಲಿ ಶೈಕ್ಷಣಿಕ ಕ್ರಾಂತಿ ಮಾಡುವ ಸಂಕಲ್ಪ ಹೊಂದಿದ್ದೇನೆ ಎಂದರು.
ಶಾಸಕ ಸಿ.ಎಂ. ನಿಂಬಣ್ಣವರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರೋಟರಿ ಕ್ಲಬ್ ಅಧ್ಯಕ್ಷ ಡಾ| ಕವನ ದೇಶಪಾಂಡೆ, ಕಲ್ಲಪ್ಪ ಹಟ್ಟಿ, ಗ್ರಾಪಂ ಅಧ್ಯಕ್ಷ ಬಸವರಾಜ ಕಲಕೇರಿ, ರುದ್ರಪ್ಪ ಕೊಂಪಣ್ಣವರ, ಕಲ್ಲಪ್ಪ ಹಟ್ಟಿ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.