ವಿವಾಹ ಸಮಾರಂಭಕ್ಕೆ 50 ಅತಿಥಿಗಳ ಮಿತಿ
Team Udayavani, May 23, 2020, 11:43 AM IST
ಗದಗ: ಕೋವಿಡ್-19 ಸೋಂಕು ನಿಯಂತ್ರಣದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದೇಶಾದ್ಯಂತ ಜಾರಿಗೊಳಿಸಿದ ಪ್ರತಿಬಂಧಕಗಳನ್ನು ಹಂತಹಂತವಾಗಿ ಸಡಿಲಗೊಳಿಸಿದ್ದು, ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳಬಹುದಾದ ಅತಿಥಿಗಳ ಸಂಖ್ಯೆಯನ್ನು 50ಕ್ಕೆ ಮಿತಿಗೊಳಿಸಿ ಆದೇಶಿಸಲಾಗಿದೆ.
ವಿವಾಹ ನಡೆಯುವ ಸ್ಥಳದಲ್ಲಿ ಉತ್ತಮ ಗಾಳಿ, ಬೆಳಕಿಗೆ ಅವಕಾಶ ಇರಬೇಕು. ಕಂಟೈನ್ಮೆಂಟ್ ವಲಯದ ವ್ಯಕ್ತಿಗಳು, 65 ವರ್ಷ ಮೇಲ್ಪಟ್ಟವರು, ಗರ್ಭಿಣಿಯರು ಹಾಗೂ 10 ವರ್ಷದೊಳಗಿನ ಮಕ್ಕಳು, ಜ್ವರ, ಶೀತ, ಕೆಮ್ಮು ಉಸಿರಾಟದ ತೊಂದರೆಯಿಂದ ಬಳಲುತ್ತಿರುವವರಿಗೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಅವಕಾಶವಿಲ್ಲ. ವಿವಾಹ ಸಮಾರಂಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಕೈ ತೊಳೆಯುವ ಸ್ಥಳಗಳಲ್ಲಿ, ಶೌಚಾಲಯಗಳಲ್ಲಿ ಹ್ಯಾಂಡ್ ವಾಶ್, ಟಿಶ್ಯು ಪೇಪರ್ ಮತ್ತು ನೀರು ಪೂರೈಕೆ ಮಾಡಬೇಕು. ಮದ್ಯಪಾನ, ಪಾನ್ ಗುಟ್ಕಾ, ತಂಬಾಕು ಸೇವನೆ ನಿಷೇಧಿಸಬೇಕು. ವಿವಾಹ ಸ್ಥಳದಲ್ಲಿ ಸ್ವಚ್ಛತೆ ಮತ್ತು ಆರೋಗ್ಯಕರ ಪರಿಸರವಿರಬೇಕು. ಕೈಗೊಂಡಿರುವ ವ್ಯವಸ್ಥೆಗಳ ಬಗ್ಗೆ ನೇಮಿಸಿದ ನೋಡಲ್ ವ್ಯಕ್ತಿ ಮೇಲ್ವಿಚಾರಣೆ ಮಾಡಬೇಕು. ಸಮಾರಂಭದಲ್ಲಿ ಪಾಲ್ಗೊಂಡವರ ಹೆಸರು, ಸಂಪರ್ಕ ಸಂಖ್ಯೆ ಸಂಗ್ರಹಿಸಬೇಕು. ಭಾಗವಹಿಸುವ ಎಲ್ಲ ಅತಿಥಿಗಳು ಆರೋಗ್ಯ ಸೇತು ಆ್ಯಪ್ ಹೊಂದಿರಬೇಕು. ಕೋವಿಡ್ ಸಂಬಂಧಿತ ಯಾವುದೇ ಮಾಹಿತಿಗೆ ಸಹಾಯವಾಣಿ ಸಂಖ್ಯೆ 9745697456, 080- 4684600, 080-66692000 ಮತ್ತು ಆಪ್ತ ಮಿತ್ರ 14410 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ
Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ
Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ
Mangaluru: ಎಂಸಿಸಿ ಬ್ಯಾಂಕ್ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ
Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.