ವಲಸಿಗರಿಗೆ ಪಡಿತರ ವಿತರಣೆ


Team Udayavani, May 23, 2020, 10:31 AM IST

ವಲಸಿಗರಿಗೆ ಪಡಿತರ ವಿತರಣೆ

ಬೆಳಗಾವಿ: ಕೋವಿಡ್‌-19 ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಆತ್ಮನಿರ್ಭರ್‌ ಭಾರತ್‌ ಯೋಜನೆಯಡಿ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆ ಮತ್ತು ಸಾರ್ವಜನಿಕ ವಿತರಣಾ ಪದ್ಧತಿ ಮೂಲಕ ಪಡಿತರ ಚೀಟಿ ಇಲ್ಲದೇ ಇರುವ ವಲಸಿಗರಿಗೆ ಮೇ ಮತ್ತು ಜೂನ್‌ ತಿಂಗಳಲ್ಲಿ ಪ್ರತಿ ವ್ಯಕ್ತಿಗೆ ಉಚಿತವಾಗಿ 5 ಕೆಜಿ. ಅಕ್ಕಿ ಹಾಗೂ ಕೇಂದ್ರ ಸರ್ಕಾರದ ಹಂಚಿಕೆ ಅನುಸಾರ ಕಡಲೆಕಾಳು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ| ಎಸ್‌.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ವಲಸಿಗರಿಗೆ ಷರತ್ತುಗಳನ್ವಯ ಮೇ ಮತ್ತು ಜೂನ್‌ ತಿಂಗಳಲ್ಲಿ ಆಹಾರ ಧಾನ್ಯ ವಿತರಿಸಲಾಗುವುದು. ಒಂದು ರಾಜ್ಯದಿಂದ ಮತ್ತೂಂದು ರಾಜ್ಯಕ್ಕೆ ಹಾಗೂ ಒಂದು ಜಿಲ್ಲೆಯಿಂದ ಮತ್ತೂಂದು ಜಿಲ್ಲೆಗೆ ಜೀವನ ನಿರ್ವಹಣೆಗೆ ಹೋಗುವವರನ್ನು ವಲಸಿಗರೆಂದು ಪರಿಗಣಿಸಲಾಗುತ್ತದೆ. ಜಿಲ್ಲೆಯಲ್ಲಿನ ವಲಸಿಗ ಫಲಾನುಭವಿಯು ಯಾವುದೇ ರಾಜ್ಯದ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಪಡಿತರ ಚೀಟಿ ಹೊಂದಿರುವ ಫಲಾನುಭವಿ ಯಾಗಿರಬಾರದು. ಆಹಾರ ಧಾನ್ಯ ಪಡೆಯಬಯಸುವ ಫಲಾನುಭವಿ ತನ್ನ ಆಧಾರ್‌ ಸಂಖ್ಯೆಯನ್ನು ಕಡ್ಡಾಯವಾಗಿ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ನೀಡಬೇಕು ಎಂದು ತಿಳಿಸಿದ್ದಾರೆ.

ನ್ಯಾಯಬೆಲೆ ಅಂಗಡಿಯವರು ತಂತ್ರಾಂಶದನ್ವಯ ಪರಿಶೀಲಿಸಿ ವಲಸಿಗ ಫಲಾನಭವಿಯು ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ದೇಶದ ಯಾವದೇ ಭಾಗದಲ್ಲಿಯೂ ಪಡಿತರ ಚೀಟಿ ಹೊಂದಿಲ್ಲವೆಂದು ಖಾತ್ರಿಪಡಿಸಿಕೊಂಡ ಬಳಿಕ ಪಡಿತರ ವಿತರಣೆ ಮಾಡಲಾಗುತ್ತದೆ. ವಲಸಿಗ ಫಲಾನುಭವಿಯ ಮೊಬೆ„ಲ್‌ ಸಂಖ್ಯೆಗೆ ತಂತ್ರಾಂಶದ ಮೂಲಕ ಆಧಾರ್‌ ಸಂಖ್ಯೆ ಆಧಾರಿತ ಒಟಿಪಿ ಕಳುಹಿಸಲಾಗುವುದು. ಒಟಿಪಿ ಸಂಖ್ಯೆಯನ್ನು ಆಧರಿಸಿ ಪಡಿತರ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಜಿಲ್ಲೆಯ ವಲಸಿಗ ಫಲಾನುಭವಿಯು ಸ್ವಂತ ಮನೆ ಹೊಂದಿರಬಾರದು ಹಾಗೂ ಆದಾಯ ತೆರಿಗೆ ಪಾವತಿಸುವವರು ಆಗಿರಬಾರದು. ಲಾಕ್‌ಡೌನ್‌ ಹಿನ್ನೆಲೆಯಲ್ಲಿ ವಲಸಿಗರಿಗೆ ಒದಗಿಸುವ ಸೌಲಭ್ಯವನ್ನು ತಪ್ಪು ಮಾಹಿತಿ ನೀಡಿ, ಆಹಾರಧಾನ್ಯ ಪಡೆದುಕೊಂಡಲ್ಲಿ, ವಿಪತ್ತು ನಿರ್ವಹಣಾ ಕಾಯ್ದೆ-2005ರನ್ವಯ ದಂಡ ಅಥವಾ ದಂಡದ ಜೊತೆಗೆ ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಡಿಸಿ ಎಚ್ಚರಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

President  ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್‌ ಆಸ್ಪತ್ರೆ ಉದ್ಘಾಟನೆ

President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್‌ ಆಸ್ಪತ್ರೆ ಉದ್ಘಾಟನೆ

ಮಗಳ ಮೇಲೆ ಎರಗಳು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ

ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ

Butterfly Park: ಬೆಳಗಾವಿಯ ಹಿಡಕಲ್‌ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್‌

Butterfly Park: ಬೆಳಗಾವಿಯ ಹಿಡಕಲ್‌ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

6

Manipal: ಅಪಾಯಕಾರಿ ರೀತಿಯಲ್ಲಿ ಬೈಕ್‌ ಚಾಲನೆ; ಪ್ರಕರಣ ದಾಖಲು

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

de

Kundapura: ಗುಲ್ವಾಡಿ; ಗಾಯಾಳು ಸಾವು

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.