ಕ್ವಾರಂಟೈನ್‌ನಲ್ಲಿದ್ದ 21 ತಬ್ಲೀಘಿಗಳು ಡಿಸ್ಚಾರ್ಜ್
Team Udayavani, May 23, 2020, 4:35 PM IST
ಹೊಳಲ್ಕೆರೆ: ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ವಸತಿನಿಲಯದಲ್ಲಿ ಕ್ವಾರಂಟೈನ್ ಮಾಡಲಾಗಿದ್ದ ತಬ್ಲೀಘಿಗಳನ್ನು ಬೀಳ್ಕೊಡಲಾಯಿತು.
ಹೊಳಲ್ಕೆರೆ: ಪಟ್ಟಣದ ಕಿತ್ತೂರುರಾಣಿ ಚೆನ್ನಮ್ಮ ವಸತಿನಿಲಯದಲ್ಲಿ ಕ್ವಾರಂಟೈನ್ ಮಾಡಲಾಗಿದ್ದ 21 ತಬ್ಲೀಘಿಗಳನ್ನು ಶುಕ್ರವಾರ ಡಿಸ್ಚಾರ್ಜ್ ಮಾಡಲಾಯಿತು. ಸೂರತ್ ತಬ್ಲೀಘಿ ಜಮಾತ್ ಧರ್ಮಸಭೆಯಲ್ಲಿ ಭಾಗವಹಿಸಿ ಮರಳಿದ್ದ ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳ 21 ತಬ್ಲೀಘಿಗಳನ್ನು ಪಟ್ಟಣದ ವಸತಿ ನಿಲಯದಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಗಂಟಲು ದ್ರವದ ವರದಿಯಲ್ಲಿ ವೈರಸ್ ಸೋಂಕು ಪತ್ತೆಯಾಗದ ಹಿನ್ನೆಲೆಯಲ್ಲಿ 14 ದಿನಗಳ ಕ್ವಾರಂಟೈನ್ ಬಳಿಕ 21 ಜನರನ್ನು ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ತಹಶೀಲ್ದಾರ್ ಕೆ. ನಾಗರಾಜ್, ಸಾರ್ವಜನಿಕರ ವಿರೋಧವಿದ್ದರೂ ಜಿಲ್ಲಾಡಳಿತದ ಆದೇಶದಂತೆ ತಬ್ಲೀಘಿ ಗಳನ್ನು ಉತ್ತಮವಾದ ಸೌಲಭ್ಯ ಕಲ್ಪಿಸಿ ಕ್ವಾರಂಟೈನ್ ಮಾಡಲಾಗಿತ್ತು. ಅವರೆಲ್ಲರೂ ಆರೋಗ್ಯಪೂರ್ಣರಾಗಿದ್ದಾರೆ ಎಂದರು. ತಾಲೂಕು ಆರೋಗ್ಯಾಧಿಕಾರಿ ಡಾ| ಜಯಸಿಂಹ ಮಾತನಾಡಿ, ಕ್ವಾರಂಟೈನ್ ನಂತರವೂ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಬೇಕು.ಇನ್ನಷ್ಟು ದಿನಗಳ ಕಾಲ ಹೋಂ ಕ್ವಾರಂಟೈನ್ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಪಪಂ ಮಾಜಿ ಸದಸ್ಯ ಹಬೀಬುರ್ ರೆಹಮಾನ್ ಮಾತನಾಡಿ, ಕ್ವಾರಂಟೈನ್‌ನಲ್ಲಿದ್ದವರಿಗೆ ಉತ್ತಮ ಸೌಲಭ್ಯ ಒದಗಿಸಿ ಚೆನ್ನಾಗಿ ನೋಡಿಕೊಂಡಿದ್ದಾರೆ. ಆದ್ದರಿಂದ ಈ ಸೇವೆಯನ್ನು ತಬ್ಲೀಘಿಗಳು ಸ್ಮರಿಸಿಕೊಳ್ಳಬೇಕೆಂದರು. ಪಪಂ ಮುಖ್ಯಾಧಿಕಾರಿ ಎ. ವಾಸಿಂ, ಡಾ| ಉಷಾ, ಡಾ| ಆನಂದ್, ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಶೇಖರ್, ಪಿಎಸ್‌ಐ ಡಿ.ಸಿ. ಸ್ವಾತಿ, ಮುತವಲ್ಲಿ ಅಲ್ತಾಫ್ ಬೇಗ್, ಇನಾಯತ್ ಉಲ್ಲಾ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.