ಕಲ್ಲೂರ ಗ್ರಾಮ ಸೀಲ್‌ಡೌನ್
Team Udayavani, May 23, 2020, 10:09 AM IST
ರಾಮದುರ್ಗ: ತಾಲೂಕಿನ ಮುಳ್ಳೂರ ಗ್ರಾಮ ಪಂಚಾಯತ ವ್ಯಾಪ್ತಿಯ ಕಲ್ಲೂರ ಗ್ರಾಮದಲ್ಲಿ 7 ತಿಂಗಳ ಹೆಣ್ಣು ಮಗುವಿಗೆ ಗುರುವಾರ ಕೊವೀಡ್ -19 ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕಲ್ಲೂರ ಗ್ರಾಮವನ್ನು ಕಂಟೈನ್‌ಮೆಂಟ್ ಝೋನ್ ಎಂದು ಜಿಲ್ಲಾಧಿಕಾರಿಗಳು ಘೋಷಿಸಿದ್ದು, ಅಧಿಕಾರಿಗಳು ಶುಕ್ರವಾರ ಗ್ರಾಮಕ್ಕೆ ಭೇಟಿ ನೀಡಿ ಕಟ್ಟು ನಿಟ್ಟಿನ ಕ್ರಮಗಳನ್ನು ಜಾರಿ ಮಾಡಿದ್ದಾರೆ.
ಸಹಾಯಕ ಪೊಲೀಸ್ ಅಧೀಕ್ಷಕ ಅಮರನಾಥ ರೆಡ್ಡಿ, ಉಪ ವಿಭಾಗಾಧಿಕಾರಿ ಶಿವಾನಂದ ಭಜಂತ್ರಿ, ತಹಶೀಲ್ದಾರ್ ಗಿರೀಶ್ ಸ್ವಾದಿ, ಡಿವೈಎಸ್‌ಪಿ ಶಂಕರಗೌಡ ಪಾಟೀಲ, ಸಿಪಿಐ ಲಖನ್‌ಮಸಗುಪ್ಪಿ, ಪಿಎಸ್‌ಐ ಆನಂದ ಡೋಣಿ, ತಾಲೂಕಾ ವೈದ್ಯಾಧಿಕಾರಿ ಮಹೇಶ ಚಿತ್ತರಗಿ ಗ್ರಾಮಕ್ಕೆ ಭೇಟಿ ನೀಡಿ ಸಭೆ ನಡೆಸಿದರು. ಗ್ರಾಮವನ್ನು ಸಂಪೂರ್ಣ ಸೀಲ್‌ಡೌನ್ ಮಾಡಿ ಮನೆ ಬಿಟ್ಟು ಹೊರಗೆ ಬರದಂತೆ ಅಧಿಕಾರಿಗಳು ಗ್ರಾಮಸ್ಥರಿಗೆ ತಾಕೀತು ಮಾಡಿದರು.
ಕಲ್ಲೂರ ಗ್ರಾಮದಿಂದ ಬೇರೆ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಎಲ್ಲ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಗ್ರಾಮದ ಮೂಲಕ ಹಾಯ್ದು ಹೋಗುವ ವಾಹನಗಳಿಗೂ ಅಧಿಕಾರಿಗಳು ನಿರ್ಬಂಧ ಹೇರಿದ್ದಾರೆ. ಕಂಟೈನ್‌ಮೆಂಟ್ ಝೋನ್ ಘೋಷಣೆ ಕಾರಣದಿಂದಾಗಿ ಗ್ರಾಮದಲ್ಲಿ ಈಗಾಗಲೇ ನಡೆಸಲು ಉದ್ದೇಶಿಸಿರುವ ಎಲ್ಲ ಕಾರ್ಯಕ್ರಮಗಳು, ಮದುವೆ, ಸಭೆ, ಸಮಾರಂಭಗಳನ್ನು ರದ್ದುಗೊಳಿಸಬೆಕು ಎಂದು ಅಧಿಕಾರಿಗಳು ಸೂಚಿಸಿದರು. ಗ್ರಾಮಸ್ಥರಿಗೆ ಅಗತ್ಯ ವಸ್ತುಗಳನ್ನು ತಲುಪಿಸುವ ನಿಟ್ಟಿನಲ್ಲಿ ಮೂರು ದಿನಕ್ಕೊಮ್ಮೆ ತರಕಾರಿ, ಹಾಲು ವಿತರಣೆ ಆಗಲಿದೆ.
ಇದರ ಜೊತೆಗೆ ಅಂಗನವಾಡಿ ಮಕ್ಕಳಿಗೆ ಮನೆ ಮನೆಗೆ ಕಿಟ್ ನೀಡಲು ಅಧಿಕಾರಿಗಳು ಸೂಚನೆ ನೀಡಿದರು. ಹಳ್ಳಿಯ ಜನ ಹೊಲ ಗದ್ದೆಗಳಿಗೆ ಹೋಗಲು ಅವಕಾಶ ಮಾಡಿಕೊಡಬೇಕು ಎಂದು ಜಿಲ್ಲಾ ಪಂಚಾಯತ ಸದಸ್ಯ ರೇಣಪ್ಪ ಸೋಮಗೊಂಡ ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
Belagavi: ಯುವಕನ ಮೇಲೆ ಗುಂಡಿನ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ
BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.