ಶಿಕ್ಷಕ-ಉಪನ್ಯಾಸಕರಿಗೆ ಪ್ಯಾಕೇಜ್ ಘೋಷಿಸಿ
Team Udayavani, May 23, 2020, 2:28 PM IST
ಕೊಪ್ಪಳ: ರಾಜ್ಯದಲ್ಲಿ ಕಾರ್ಯ ನಿರ್ವಹಿಸುವ ಅತಿಥಿ ಉಪನ್ಯಾಸಕರು ಹಾಗೂ ಖಾಸಗಿ ಶಾಲಾ-ಕಾಲೇಜಿನಲ್ಲಿ ಕಾರ್ಯ ನಿರ್ವಹಿಸುವ ಶಿಕ್ಷಕರಿಗೆ ಸರ್ಕಾರ ಪ್ಯಾಕೇಜ್ ಘೋಷಿಸಬೇಕೆಂದು ಆಗ್ರಹಿಸಿ ಶಿಕ್ಷಣ ಉಳಿಸಿ ಹೋರಾಟ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿ ಮೂಲಕ ಪ್ರಾಥಮಿಕ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದರು.
ಲಾಕ್‌ಡೌನ್ ಅವಧಿಯಲ್ಲಿ ಸಂಬಳ ನೀಡುವುದಿರಲಿ, ಹಲವಾರು ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳು ಎಷ್ಟೋ ತಿಂಗಳುಗಳಿಂದ ಉಪನ್ಯಾಸಕ ಹಾಗೂ ಶಿಕ್ಷಕರಿಗೆ ವೇತನವನ್ನೇ ನೀಡಿಲ್ಲ. ಇದರಿಂದ ಅವರ ಕುಟುಂಬ ನಿರ್ವಹಣೆ ಕಷ್ಟವಾಗುತ್ತಿದೆ. ಈ ಕೂಡಲೇ, ಖಾಸಗಿ ಶಾಲೆಗಳು, ಕಾಲೇಜುಗಳು, ವೃತ್ತಿಪರ ಮತ್ತು ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಪರಿಹಾರದ ಪ್ಯಾಕೇಜ್ ಘೋಷಿಸಬೇಕು. ಸರ್ಕಾರಿ ಮತ್ತು ಅನುದಾನಿತ ಶಾಲಾ ಕಾಲೇಜುಗಳಲ್ಲಿ ದುಡಿಯುತ್ತಿರುವ ಅತಿಥಿ ಬೋಧಕ ಸಿಬ್ಬಂದಿಗೆ ಪರಿಹಾರದ ಪ್ಯಾಕೇಜ್ ಘೋಷಿಸಬೇಕು. ಖಾಸಗಿ ಶಾಲಾಕಾಲೇಜುಗಳ ಎಲ್ಲಾ ಬೋಧಕೇತರ ಸಿಬ್ಬಂದಿಗೆ ಪರಿಹಾರ ನಿನೀಡಬೇಕು. ಲಾಕ್‌ಡೌನ್ ಅವಧಿಯಲ್ಲಿ ವೇತನ ನೀಡುವುದನ್ನು ಖಾತ್ರಿಪಡಿಸಿ, ಸಂಬಳ ತಡೆ ಹಿಡಿಯದಂತೆ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಬೇಕು. ಎಲ್ಲ ಶಿಕ್ಷಣ ಸಂಸ್ಥೆಗಳ ಬೋಧಕರು, ಉಪನ್ಯಾಸಕರು, ಅತಿಥಿ ಉಪನ್ಯಾಸಕರು, ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗೆ ಉದ್ಯೋಗ ಭದ್ರತೆ ಖಾತ್ರಿಪಡಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಶಿಕ್ಷಣ ಉಳಿಸಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಅಲ್ಲಮಪ್ರಭು ಬೆಟ್ಟದೂರು ಸೇರಿದಂತೆ ಇತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್
Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್ ಶಾಸಕ
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Explainer; ಡಾ. ಚಿದಂಬರಂ & ಡಾ. ರಾಜಾ ರಾಮಣ್ಣ;ಪರಮಾಣು ವಿಜ್ಞಾನವನ್ನೂ ಮೀರಿದ ನಾಯಕತ್ವ
Tumkur: ಮಧುಗಿರಿ ಡಿವೈಎಸ್ಪಿ ವಿರುದ್ಧ ಮತ್ತೊಬ್ಬ ಸಂತ್ರಸ್ತೆಯಿಂದ ವಿಡಿಯೋ ಆರೋಪ
Fraud Case: ಐಶ್ವರ್ಯಗೌಡ ವಂಚನೆ; ಸಂತಸ್ತರಿಗೆ ನ್ಯಾಯದ ಭರವಸೆ ನೀಡಿದ ಎಚ್‌ಡಿಕೆ
Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
Sarji sweet box case: ಲವ್ ಫೈಲ್ಯೂರ್ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.